ಪರಿಸರ ಸ್ನೇಹಿ ಗಣಪನಿಗಾಗಿ “ಜಾಗೃತಿ ಓಟ’ ಆಯೋಜನೆ

Team Udayavani, Aug 20, 2017, 11:18 AM IST

ganesha-pendal.jpg

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಈ ವರ್ಷ ಪ್ಲಾಸ್ಟರ್‌ ಆಫ್ ಪ್ಯಾರೀಸ್‌ ಮೂರ್ತಿಗಳ ಬಳಕೆ ನಿಷೇಧವಾಗಿರುವ ಹಿನ್ನೆಲೆಯಲ್ಲಿ ಮಣ್ಣಿನ ಮೂರ್ತಿಗಳ ಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಮುಂದಾಗಿದೆ. ಇದಕ್ಕೆಂದೇ ಭಾನುವಾರ (ಆಗಸ್ಟ್‌ 20) ಬೆಳಗ್ಗೆ 8.30 ಕ್ಕೆ “ಜಾಗೃತಿ ಓಟ’ ಸಹ ಹಮ್ಮಿಕೊಂಡಿದ್ದು, ಅಧಿಕಾರಿಗಳು ಹಾಗೂ ನೌಕರರಿಗೆ ಆಯೋಜಿಸಿರುವ ಓಟದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು.

ಜಾಗೃತಿ ಓಟದಲ್ಲಿ ಭಾಗವಹಿಸಿ ವಿಜೇತರಾಗುವವರಿಗೆ ನಗದು ಬಹುಮಾನ ಘೋಷಿಸಲಾಗಿದ್ದು, ಪ್ರಥಮ ಸ್ಥಾನಕ್ಕೆ ತಲಾ 10 ಸಾವಿರ, ದ್ವಿತೀಯ ಬಹುಮಾನ ತಲಾ ಐದು ಸಾವಿರ ಮತ್ತು ಮೂರನೇ ಬಹುಮಾನ 2,500 ರೂ. ನಗದು ಬಹುಮಾನ ಒಳಗೊಂಡಿರಲಿದೆ.

ಜಾಗೃತಿ ಓಟಕ್ಕೆ ಕಬ್ಬನ್‌ ಪಾರ್ಕ್‌ನ ಮುಖ್ಯದ್ವಾರದಲ್ಲಿ ಚಾಲನೆ ದೊರೆಯಲಿದ್ದು, ಸೆಂಚುರಿ ಕ್ಲಬ್‌ ಮುಖಾಂತರ ನೃಪತುಂಗ ರಸ್ತೆ, ಡಿ.ಸಿ.ಕಚೇರಿಯಿಂದ ಮತ್ತೆ ಕಬ್ಬನ್‌ ಪಾರ್ಕ್‌ ಮುಖ್ಯದ್ವಾರದಲ್ಲಿ ಮುಕ್ತಾಯವಾಗಲಿದೆ.  ಓಟದಲ್ಲಿ ಭಾಗವಹಿಸಲಿರುವ ಎಲ್ಲ ಅಧಿಕಾರಿಗಳು ಮತ್ತು ನೌಕರರಿಗೆ ಟೀ-ಶರ್ಟ್‌ ವಿತರಣೆ ಹಾಗೂ ಲಘು ಉಪಹಾರ ವ್ಯವಸ್ಥೆ ಮಾಡಲಾಗಿದೆ.

ಪಿಒಪಿ ಮೂರ್ತಿಗಳಿಂದ ನಗರದಲ್ಲಿ ಜಲಮೂಲಗಳಿಗೆ ಹಾನಿಯಾಗಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂಬುದು ಓಟದ ಉದ್ದೇಶವಾಗಿದೆ.

ಕಳೆದ ವರ್ಷ ನಗರದಲ್ಲಿ 4.5ಲಕ್ಷ ಗೌರಿ-ಗಣೇಶ ವಿಗ್ರಹಗಳು ಬಿಬಿಎಂಪಿ ವ್ಯಾಪ್ತಿಯ ಕೆರೆಗಳು, ಪುಷ್ಕರಣಿ, ಟ್ಯಾಂಕರ್‌ಗಳಲ್ಲಿ  ವಿಸರ್ಜಿಸಲಾಗಿದೆ. ಈ ಪೈಕಿ ಶೇ.40ರಷ್ಟು ಮೂರ್ತಿಗಳು ಪಿಒಪಿ ಗೌರಿ-ಗಣೇಶ ಮೂರ್ತಿಗಳಿದ್ದವು. ಪಿಓಪಿ ಮೂರ್ತಿಗಳು ವಿಸರ್ಜನೆ ಮಾಡಿದರೂ ನೀರಿನಲ್ಲಿ ಕರಗುವುದಿಲ್ಲ. ಜತೆಗೆ ಪರಿಸರ ಮತ್ತು ಜಲಮೂಲಗಳಿಗೆ ಹಾನಿಯಾಗಲಿದೆ. 

ಹೀಗಾಗಿ, ಪ್ರಸಕ್ತ ಸಾಲಿನಲ್ಲಿ ಪಿಒಪಿ ಗೌರಿ-ಗಣೇಶ ಮೂರ್ತಿ ನಗರಕ್ಕೆ ಬರುವುದು ತಡೆಯುವುದು ಜತೆಗೆ ಪಿಒಪಿ ಮೂರ್ತಿಗಳನ್ನು ಖರೀದಿಸುವುದು ತಡೆಯುವ ನಿಟ್ಟಿನಲ್ಲಿ ಜಾಗೃತಿಗೆ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರ ಸಂಘ ಈ ವರ್ಷದಿಂದ ಜಾಗೃತಿಗೆ ಮುಂದಾಗಿದೆ.

ಪಿಒಪಿ ಗೌರಿ-ಗಣೇಶ ಮೂರ್ತಿಗಳಿಂದ ಜಲಮೂಲಗಳಿಗೆ ತೊಂದರೆಯಾಗಲಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿಯೂ ಜಾಗೃತಿ ಮೂಡಿಸಲಾಗಿದೆ. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರಲ್ಲಿಯೂ ಪರಿಸರ ಸ್ನೇಹಿ ಗಣಪ ಬಳಕೆಯ ಕುರಿತು ಜಾಗೃತಿ ಮೂಡಿಸಲು ಓಟ ಕೈಗೊಂಡಿರುವುದು ಸ್ವಾಗತಾರ್ಹ.
-ಜಿ.ಪದ್ಮಾವತಿ, ಮೇಯರ್‌

ಟಾಪ್ ನ್ಯೂಸ್

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.