ಎಸಿಬಿ ದುರ್ಬಳಕೆ: ಸಿಎಂ ರಾಜೀನಾಮೆಗೆ ಆಗ್ರಹ
Team Udayavani, Aug 21, 2017, 10:20 AM IST
ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಎಸಿಬಿ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ಯರು ನಗರದಲ್ಲಿ ರವಿವಾರ ಪ್ರತಿಭಟನೆ ನಡೆಸಿದರು. ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು
ಕೂಗಿದರಲ್ಲದೇ ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಡಿನೋಟಿಫಿಕೇಶನ ಸಂಬಂಧವಾಗಿ ಕೆಎಎಸ್ ಅಧಿಕಾರಿ ಎಚ್. ಬಸವರಾಜೇಂದ್ರ ಅವರಿಗೆ ಸುಳ್ಳು ಸಾಕ್ಷಿ ನೀಡುವಂತೆ ಬೆದರಿಕೆ ಹಾಗೂ ಒತ್ತಡ
ಹೇರಿರುವುದು ದುರ್ಬಳಕ್ಕೆ ಹಿಡಿದ ಕನ್ನಡಿಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಎಸಿಬಿಯನ್ನು ರಾಜ್ಯ ಸರ್ಕಾರ ತನ್ನ ದಾಳಕ್ಕೆ ತಕ್ಕ ಉಪಯೋಗಿಸುತ್ತಿದೆ ಎಂಬುದು ಮತ್ತೂಮ್ಮೆ ನಿರೂಪಿಸಿದಂತಾಗಿದೆ. ಇದನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹಾಗೂ ಶಾಸಕ ಬಿ.ಜಿ. ಪಾಟೀಲ ಮಾತನಾಡಿ, ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡು ಬಿ.ಎಸ್.ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ರೂಪಿಸಿರುವುದಕ್ಕೆ ಪೂರಕವಾಗಿ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಅವರು ರಾಜ್ಯಪಾಲರು ಹಾಗೂ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಸುಳ್ಳು ಸಾಕ್ಷಿ ಹೇಳುವಂತೆ ಒತ್ತಡ ಹೇರುತ್ತಿದ್ದಾರೆ ಹಾಗೂ ಬೆದರಿಕೆ ಹಾಕುತ್ತಿದ್ದಾರೆ ಎಂದು ಪತ್ರ ಬರೆದಿರುವುದು ಎಸಿಬಿ ಹಾಗೂ ಮುಖ್ಯಮಂತ್ರಿಗಳ ಬಣ್ಣ ಬಯಲಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಸುನೀಲ ವಲ್ಲಾಪುರೆ, ರೇವು ನಾಯಕ ಬೆಳಮಗಿ, ಬಾಬುರಾವ ಚವ್ಹಾಣ, ಮಾಜಿ ಶಾಸಕರಾದ ಶಶೀಲ್ ಜಿ. ನಮೋಶಿ, ವಾಲ್ಮೀಕಿ ನಾಯಕ, ಪಕ್ಷದ ಮುಖಂಡರಾದ ಶಿವರಾಜ ಪಾಟೀಲ ರದ್ದೇವಾಡಗಿ, ಶಿವಶರಣಪ್ಪ ನಿಗ್ಗುಡಗಿ, ಶ್ಯಾಮರಾವ ಪ್ಯಾಟಿ, ನಾಮದೇವ
ರಾಠೊಡ, ಪ್ರಕಾಶ ಜಮಾದಾರ, ರವಿ ಬಿರಾದಾರ, ಬಸವರಾಜ ಮತ್ತಿಮಡು, ಸುಭಾಷ ಬಿರಾದಾರ, ಬಸವರಾಜ ಇಂಗಿನ್, ಸಾವಿತ್ರಿ ಕುಳಗೇರಿ, ಇಂದಿರಾ ಶಕ್ತಿ, ಶರಣಪ್ಪ ತಳವಾರ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.