ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಗೆ ಸಿದ್ಧತೆ


Team Udayavani, Aug 19, 2017, 11:30 AM IST

gulbarga 8.jpg

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದಿಂದ ಆ.20ರಂದು ನಗರದಲ್ಲಿ ನಡೆಸುತ್ತಿರುವ ಕರ್ನಾಟಕ ಗೆಜೆಟೆಡ್‌
ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಗೆ ಒಟ್ಟು 24,500 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 12 ವೀಕ್ಷಕರು ಹಾಗೂ ಆಯುಧ ಹೊಂದಿದ ಪೊಲೀಸ್‌ ಸಿಬ್ಬಂದಿಯನ್ನೊಳಗೊಂಡ 12 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯು ಬೆಳಗ್ಗೆ 10:00 ರಿಂದ ಮಧ್ಯಾಹ್ನ 12:00ರ ವರೆಗೆ ಹಾಗೂ ಮಧ್ಯಾಹ್ನ 2:00 ರಿಂದ ಸಂಜೆ 4:00ಗಂಟೆ ವರೆಗೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಜವಾಬ್ದಾರಿಯಿಂದ ಪರೀಕ್ಷೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಗಾಗಿ ನೇಮಕಗೊಂಡ ಮಾರ್ಗಾಧಿಕಾರಿಗಳು ನಿಗದಿತ ಸಮಯದಲ್ಲಿ ಖಜಾನೆಗಳಲ್ಲಿ ಹಾಜರಿದ್ದು, ಪ್ರಶ್ನೆ ಪತ್ರಿಕೆ ಪಡೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕು. ಪ್ರಶ್ನೆ ಪತ್ರಿಕೆ ಬಂಡಲ್‌ಗ‌ಳನ್ನು ಪಡೆಯುವ ಮುನ್ನ ಬಂಡಲ್‌ ಭದ್ರಪಡಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಮಾರ್ಗಾಧಿಕಾರಿಗಳು, ವೀಕ್ಷಕರು ತಮ್ಮ ವಾಹನದಲ್ಲಿ
ಪೊಲೀಸ್‌ ಅಧಿಕಾರಿಗಳನ್ನು ಕರೆದುಕೊಂಡು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಪೂರ್ಣಗೊಳ್ಳುವವರೆಗೆ ಕೇಂದ್ರದಲ್ಲಿಯೇ ಇದ್ದು, ಮಾನಿಟರ್‌ ಮಾಡಬೇಕೆಂದು ಹೇಳಿದರು. ಮಾರ್ಗಾಧಿಕಾರಿಗಳು ಮುಂಚಿತವಾಗಿಯೇ ಸಂಬಂಧಪಟ್ಟ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಆ ಕೇಂದ್ರದ ಪ್ರಾಚಾರ್ಯರನ್ನು ಸಂಪರ್ಕಿಸಿ ಆಸನ, ಕುಡಿಯುವ ನೀರು, ಭದ್ರತೆ, ಮಹಿಳೆಯರಾಗಿ ಪ್ರತ್ಯೇಕ ತಪಾಸಣಾ ಕೋಣೆ, ಮೊಬೈಲ್‌ ಠೇವಣಿ ಕೋಣೆ, ಸಾಕಷ್ಟು ಬೆಳಕಿನ ಮತ್ತು ಶೌಚಾಲಯ ವ್ಯವಸ್ಥೆ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.
ಮಹಿಳಾ ಪರೀಕ್ಷಾರ್ಥಿಗಳ ತಪಾಸಣೆಯನ್ನು ಕಡ್ಡಾಯವಾಗಿ ಮಹಿಳಾ ಪೊಲೀಸರೇ ಮಾಡುವಂತೆ ಎಚ್ಚರಿಕೆ ವಹಿಸಬೇಕು
ಎಂದರು. ಪ್ರತಿ ಕೇಂದ್ರದಲ್ಲಿ ವಿಡಿಯೋಗ್ರಾಫಿ ಮಾಡುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರದ ನಿಯೋಜಿತ ಅಧಿಕಾರಿ
ಮತ್ತು ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ಮೊಬೈಲ್‌ ಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತರುವಂತಿಲ್ಲ ಎಂದು ಸೂಚಿಸಿದರು. ಪರೀಕ್ಷಾ ಕೇಂದ್ರದ ಆವರಣ ಮತ್ತು ಕೊಠಡಿಯಲ್ಲಿ ಮೊಬೈಲ್‌, ವಿದ್ಯುತ್‌ ಉಪಕರಣ, ಯಾವುದೇ ತರಹದ ಗಡಿಯಾರ, ಕೈ ಗಡಿಯಾರ ಬಳಸುವುದನ್ನು ನಿಷೇಧಿ ಸಲಾಗಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾ ಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕರ್ನಾಟಕ ಲೋಕ ಸೇವಾ ಆಯೋಗದ ಉಪ ಕಾರ್ಯದರ್ಶಿ ರಾಮಕೃಷ್ಣಯ್ಯ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌ ಮತ್ತಿತರರ ಅಧಿಕಾರಿಗಳು ಹಾಜರಿದ್ದರು. 

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.