ಜಿಲ್ಲೆಯ ಅರಣ್ಯ ಸಂರಕ್ಷಣೆಗೆ ಹೆಚ್ಚು ನೆರವು ನೀಡಿ


Team Udayavani, Aug 20, 2017, 4:17 PM IST

Surathkal-1.jpg

ಚಾಮರಾಜನಗರ/ಸಂತೆಮರಹಳ್ಳಿ: ಜಿಲ್ಲೆಯ ಪ್ರಸಿದ್ಧ ತಾಣ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ಕೇಂದ್ರ ವಿಜ್ಞಾನ, ತಂತ್ರಜ್ಞಾನ, ಪರಿಸರ ಹಾಗೂ ಅರಣ್ಯ ಸಚಿವ ಡಾ.ಹರ್ಷವರ್ಧನ್‌ ಅವರನ್ನು ಸಂಸದ ಆರ್‌.ಧ್ರುವನಾರಾಯಣ ಶನಿವಾರ ಭೇಟಿ ಮಾಡಿ ಜಿಲ್ಲೆಯ ಅರಣ್ಯ ಸಂರಕ್ಷಣೆ ಹಾಗೂ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಹಣ ಒದಗಿಸುವಂತೆ ಮನವಿ ಮಾಡಿದರು.

ಕೆ.ಗುಡಿಯಲ್ಲಿ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿ ಸಮಾಲೋಚಿಸಿದ ಆರ್‌.ಧ್ರುವನಾರಾಯಣ ಅವರು ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶವು ಇದ್ದು, ಇದರ ಒಟ್ಟು ವಿಸ್ತಾರವು 574.83 ಚದರ ಕಿಮೀ ಇದೆ. ಈ ಪ್ರದೇಶವು ಹುಲಿಗಳ ಭರವಸೆದಾಯಕ ಆವಾಸ ತಾಣವಾಗಿದೆ. ಪ್ರಸ್ತುತ ಪ್ರತಿ 100 ಕಿಮೀ ಗೆ 10.21 ಹುಲಿ ಸಾಂದ್ರತೆ ಇದೆ. ಈ ಅಂಕಿಅಂಶಗಳು ಹುಲಿಗಳ ಆರೋಗ್ಯಕರ ಸಂಖ್ಯೆಯನ್ನು ಸೂಚಿಸುತ್ತದೆ. ಇದಕ್ಕೆ ಅನುಗುಣವಾಗಿ ಉತ್ತಮ ಸಂರಕ್ಷಣೆಗೆ ಹೆಚ್ಚಿನ ಅನುದಾನ ಅಗತ್ಯವಿದೆ ಎಂದು ಧ್ರುವನಾರಾಯಣ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಅರಣ್ಯ ರಕ್ಷಣೆಗೆ ಹೆಚ್ಚು ಆರ್ಥಿಕ ನೆರವು ಅಗತ್ಯ: ಹುಲಿ ಸಂರಕ್ಷಿತ ಪ್ರದೇಶ ನಿರ್ವಹಣೆಗೆ ಸಂಬಂಧಿಸಿದಂತೆ ಕಳ್ಳಬೇಟೆ, ಅಗ್ನಿ ಅನಾಹುತ, ಮಾನವ-ಪ್ರಾಣಿ ಸಂಘರ್ಷ ತಡೆ ಚಟುವಟಿಕೆಗಳಿಗೆ ಹೆಚ್ಚಿನ ನೆರವು ಬೇಕಿದೆ. ಹುಲಿಗಳ ಆವಾಸ ತಾಣವನ್ನು ಮತ್ತಷ್ಟು ಉತ್ತಮವಾಗಿ ನಿರ್ವಹಿಸಲು ಹೆಚ್ಚು ಅರ್ಥಿಕ ನೆರವು ಅವಶ್ಯವಿದೆ. ಆದರೆ ಪ್ರತಿ ವರ್ಷ ಹುಲಿ ಸಂರಕ್ಷಿತ ಪ್ರದೇಶ ನಿರ್ವಹಣೆ ಹಾಗೂ ಸಂರಕ್ಷಣೆಗೆ ಬಿಡುಗಡೆಯಾಗುತ್ತಿರುವ ಅನುದಾನ ಮತ್ತು ಮಂಜೂರಾತಿಯಲ್ಲಿ ಕಡಿಮೆಯಾಗುತ್ತಾ ಬರುತ್ತಿದೆ ಎಂದು ಲೋಕಸಬಾ ಸದಸ್ಯರು ಕೇಂದ್ರ ಸಚಿವರ ಗಮನ ಸೆಳೆದರು.

ಹುಲಿ ಸಂರಕ್ಷಿತ ಪ್ರದೇಶ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ನೆರವಾಗಲು ಅನುವಾಗುವಂತೆ ಸಾಕಷ್ಟು ಅನುದಾನ ನೀಡಬೇಕು. ಸಕಾಲಕ್ಕೆ ಅರ್ಥಿಕ ನೆರವು ಬಿಡುಗಡೆ ಮಾಡುವ ಮೂಲಕ ಪ್ರಾಕೃತಿಕ ಸಂಪತ್ತು ಸಂರಕ್ಷಣೆಗೆ ಅನುಕೂಲ ಕಲ್ಪಿಸಬೇಕೆಂದು ಕೋರಿ ಮನವಿ ಪತ್ರವನ್ನು ಕೇಂದ್ರ ಅರಣ್ಯ ಸಚಿವರಿಗೆ ಧ್ರುವನಾರಾಯಣ ಸಲ್ಲಿಸಿದರು.

ಬೆಳೆ ಪರಿಹಾರ ವೈಜ್ಞಾನಿಕವಾಗಿ ನಿಗದಿಯಾಗಲಿ: ಕಾಡುಪ್ರಾಣಿಗಳಿಂದ ಉಂಟಾಗುವ ಬೆಳೆಹಾನಿಗೆ ನೀಡಲಾಗುತ್ತಿರುವ ಪರಿಹಾರವು ವೈಜ್ಞಾನಿಕವಾಗಿ ನಿಗದಿಯಾಗಬೇಕು. ಪ್ರತಿವರ್ಷ ಕೃಷಿ ಚಟುವಟಿಕೆಗಳಗೆ ಬೇಕಿರುವ ರಸಗೊಬ್ಬರ, ಬಿತ್ತನೆಬೀಜ, ಇನ್ನಿತರ ಪರಿಕರಗಳ ಬೆಲೆಯು ಹೆಚ್ಚಾಗುತ್ತಲೇ ಇದೆ. ಕೃಷಿ ಉತ್ಪಾ$ದನಾ ವೆಚ್ಚವು ಏರಿಕೆಯಾಗುತ್ತಿದೆ. ಹೀಗಾಗಿ ಪ್ರತಿವರ್ಷ ರೈತರು ಕೃಷಿ ಚಟುವಟಿಕೆಗಳಿಗೆ ಮಾಡಲಾಗುವ ವೆಚ್ಚವನ್ನು ಪರಿಗಣಿಸಿ ಪರಿಹಾರ ದನವನ್ನು ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಆನೆಗಳ ಹಾವಳಿ ತಡೆಗೆ ರೈಲ್ವೆಕಂಬಿಗಳನ್ನು ಬಳಸಿ ಬೇಲಿ, ಕಂದಕ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ಕಿಮೀ ಗೆ 1.60 ಕೋಟಿ ರೂ. ನಷ್ಟು ರೈಲುಕಂಬಿಗಳು ಅಗತ್ಯವಿದೆ. ಇದನ್ನು ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲು ಕೇಂದ್ರ ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಡಲು ಸಹ ಧ್ರುವನಾರಾಯಣ ಅರಣ್ಯ ಸಚಿವರನ್ನು ಕೋರಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5-uv-fusion

UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.