ಆರೋಗ್ಯ ಕೇಂದ್ರಗಳಲ್ಲಿ ಅಶುಚಿತ್ವ: ಜಿಪಂ ಕೆಡಿಪಿ ಸಭೆಯಲ್ಲಿ ಅಸಮಾಧಾನ
Team Udayavani, Aug 20, 2017, 8:45 AM IST
ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಡೆಂಗ್ಯೂ ಸೇರಿದಂತೆ ವಿವಿಧ ರೋಗಗಳು ಹರಡುವ ಭೀತಿ ಇರುವ ಹಂತದಲ್ಲೇ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಶುಚಿತ್ವದ ವಾತಾವರಣ ಕಂಡು ಬಂದಿದೆ. ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎನ್ನುವ ಅಸಮಾಧಾನ ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾಗಿದೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆ ಯಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿ ಆಶಾ ಅವರು ಜಿಲ್ಲೆಯ ಆರೋಗ್ಯ ಜಾಗೃತಿಗೆ ಸಂಬಂಧಿಸಿದ ಮಾಹಿತಿ ನೀಡಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಎಚ್1ಎನ್1ನ 15 ಪ್ರಕರಣ, ಇಲಿಜ್ವರದ 18 ಪ್ರಕರಣ, ಮಲೇರಿಯಾದ 1 ಪ್ರಕರಣ, ಡೆಂಗ್ಯೂವಿನ 190 ಮತ್ತು ಹೆಪಟೈಟಿಸ್‌ನ 83 ಪ್ರಕರಣಗಳು ಪತ್ತೆಯಾಗಿದ್ದು, ಯಾವುದೇ ಜೀವಹಾನಿಯಾಗಿಲ್ಲ, ರೋಗ ನಿಯಂತ್ರಣದಲ್ಲಿದೆ ಎಂದರು.
ಜಿಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸೋಮವಾರಪೇಟೆ ತಾಲೂಕಿನಲ್ಲಿ ಡೆಂಗ್ಯೂ ವಿನಿಂದ 2 ಸಾವು ಸಂಭವಿಸಿದೆ ಎಂದರು.
ಜಿಲ್ಲಾ ಆಸ್ಪತ್ರೆಯಲ್ಲಿ ದೃಢ ಪಟ್ಟಿಲ್ಲವೆಂದು ಅಧಿಕಾರಿ ಸಮಜಾಯಿಷಿ ನೀಡಿದ ಸಂದರ್ಭ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರೋಗಿಗಳನ್ನು ಪರಿಶೀಲಿಸಿದರೆ ತಾನೆ ರೋಗ ಪತ್ತೆಯಾಗುವುದು ಎಂದರು. ಸೋಮವಾರಪೇಟೆ ಸೇರಿದಂತೆ ವಿವಿಧ ಆಸ್ಪತೆೆÅಗಳಲ್ಲಿ ಸ್ವತ್ಛತಾ ಕಾರ್ಯ ನಡೆದಿದೆಯೆ ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕುಟುಂಬ ಕಲ್ಯಾಣಾಧಿಕಾರಿ ಆಶಾ, ಕುಶಾಲನಗರದಲ್ಲಿ ತ್ಯಾಜ್ಯ ವಿಲೇವಾರಿಯಾಗದಿರುವುದು, ಶನಿವಾರಸಂತೆ ಆಸ್ಪತ್ರೆಯ ತ್ಯಾಜ್ಯವನ್ನು ಸಂಬಂಧಪಟ್ಟ ಟೆಂಡರ್‌ದಾರ ಹಳೆಯ ಬಿಲ್ ಪಾವತಿಯಾಗದ್ದರಿಂದ ವಿಲೇವಾರಿ ಮಾಡದಿರುವ ವಿಚಾರವನ್ನು ಸಭೆಯ ಮುಂದಿಟ್ಟರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ, ತ್ಯಾಜ್ಯ ವಿಲೇ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಜಂಟಿಯಾಗಿ ಆಸ್ಪತ್ರೆಯನ್ನು ಪರಿಶೀಲಿಸಿ ಎರಡು ಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಸುವಂತೆ ಸ್ಪಷ್ಟ ಸೂಚನೆ ನೀಡಿದರು.
ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಮುಕೊಂಡ ಸುಬ್ರಮಣಿ ಅವರು, ಶಾಂತಳ್ಳಿ ಆಸ್ಪತ್ರೆಯಲ್ಲಿ ಅಗತ್ಯ ನರ್ಸ್ ಮತ್ತು ಡಿ ಗ್ರೂಪ್ ನೌಕರರು ಇಲ್ಲದಿರುವುದು. ವಿವಿಧ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರುಗಳಿದ್ದರೂ ಅವರು ಅಲೋಪತಿ ಔಷಧಿಗಳನ್ನು ನೀಡಲು ಹಿಂದೇಟು ಹಾಕುವ ವಿಚಾರಗಳನ್ನು ಪ್ರಸ್ತಾಪಿಸಿದರು. ಈ ಹಂತದಲ್ಲಿ ಉಪಾಧ್ಯಕ್ಷೆ ಲೋಕೆೇಶ್ವರಿ ಗೋಪಾಲ್ ವೈದ್ಯರುಗಳು ಇಲ್ಲದಿದ್ದರೆ ಆಸ್ಪತ್ರೆಯನ್ನೆ ಮುಚ್ಚಿ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ, ಗ್ರಾಮೀಣ ಭಾಗಗಳಲ್ಲಿ ಜಾಂಡೀಸ್‌ನ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ಕುಡಿಯುವ ನೀರಿನ ಶುಚಿತ್ವಕ್ಕೆ ಒತ್ತು ನೀಡಬೇಕೆಂದರು. ಈ ಸಂದರ್ಭ ಸ್ಥಾಯೀ ಸಮಿತಿ ಅಧ್ಯಕ್ಷ ಮೂಕೊಂಡ ಸುಬ್ರಮಣಿ, ನಾಪೊàಕ್ಲು ಪಟ್ಟಣಕ್ಕೆ ನೀರನ್ನು ಶುದ್ಧೀಕರಿಸದೆ ನೇರವಾಗಿ ಸರಬರಾಜು ಮಾಡಲಾಗುತ್ತಿದೆ. ಅಗತ್ಯ ನೀರು ಶುದ್ಧೀಕರಣ ಘಟಕವನ್ನು ಸ್ಥಾಪಿಸುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.