ಸೇವಾ ಮನೋಭಾವ ಬೆಳೆಸಿಕೊಳ್ಳಲು ಶಿಕ್ಷಕರಿಗೆ ಕರೆ


Team Udayavani, Aug 18, 2017, 5:26 PM IST

gul service.jpg

ಜೇವರ್ಗಿ: ಮಕ್ಕಳಲ್ಲಿ ಹಾಗೂ ಯುವಜನರಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ತತ್ವದ ಆಧಾರದ ಮೇಲೆ ಶಿಸ್ತು ಹಾಗೂ
ರಾಷ್ಟ್ರೀಯತೆ ಬೆಳೆಸುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯವಾಗಿದೆ ಎಂದು ತಹಶೀಲ್ದಾರ ಯಲ್ಲಪ್ಪ ಸುಬೇದಾರ ಹೇಳಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಭಾರತ ಸೇವಾದಳ ತಾಲೂಕು ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 2017-18ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ಮಿಲಾಪ ಶಿಬಿರದಲ್ಲಿ ಹಡೇìಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಭಾರತ ಸೇವಾದಳಯುವಕರನ್ನು ಆದರ್ಶ ನಾಗರಿಕರನ್ನಾಗಿ ಮಾಡಲು ಸಂಯಮ, ಧೈರ್ಯ, ತ್ಯಾಗ, ಸರಳತೆ, ಸೇವೆ, ತಾಳ್ಮೆ, ಸಹಕಾರ ಮತ್ತು ಪೂರ್ಣ ಸೇವಾ ಮನೋಭಾವ ಮೂಡಿಸುತ್ತದೆ. ಅಲ್ಲದೇ ಶಿಕ್ಷಣದ ಮೂಲಕ ಜನರ ಆರೋಗ್ಯ ಮತ್ತು ಶಾರೀರಿಕ ದೃಢತೆ ಬಳಗೊಳಿಸುತ್ತದೆ. ಜಾತೀಯ ಮತ್ತು ವರ್ಣೀಯ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸೇವೆ ಸಲ್ಲಿಸಿ ರಾಷ್ಟ್ರೀಯತೆ ಹೆಚ್ಚಿಸುತ್ತದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಭಾರತ
ಸೇವಾದಳದಲ್ಲಿ ಪ್ರತಿಯೊಬ್ಬರೂ ಸೇವೆ ಸಲ್ಲಿಸಬೇಕು ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ
ಕಾರ್ಯಕ್ರಮ ಉದ್ಘಾಟಿಸಿದರು. ಭಾರತ ಸೇವಾ ದಳದ ಅಧ್ಯಕ್ಷ ರಾಜಶೇಖರ ಸೀರಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ವಸಂತರಾವ ನರಿಬೋಳ ಅವರ ಪದಗ್ರಹಣ ನೆರವೇರಿಸಿದರು. ಭಾರತ ಸೇವಾದಳದ ರಾಜ್ಯ ಉಪಾಧ್ಯಕ್ಷ ಶಿವಶರಣಪ್ಪ ಜಂಬೇರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಲಿಂಗರಾಜ ಮೂಲಿಮನಿ, ಡಾ| ಶಿವಲಿಂಗಪ್ಪ ಗೌಳಿ, ಕಾಲೇಜಿನ ಪ್ರಾಚಾರ್ಯ ಬಸವರಾಜ ಕೊಂಬಿನ್‌, ಅಬ್ದುಲ್‌ ರಹೇಮಾನ್‌ ಪಟೇಲ್‌, ಸುದರ್ಶನ ಆಲಬಾಳ, ಆಹಾರ ನಿರೀಕ್ಷಕ ಡಿ.ಬಿ. ಪಾಟೀಲ, ಹೇಮನೂರು ನಾಯಕ, ಮನೋಹರ ಕಾಮನಕೇರಿ, ಬಸವಂತ್ರಾಯ ಗಜಕೋಶ, ಜಿಲ್ಲಾ ಸಂಘಟಕ ಚಂದ್ರಶೇಖರ ಜಮಾದಾರ, ಡಾ| ಗಿರೀಶ ರಾಠೊಡ, ಡಾ| ವಿಷ್ಣುವರ್ಧನ, ಶಶಿಧರ ಯಡ್ರಾಮಿ, ಡಾ| ವಿನಾಯಕ, ಡಾ| ಕರಿಗೂಳೇಶ್ವರ, ವಿನೋದಕುಮಾರ, ಶಂಕರಲಿಂಗ ಕಲಶೆಟ್ಟಿ, ರವಿ ಕೋಳಕೂರ, ಮಹೇಶ ಬಸರಕೋಡ, ಅಮೃತ ಮಾಲಿಪಾಟೀಲ, ಮಲ್ಲನಗೌಡ ಕಲ್ಲೂರ, ಹಣಮಂತ್ರಾಯ ಕುಳಗೇರಿ, ಎಸ್‌. ಎಸ್‌. ಗೊಂಬಿಮಠ ಸೇರಿದಂತೆ ನೂರಾರು ಜನರು ಶಿಕ್ಷಕರು ಭಾಗವಹಿಸಿದ್ದರು. ತಾಲೂಕು  ನಾಯಕ ಲಾಲಪ್ಪ ನಾಯಕ ಸ್ವಾಗತಿಸಿದರು. ಶಿಕ್ಷಕ ಎಸ್‌.ಎಸ್‌. ಮಾಲಿಬಿರಾದಾರ ನಿರೂಪಿಸಿದರು. ಚಂದ್ರಶೇಖರ ಜಮಾದಾರ ವಂದಿಸಿದರು. 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.