ದೇವರಾಜ ಅರಸು ಆದರ್ಶ ಅನುಕರಣೀಯ: ವಿರೂಪಾಕ್ಷಪ್ಪ

Team Udayavani, Aug 21, 2017, 2:40 PM IST

ray 2.jpg

ಸಿಂಧನೂರು: ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಅವಿರತ ಶ್ರಮಿಸಿದ ಸಾಮಾಜಿಕ ನ್ಯಾಯ, ಸಮಾನತೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ| ಡಿ. ದೇವರಾಜ ಅರಸು ಅವರ ಆದರ್ಶಗಳು ಅನುಕರಣೀಯವಾಗಿವೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು. ದೇವರಾಜ ಅರಸು ಅವರ 102ನೇ ಜಯಂತ್ಯುತ್ಸವ ಅಂಗವಾಗಿ ರವಿವಾರ ನಗರದ ಸುಕಾಲಪೇಟೆಯ ಮಾರುಕಟ್ಟೆಯಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜೀತಮುಕ್ತಿ, ಋಣಮುಕ್ತಿ, ಗೇಣಿ ಪದ್ಧತಿ ಜಾರಿ, ಉಳುವವನೇ ಭೂಮಿ ಒಡೆಯ ಎನ್ನುವಂತಹ ಮಹತ್ವದ ಯೋಜನೆಗಳನ್ನು ರೂಪಿಸಿದವರು. ಹಿಂದುಳಿದ, ದಲಿತ ವರ್ಗಕ್ಕೆ ಮೀಸಲಾತಿ ಕಲ್ಪಿಸಿ, ರಾಜಕೀಯ, ಉದ್ಯೋಗ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಆದ್ಯತೆ ನೀಡಿ ಮುಖ್ಯವಾಹಿನಿಗೆ ತರಲು ಅವರ ಕೊಡುಗೆ ಅಪಾರವಾಗಿದೆ ಎಂದರು. ದಿ. ದೇವರಾಜ ಅರಸು ಪುತ್ಥಳಿಗೆ ಮಾಜಿ ಶಾಸಕ ವೆಂಕಟರಾವ್‌ ನಾಡಗೌಡ, ನಯೋಪ್ರಾ ಅಧ್ಯಕ್ಷ ಎಂ.ಕಾಳಿಂಗಪ್ಪ ಮಾಲಾರ್ಪಣೆ ಮಾಡಿದರು. ಅಹಿಂದ ಸಂಘಟನೆ ಅಧ್ಯಕ್ಷ ಕರೇಗೌಡ ಕುರುಕುಂದಿ, ಜಿಪಂ ಸದಸ್ಯ ಎನ್‌.ಶಿವನಗೌಡ, ಆರ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದೊಡ್ಡಬಸವರಾಜ, ಕನಕಗುರುಪೀಠದ ತಾಲೂಕು ಅಧ್ಯಕ್ಷಟಿ.ಹನುಮಂತಪ್ಪ, ಪ್ರಭಾರಿ ತಹಶೀಲ್ದಾರ ಶಂಶಾಲಂ, ರಮೇಶಪ್ಪದಿದ್ದಗಿ, ಬಾಬರ್‌ ಪಾಷಾ, ಗಂಗಾಧರ ಹೂಗಾರ, ಖಾಜಿ ಮಲ್ಲಿಕ್‌, ಅಯ್ಯನಗೌಡ ಆಯನೂರು, ಮೊಹಿನುದ್ದೀನ್‌, ಮುಕ್ತಾರ್‌ ಪಟೇಲ್‌ ಇದ್ದರು. ಛೀಮಾರಿ: ಅಹಿಂದ ಸಂಘಟನೆಯಿಂದ ಹಮ್ಮಿಕೊಂಡಿದ್ದ ಅರಸು ಜಯಂತಿ ಕಾರ್ಯಕ್ರಮ ಕಾಟಾಚಾರಕ್ಕೆ ಮಾಡುವ ಅಗತ್ಯವಿರಲಿಲ್ಲ. ಜನರನ್ನು ಸಂಘಟಿಸಿ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಸಿದ್ದರೆ ಅರ್ಥಪೂರ್ಣವಾಗುತ್ತಿತ್ತು. ಇಂತಹ ಕಾರ್ಯಕ್ರಮವನ್ನು ಬೇಕಾಬಿಟ್ಟಿಯಾಗಿ ಅವಸರದಲ್ಲಿ ನಡೆಸುವ ಅವಶ್ಯಕತೆ ಇತ್ತೇ ಎಂದು ನಯೋಪ್ರಾ ಅಧ್ಯಕ್ಷ ಎಂ.ಕಾಳಿಂಗಪ್ಪ ಅಹಿಂದ ಸಂಘಟಕರಿಗೆ ಛೀಮಾರಿ ಹಾಕಿದ ಪ್ರಸಂಗ ಜರುಗಿತು. ವಿವಿಧೆಡೆ ಆಚರಣೆ: ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ ಅವರ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಾಗೂ ಮಾಜಿ ಪ್ರಧಾನಮಂತ್ರಿ ರಾಜೀವಗಾಂಧಿ ಜಯಂತಿ ಆಚರಿಸಲಾಯಿತು. ಮುಖಂಡರಾದ ಅಬ್ದುಲ್‌ ಗನಿಸಾಬ್‌,ಬಾಬರ್‌ ಪಾಷಾ, ಎಚ್‌.ಎನ್‌.ಬಡಿಗೇರ, ಕರೇಗೌಡ ಕುರಕುಂದಿ, ರಮೇಶಪ್ಪ ದಿದ್ದಗಿ, ಕರೀಂಸಾಬ, ಮೈನುದ್ದೀನ್‌ ಎತ್ಮಾರಿ, ಮುಕ್ತಾರ್‌ ಪಟೇಲ ಇತರರು ಇದ್ದರು.
ತಾಲೂಕಾಡಳಿತ: ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದಿಂದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 102ನೇ ಜಯಂತಿ ಆಚರಿಸಲಾಯಿತು. ಪ್ರಭಾರಿ ತಹಶೀಲ್ದಾರ ಶಂಶಾಲಂ, ಮಾಜಿ ಶಾಸಕ ವೆಂಕಟರಾವ್‌ ನಾಡಗೌಡ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಜಿಪಂ ಸದಸ್ಯ ಎನ್‌. ಶಿವನಗೌಡ ಗೊರೇಬಾಳ ಇತರರು ಇದ್ದರು.

ಟಾಪ್ ನ್ಯೂಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.