ಪಿಎಫ್‌ಐ-ಕೆಎಫ್‌ಡಿ ನಿಷೇಧಕ್ಕೆ ಆಗ್ರಹ
Team Udayavani, Aug 20, 2017, 11:31 AM IST
ಶಹಾಬಾದ: ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡ ಶರಣು ವಸ್ತ್ರದ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಹಾಗೂ ಸಂಘ ಪರವಾರದ ಕಾರ್ಯಕರ್ತರ ಹತ್ಯೆ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಗಳು ನೇರವಾಗಿ ಭಾಗಿಯಾಗಿವೆ. ಇದು ರುಜುವಾತಾಗಿದೆ. ಈ ಸಂಘಟನೆಗಳು ನಿಷೇಧಿತ ಸೀಮಿ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದು, ನಿಷೇಧಿತ ಸಂಘಟನೆಯ ಪದಾಧಿಕಾರಿಗಳೇ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆ
ಪದಾಧಿಕಾರಿಗಳಾಗಿದ್ದಾರೆ ಎಂದು ಆಪಾದಿಸಿದರು. ಬಿಜೆಪಿ ಹಿರಿಯ ಮುಖಂಡ ಕನಕಪ್ಪ ದಂಡಗುಲಕರ್ ಮಾತನಾಡಿ, ಕರ್ನಾಟಕದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಸರಣಿ ಹತ್ಯೆಯಲ್ಲಿ ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ, ಮೂಡುಬಿದ್ರಿಯ ಪ್ರಶಾಂತ ಪೂಜಾರಿ ಕೊಲೆಯಲ್ಲಿ ಪಿಎಫ್‌ಐ ಹಾಗೂ ಕೆಎಫ್‌ಡಿ ಸಂಘಟನೆಯವರೇ ಭಾಗಿಯಾಗಿದ್ದಾರೆ.ಆದ್ದರಿಂದ ಈ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕು. ಸಂಘಟನೆಗಳ ಆಸ್ತಿ ಮುಟ್ಟುಗೋಲು ಹಾಕಬೇಕು. ಎಲ್ಲಾ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು.ಈ
ಸಂಘಟನೆಗಳಿಗೆ ಕುಮಕ್ಕು ನೀಡುತ್ತಿರುವ ಸಚಿವ ರಮನಾಥ ರೈ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗಣ್ಣ ರಾಂಪೂರೆ, ನಗರ ಉಪಾಧ್ಯಕ್ಷ ವಿರೇಶ ಬಂದೆಳ್ಳಿ, ಬಿಜೆಪಿ ಅಧ್ಯಕ್ಷ ಸುಭಾಷ ಜಾಪೂರ, ಚೇತನ ವಳಸಂಗ, ಅಶೋಕ ಜಿಂಗಾಡೆ, ರಾಜು ದಂಡಗುಲಕರ್, ದೇವದಾಸ ಜಾಧವ, ಸಿದ್ರಾಮ ಕುಸಾಳೆ, ಓಂಕಾರ ಹುಗ್ಗಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.