ಸೊಳ್ಳೆ ಕಡಿತದಿಂದ ಎಚ್ಚರವಿರಲು ವೈದ್ಯಾಧಿಕಾರಿ ಸಲಹೆ


Team Udayavani, Aug 19, 2017, 11:02 AM IST

gulbarga 5.jpg

ವಾಡಿ: ಮಳೆಗಾಲದ ಸಂದರ್ಭವಿದ್ದು, ಎಲ್ಲೆಡೆ ಕೊಳೆ ಆವರಿಸಿಕೊಂಡು ನೈರ್ಮಲ್ಯ ವ್ಯವಸ್ಥೆ ಹದಗೆಡುತ್ತದೆ. ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ವಿವಿಧ ರೋಗಗಳಿಗೆ ಕಾರಣವಾಗುತ್ತದೆ. ಸಾರ್ವಜನಿಕರು ಸೊಳ್ಳೆ ಕಡಿತದಿಂದ ಎಚ್ಚರ ವಹಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ| ಸುರೇಶ ಮೇಕಿನ್‌ ಹೇಳಿದರು. ಪುರಸಭೆ ವತಿಯಿಂದ ಏರ್ಪಡಿಸಲಾಗಿದ್ದ ನೈರ್ಮಲ್ಯ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತಲಿನ ಪರಿಸರ ಅಸ್ವಚ್ಚತೆಯಿಂದ ಕೂಡಿದ್ದರೆ, ಅಂತಹ ಸ್ಥಳಗಳು ಸೊಳ್ಳೆಗಳ ಹುಟ್ಟುವಿಕೆಗೆ ಕಾರಣವಾಗುತ್ತವೆ. ಮಲೇರಿಯಾ, ಡೆಂಘೀ, ಚುಕೂನ್‌ಗುನ್ಯಾದಂತ ಸಾಂಕ್ರಾಮಿಕ ರೋಗಗಳು ಹರಡುವುದರಿಂದ ಕುಟುಂಬ ಸದಸ್ಯರಲ್ಲದೆ ಇಡೀ ಊರಿನಲ್ಲಿಯೇ ರೋಗದ ವಾತಾವರಣ ಸೃಷ್ಟಿಯಾಗುತ್ತದೆ. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಡೆಂಘೀ ಜ್ವರವು ಈಡಿಸ್‌ ಇಜಿಪ್ಟೈ ಎನ್ನುವ ಜಾತಿಯ ಸೊಳ್ಳೆಗಳ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುವ ವೈರಸ್‌ ಖಾಯಿಲೆಯಾಗಿದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸ ಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಡೆಂಘೀ ರೋಗದ ಲಕ್ಷಣವಾಗಿದೆ. ನಿರ್ಲಕ್ಷé ವಹಿಸಿದರೆ ಇದು ಜೀವಕ್ಕೆ ಅಪಾಯ ತರುವ ರೋಗವಾಗಿದೆ. ಸೊಳ್ಳೆ ಕಚ್ಚುವಿಕೆಯಿಂದ ವಿವಿದ ಥರಹದ ರೋಗಗಳು ಕಾಣಿಸಿಕೊಳ್ಳುತ್ತವೆ. ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ, ಜ್ವರ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು. ಮುಖ್ಯಾಧಿಕಾರಿ ಶಂಕರ ಡಿ.ಕಾಳೆ ಮಾತನಾಡಿ, ನೈರ್ಮಲ್ಯ ವ್ಯವಸ್ಥೆ ಕಾಪಾಡಲು ಪುರಸಭೆಯಿಂದ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ, ಪ್ರತಿ ವಾರ್ಡ್‌ಗಳಲ್ಲಿ ಫಾಗಿಂಗ್‌ ಮಾಡಿಸಲಾಗಿದೆ. ನಗರದ ಸ್ವತ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ರಾತ್ರಿ ವೇಳೆ ಮನೆಯೊಳಗೆ ಸೊಳ್ಳೆ ನಿಯಂತ್ರಕ ಬತ್ತಿಗಳನ್ನು ಉರಿಸಬೇಕು ಮತ್ತು ಸೊಳ್ಳೆ ಪರದೆ ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ತಿಳಿಸಿದರು. ಕಂದಾಯ ಅಧಿಕಾರಿ ಎ.ಪಂಕಜಾ, ಸಮುದಾಯ ಘಟನಾಧಿಕಾರಿ ಕಾಶೀನಾಥ ಧನ್ನಿ, ವ್ಯವಸ್ಥಾಪಕ ಮಲ್ಲೇಶಿ, ಹಿರಿಯ ಆರೋಗ್ಯ ನೈರ್ಮಲ್ಯಾಧಿಕಾರಿ ಶರಣಪ್ಪ ಮಡಿವಾಳ, ನೋಡಲ್‌ ಅಭಿಯಂತರ ಮನೋಜಕುಮಾರ ಹಿರೋಳಿ, ಪುರಸಭೆ ಸದಸ್ಯರಾದ ತಿಮ್ಮಯ್ಯ ಪವಾರ, ರಾಜೇಶ ಅಗರವಾಲ, ಭೀಮಶಾ ಜಿರೋಳ್ಳಿ, ಭೀಮರಾಯ ನಾಯಕೋಡಿ, ಮುಖಂಡರಾದ ಶ್ರವಣಕುಮಾರ ಮೌಸಲಗಿ, ತುಕಾರಾಮ ರಾಠೊಡ, ಗೋವಿಂದ ಪವಾರ, ಕಿರಿಯ ಅಭಿಯಂತರ ಅಶೋಕ ಪುಟ್‌ಪಾಕ್‌, ಶಾಂತಪ್ಪ ಹೊಸೂರ, ಈಶ್ವರ ಅಂಬೇಕರ, ಕೆ.ವಿರೂಪಾಕ್ಷಿ ಹಾಗೂ ಆಸ್ಪತ್ರೆ ಸಿಬ್ಬಂದಿ ಪಾಲ್ಗೊಂಡಿದ್ದರು. ನಂತರ ವಿವಿಧ ಪ್ರೌಢ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಂದ ಪಟ್ಟಣದಾದ್ಯಂತ ಜಾಗೃತಿ ಜಾಥಾ ನಡೆಯಿತು.

ಟಾಪ್ ನ್ಯೂಸ್

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.