ತಲಪಾಡಿ : ಸಂಭ್ರಮದ ಮೊಸರು ಕುಡಿಕೆ ಉತ್ಸವ
Team Udayavani, Aug 20, 2017, 8:35 AM IST
ತಲಪಾಡಿ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಆಧ್ಯಾತ್ಮಿಕ ಜೀವನಕ್ಕೂ ಮಹತ್ವವನ್ನು ನೀಡಿ, ಸಂಸ್ಕಾರಯುತ ಜೀವನವನ್ನು ತಮ್ಮ ದಾಗಿಸಿಕೊಳ್ಳಬೇಕು ಎಂದು ಪ್ರೊ| ಎಂ.ಬಿ. ಪುರಾಣಿಕ್ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಲಾದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಕಿವಿಮಾತು ಹೇಳಿದರು.
ಮುಖ್ಯ ಅತಿಥಿ ಸೀತಾರಾಮ್ ಭಟ್ ಮಾತನಾಡಿ, ವಿದ್ಯಾರ್ಥಿ ಗಳು ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳ ಬೇಕೆಂದು ಹೇಳಿದರು. ಅವರು ಮಡಕೆ ಒಡೆಯುವ ಮೂಲಕ ವಿಟ್ಲ ಪಿಂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿನಿಯರಿಂದ ನಾಸಿಕ್ ಬ್ಯಾಂಡ್ ಮತ್ತು ವಿದ್ಯಾರ್ಥಿ ಗಳಿಂದ ಹುಲಿವೇಷ ಕುಣಿತವು ಮೆರವಣಿಗೆಗೆ ಶೋಭೆ ನೀಡಿತು. ಕೃಷ್ಣ ಮತ್ತು ರಾಧೆಯ ವೇಷ ಧರಿಸಿದ ಚಿಣ್ಣರು ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳಿಂದ ಕೃಷ್ಣನ ಜೀವನದ ಕುರಿತಾದ ಭಾಷಣ, ಕೃಷ್ಣನ ಜನ್ಮವೃತ್ತಾಂತವನ್ನು ತಿಳಿಸುವ ನೃತ್ಯ ಮತ್ತು ಕೃಷ್ಣನ ಪೂಜೆ ಮತ್ತು ಭಜನ ಕಾರ್ಯಕ್ರಮಗಳು ನಡೆದವು.
ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮಗೆ ನಿಯೋಜಿಸಿದ್ದ ಅಟ್ಟಣಿಗೆಯಲ್ಲಿ ಮಾನವ ಪಿರಮಿಡ್‌ಗಳನ್ನು ರಚಿಸಿ ಜೋಡಿಸಲ್ಪಟ್ಟ ಮಡಕೆಗಳನ್ನು ಒಡೆದು ಸಂಭ್ರಮೋಲ್ಲಾಸದಿಂದ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸುನಂದಾ ಪುರಾಣಿಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ವಿN°àಶ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಜಲಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.