ರಾಜ್ಯದ ಜಿಲ್ಲಾ-ತಾಲೂಕು ಕೇಂದ್ರಗಳಲ್ಲೂ ಕ್ಯಾಂಟೀನ್?
Team Udayavani, Aug 21, 2017, 11:27 AM IST
ಬೆಂಗಳೂರು: “ಇಂದಿರಾ ಕ್ಯಾಂಟೀನ್’ ಸ್ಪಂದನೆಯಿಂದ ಪ್ರೇರಣೆಗೊಂಡಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೆಂದ್ರಗಳಲ್ಲಿ ಈ ಯೋಜನೆ ವಿಸ್ತರಿಸಲು ಬೇಕಾಗುವ ಸಂಪನ್ಮೂಲದ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದೆ.
ಅಷ್ಟೇ ಅಲ್ಲ ಸಮಾಜ ಕಲ್ಯಾಣ ಇಲಾಖೆಗೆ ಲಭ್ಯವಾಗುವ ಅನುದಾನದಲ್ಲಿ ಸ್ವಲ್ಪ ಭಾಗ ಇಂದಿರಾ ಕ್ಯಾಂಟೀನ್ಗೆ ವೆಚ್ಚ ಮಾಡುವ ಅವಕಾಶ ಇದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸುವಂತೆ ನಿದೇಶನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಷಿಕ 25 ಸಾವಿರ ಕೋಟಿ ರೂ.ವರೆಗೆ ಅನುದಾನ ಲಭ್ಯವಾಗಲಿದ್ದು, ಈ ಹಣ ಇಂದಿರಾ ಕ್ಯಾಂಟೀನ್ನಂತಹ ಯೋಜನೆಗೆ ಬಳಕೆ ಮಾಡಬಹುದಾ? ಮಾಡಬಹುದಾದರೆ ಎಷ್ಟು ಪ್ರಮಾಣದಲ್ಲಿ ಮಾಡಬಹುದು? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ . ಜತೆಗೆ ಆರ್ಥಿಕ ಇಲಾಖೆಗೂ ಈ ಬಗ್ಗೆ ಸಾಧಕ-ಬಾಧಕ ಪರಿಶೀಲಿಸಲು ತಿಳಿಸಲಾಗಿದೆ ಎಂದು ಹೇಳಲಾಗಿದೆ.
ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು 1500 ರಿಂದ 2000 ಸಾವಿರ ಕೋಟಿ ರೂ.ವರೆಗೆ ವೆಚ್ಚ ಬರಬಹುದು ಎಂಬ ಅಂದಾಜು ಮಾಡಲಾಗಿದೆ. ಪ್ರಸ್ತುತ ಬಿಬಿಎಂಪಿಗೆ 100 ಕೋಟಿ ರೂ. ಮೂಲಸೌಕರ್ಯಕ್ಕೆ 200 ಕೋಟಿ ರೂ. ಊಟ-ತಿಂಡಿ ತಯಾರಿಕೆ, ಪೂರೈಕೆ ವೆಚ್ಚಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.