ಆಸ್ಪತ್ರೆಗಳಲ್ಲೂ  ಬೇಕು ಇಂದಿರಾ ಕ್ಯಾಂಟೀನ್‌


Team Udayavani, Aug 20, 2017, 8:25 AM IST

canteen.jpg

ಮಹಾನಗರ: ತಮಿಳುನಾಡಿನ ಅಮ್ಮಾ ಕ್ಯಾಂಟೀನ್‌ ವ್ಯವಸ್ಥೆಯಿಂದ ಪ್ರೇರಣೆಗೊಂಡು ಇದೇ ಮಾದರಿಯಲ್ಲಿ ರಾಜ್ಯ ಸರಕಾರವೂ ಬೆಂಗಳೂರಿನಲ್ಲಿ  180 ಕಡೆ ಆರಂಭಿಸಿದೆ. 

ಇಂಥ ಕ್ಯಾಂಟೀನ್‌ಗಳು ಸರಕಾರಿ ಆಸ್ಪತ್ರೆಗಳಲ್ಲಿ ಆರಂಭಗೊಂಡರೆ ರೋಗಿ ಗಳಿಗೆ ಮತ್ತು ಅವರ ಸಹಾಯಕರಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ರಿಯಾಯತಿ ದರದಲ್ಲಿ  ಊಟ ಉಪಹಾರಗಳು ದೊರೆಯುವಂತಾಗ ಬೇಕೆಂಬುದು ಇದರ ಹಿಂದಿನ ಉದ್ದೇಶ. ಈಗಾಗಲೇ ಇಂತಹ ಪ್ರಯೋಗವೊಂದು ದೊಡ್ಡಬಳ್ಳಾಪುರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದಿದೆ. ಇಲ್ಲಿನ ಸರಕಾರಿ ಮಹಿಳಾ ಆಸ್ಪತ್ರೆಯಲ್ಲಿ ರಿಯಾಯತಿ ದರದ ಕ್ಯಾಂಟೀನ್‌ ಕಳೆದ ತಿಂಗಳು ಉದ್ಘಾಟನೆಗೊಂಡಿದೆ.

ತುರ್ತು ಅಗತ್ಯ
ಜಿಲ್ಲಾ ವೆನಾÉಕ್‌ ಹಾಗೂ ಲೇಡಿ ಗೋಶನ್‌ ಆಸ್ಪತ್ರೆಗಳಿಗೆ ನಿತ್ಯವೂ ದಕ್ಷಿಣ ಕನ್ನಡ,ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ದಂತೆ ವಿವಿಧ ಜಿಲ್ಲೆಗಳಿಂದ ಸಾವಿ ರಾರು ರೋಗಿಗಳು ತಪಾಸಣೆ ಹಾಗೂ ಚಿಕಿತ್ಸೆಗೆಂದು ಬರುತ್ತಾರೆ. ವೆನಾÉಕ್‌ ಆಸ್ಪತ್ರೆಯಲ್ಲಿ ಸುಮಾರು 800 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿರಾರು ಮಂದಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಾರೆ. ಇದೇ ರೀತಿಯಾಗಿ ಲೇಡಿಗೋಶನ್‌ ಆಸ್ಪತ್ರೆಯಲ್ಲೂ ಸುಮಾರು 500 ರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ಸರಕಾರಿ , ಸಮುದಾಯ ಆಸ್ಪತ್ರೆಗಳಿವೆ. ಇಲ್ಲಿ ಆರ್ಥಿಕವಾಗಿ ಹಿಂದುಳಿದವರೇ ಹೆಚ್ಚು ಮಂದಿ ಚಿಕಿತ್ಸೆಗೆ ಬರುತ್ತಾರೆ. ಇವರಿಗೆ ಆಸ್ಪತ್ರೆ ವತಿಯಿಂದ ಊಟ  ನೀಡಲಾಗುತ್ತಿದೆ. ರೋಗಿಗಳ ಆರೈಕೆಗಾಗಿ ಬರುವ ಅವರ ಸಂಬಂಧಿಕರು ಹೊರಗೆ ಹಣ ತೆತ್ತು ಊಟ ಉಪಾಹಾರ ಮಾಡಬೇಕಾಗುತ್ತದೆ. ಅದಕ್ಕಾಗಿ ಬಹಳಷ್ಟು ಹಣವನ್ನು ವ್ಯಯ ಮಾಡಬೇಕಾಗಿದೆ. ಹೀಗಾಗಿ ಇವರಿಗೆ ಕಡಿಮೆ ದರದಲ್ಲಿ ಊಟ, ಉಪಾಹಾರಗಳು ಲಭ್ಯವಾದರೆ ಪ್ರಯೋಜನವಾಗಲಿದೆ. ವೆನಾÉಕ್‌ ಆಸ್ಪತ್ರೆಯಲ್ಲಿ  ರೋಗಿಗಳ ಆರೈಕೆಗೆ ಬರುವವರಿಗೆ ಮಂಜೇಶ್ವರದ ಪಾವೂರಿನ ಸ್ನೇಹಾಲಯ ಆಶ್ರಮ ಉಚಿತವಾಗಿ ಊಟ ಪೂರೈಸುತ್ತಿದೆ. ಇದರಿಂದ ಬಡರೋಗಿಗಳ ಕುಟುಂಬಗಳಿಗೆ ಪ್ರಯೋಜನವಾಗಿದೆ. ಶೀಘ್ರ ಅನುಷ್ಟಾನಗೊಳ್ಳಲಿ
ಎಲ್ಲಾ  ಜಿಲ್ಲಾ ಹಾಗೂ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ಕ್ಯಾಂಟೀನ್‌, ಹಣ್ಣುಗಳ ಮಳಿಗೆ, ನಂದಿನಿ ಹಾಲಿನ ಮಳಿಗೆಗಳನ್ನು ಒಳಗೊಂಡ ನಾಗರಿಕ ಸೌಲಭ್ಯಗಳ ಸಂಕೀರ್ಣಗಳನ್ನು ಸ್ಥಾಪಿಸಲು ಸರಕಾರ ಆಲೋಚಿಸುತ್ತಿದೆ ಎನ್ನಲಾಗಿದೆ. ಈ ಮಾದರಿಯನ್ನು ಕೆ.ಆರ್‌. ಪುರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಬೆಂಗಳೂರಿನಲ್ಲಿ 7 ಕಡೆಗಳಲ್ಲಿ ಆರಂಭಿಸಲಿದೆ. ದೊಡ್ಡ ಬಳ್ಳಾಪುರ ಮಹಿಳಾ ಆಸ್ಪತ್ರೆಯಲ್ಲಿ ಈಗಾಗಲೇ ಆರಂಭವಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲೂ ಸ್ಥಾಪನೆಯಾದರೆ ಅನುಕೂಲವಾಗಲಿದೆ.

ಯು.ಟಿ. ಖಾದರ್‌ ಆರೋಗ್ಯ ಸಚಿವ ರಾಗಿದ್ದಾಗ ರೋಗಿಗಳ ಸಂಬಂಧಿಕರಿಗೆ ರಿಯಾಯತಿ ದರದಲ್ಲಿ  ಮೂರೂ ಹೊತ್ತಿನ ಊಟ-ಉಪಾಹಾರವನ್ನು ಪೂರೈಸುವ ಚಿಂತನೆ ನಡೆಸಿದ್ದರು. ಅನ್ನಭಾಗ್ಯದ ಮಾದರಿಯಲ್ಲೇ ಉಚಿತ ಅಕ್ಕಿಯನ್ನು  ನೀಡುವ ಬಗ್ಗೆಯೂ ಯೋಚಿಸಿದ್ದರು. ಈಗ ಅವರೇ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ.

ತೀರ ಅವಶ್ಯ
“”ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಕೆಲವು ತಿಂಗಳ ಹಿಂದೆ  ಜಿಲ್ಲಾ ವೆನಾÉಕ್‌ ಆಸ್ಪತ್ರೆಯಲ್ಲಿ ರಿಯಾಯತಿ ದರದ ಕ್ಯಾಂಟೀನ್‌ ಸ್ಥಾಪಿಸುವ ಬಗ್ಗೆ  ಒಲವು ವ್ಯಕ್ತಪಡಿಸಿ ದ್ದರು. ಸರಕಾರಿ ಆಸ್ಪತ್ರೆಗಳಲ್ಲಿ  ರೋಗಿಗಳಿಗೆ ಸರಕಾರದ ವತಿ ಯಿಂದ ಉಚಿತ ಊಟ ನೀಡ ಲಾಗುತ್ತದೆ. ರೋಗಿಗಳ ಆರೈಕೆಗೆ ಬರುವವರು  ಹೊಟೇಲ್‌ಗ‌ಳನ್ನು ಆಶ್ರಯಿಸಬೇಕಾಗಿದೆ. ಆದ ಕಾರಣ ಇಲ್ಲೂ ಇಂದಿರಾ ಕ್ಯಾಂಟೀನ್‌ ಮಾದರಿ ಜಾರಿಯಾದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ಮಾಜಿ ಕಾರ್ಪೊರೇಟರ್‌, ವೆನಾÉಕ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸ್ಪಂದಿಸು ತ್ತಿರುವ ಪದ್ಮನಾಭ ಅಮೀನ್‌.

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.