ಪಂಚಭೂತಗಳಲ್ಲಿ ಲೀನರಾದ ಏಣಗಿ ಬಾಳಪ್ಪ
Team Udayavani, Aug 20, 2017, 7:55 AM IST
ಬೆಳಗಾವಿ/ಸವದತ್ತಿ: ನಾಡೋಜ ಹಿರಿಯ ರಂಗಜೀವಿ, ನಾಟ್ಯಭೂಷಣ, ಕಲಾ ತಪಸ್ವಿ ಡಾ| ಏಣಗಿ ಬಾಳಪ್ಪ ಶನಿವಾರ
ಪಂಚಭೂತಗಳಲ್ಲಿ ಲೀನರಾದರು.
ಶುಕ್ರವಾರ ಬೆಳಗ್ಗೆ ವಿಧಿವಶರಾದ ಡಾ| ಏಣಗಿ ಬಾಳಪ್ಪನವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆಯಿಂದ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಕಲ ಸರಕಾರಿ ಗೌರವದೊಂದಿಗೆ ಜನ್ಮಸ್ಥಳ ಏಣಗಿ ಗ್ರಾಮದಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬಾಳಪ್ಪನವರ ನಿವಾಸದ ಆವರಣದಲ್ಲಿ ಗಾಳಿಯಲ್ಲಿ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು. ಗ್ರಾಮದ ಸಮೀಪದಲ್ಲಿ ಇರುವ ಜಮೀನಿನಲ್ಲಿ ಪತ್ನಿ ಸಾವಿತ್ರಮ್ಮ ಅವರ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬದ ಸದಸ್ಯರು ವಿಧಿವಿಧಾನಗಳನ್ನು ನೆರವೇರಿಸಿದರು. ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಳಪ್ಪನವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು.
ಡಾ| ಏಣಗಿ ಬಾಳಪ್ಪನವರ ಪಾರ್ಥಿವ ಶರೀರಕ್ಕೆ ಸಚಿವೆ ಉಮಾಶ್ರೀ ಅಂತಿಮ ನಮನ ಸಲ್ಲಿಸಿದರು. ಸಂಸದ ಸುರೇಶ
ಅಂಗಡಿ, ಶಾಸಕರಾದ ಆನಂದ ಮಾಮನಿ, ಡಾ| ವಿಶ್ವನಾಥ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಎನ್.ಆರ್. ವಿಶುಕುಮಾರ, ಜಿಲ್ಲಾಧಿಕಾರಿ ಜಿಯಾವುಲ್ಲಾ, ಎಸ್‌ಪಿ ಡಾ| ಬಿ.ಆರ್. ರವಿಕಾಂತೇಗೌಡ ಗೌರವ ಸಲ್ಲಿಸಿದರು. “ಬಾಳಪ್ಪನವರ ನಿಧನದಿಂದ ನಾಡಿನ
ಸಾಂಸ್ಕೃತಿಕ ಕೊಂಡಿ ಕಳಚಿದಂತಾಗಿದೆ.
ರಂಗಭೂಮಿಯ ಬಹುದೊಡ್ಡ ಕಲಾವಿದರಾದ ಅವರು ಶತಾಯುಷಿಯಾಗಿ ನಮ್ಮೊಂದಿಗೆ ಇದ್ದಿದ್ದು ನಮ್ಮೆಲ್ಲರ
ಭಾಗ್ಯ’ ಎಂದು ಸಚಿವೆ ಉಮಾಶ್ರೀ ಸ್ಮರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.