ಯಡಿಯೂರಪ್ಪ ಸೇರಿದಂತೆ ಐವರ ಬಂಧನಕ್ಕೆ ಒತ್ತಾಯ
Team Udayavani, Aug 20, 2017, 11:18 AM IST
ಬೆಂಗಳೂರು: ನಗರದ ಡಾ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲ ಐವರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ಜನ ಸಾಮಾನ್ಯರ ವೇದಿಕೆ ಅಧ್ಯಕ್ಷ ಡಾ. ಡಿ.ಅಯ್ಯಪ್ಪ ಒತ್ತಾಯಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಇದೀಗ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ.
ಡಿನೋಟಿಫೈ ಮಾಡಿಲ್ಲ ಎಂದು ವಾದಿಸುವ ಯಡಿಯೂರಪ್ಪ, ತಮ್ಮ ವಿರುದ್ಧ ಯಾರೇ ದೂರು ನೀಡಿದರೂ ಕೋರ್ಟ್ ಮೊರೆ ಹೋಗುತ್ತಾರೆ. ಅಕ್ರಮದಲ್ಲಿ ಭಾಗಿ ಆಗಿಲ್ಲ ಎಂದಾದರೆ ಎಸಿಬಿ ವಿಚಾರಣೆ ಎದುರಿಸಲಿ. ಮತ್ತೂಂದೆಡೆ ತಮ್ಮ ಪರ ವಕೀಲರನ್ನು ಎಸಿಬಿ ಕಳುಹಿಸಿ ದಾಖಲೆ ಸಲ್ಲಿಸಲು ಹತ್ತಾರು ದಿನ ಕಾಲವಕಾಶ ಕೋರಿದ್ದಾರೆ. ಇದರ ಉದ್ದೇಶವೇನು ಎಂಬುದನ್ನು ಎಂದು ಅವರು ಪ್ರಶ್ನಿಸಿದರು.
ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಡಿಎ ವಶಪಡಿಸಿಕೊಂಡಿದ್ದ 3,546 ಎಕರೆ ಜಮೀನಿನ ಪೈಕಿ 257 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟ ಉಂಟು ಮಾಡಿದ್ದಾರೆ.
ಈ ಸಂಬಂಧ ಬಿಎಸ್‌ವೈ, ಬಿಡಿಎನ ಅಂದಿನ ಉಪ ಆಯುಕ್ತ ಗೌರಿಶಂಕರ್, ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಪ್ರೇಮಚಂದ್ರ, ಉಪ ಕಾರ್ಯದರ್ಶಿ ಬಸವರಾಜು, ಅಪರ ಮುಖ್ಯ ಕಾರ್ಯದರ್ಶಿ ಸುಬೀರ್ ಹರಿಸಿಂಗ್ ವಿರುದ್ಧ ಜೂನ್ 7ರಂದೇ ಎಸಿಬಿಗೆ ದೂರು ನೀಡಲಾಗಿತ್ತು. ಇದೀಗ ತನಿಖಾಧಿಕಾರಿಗಳು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮಧ್ಯವರ್ತಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಅಕ್ರಮವಾಗಿ ಜಮೀನನನ್ನು ಭೂಸ್ವಾಧೀನದಿಂದ ಕೈಬಿಟ್ಟಿದ್ದಾರೆ. ಇದರಿಂದ ಯೋಜನೆ ಸ್ಥಗಿತಗೊಳ್ಳುವಂತಾಗಿದೆ. ಇದೇ ಅವಧಿಯಲ್ಲಿ ಆರಂಭಗೊಂಡ ಕೆಂಪೇಗೌಡ ಲೇಔಟ್ ನಿವೇಶನಗಳು ಸಾರ್ವಜನಿಕಗೆ ವಿತರಣೆ ಮಾಡಲಾಗುತ್ತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.