ಓಟ್ ಬ್ಯಾಂಕ್ ರಾಜಕಾರಣ ನಡೆಯಲ್ಲ
Team Udayavani, Aug 21, 2017, 3:10 PM IST
ಚನ್ನಗಿರಿ: ಅಲ್ಪಸಂಖ್ಯಾತರನ್ನು ಕೇವಲ ಓಟ್‌ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆಯೇ ಹೊರತು ಸಮುದಾಯದ ಅಭಿವೃದ್ಧಿಗೆ ಯಾವ ಪಕ್ಷದವರು ಪ್ರಾತಿನಿಧ್ಯ ನೀಡಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಮ್ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ನಲ್ಲೂರಿನ ಭಗೀರಥ ಸಮುದಾಯ ಭವನದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಅಲ್ಪಸಂಖ್ಯಾತರ ತಾಲೂಕು ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರಿಗೆ ಪ್ರತಿನಿಧ್ಯ ನೀಡದೇ ಸಮುದಾಯವನ್ನು ಕೇವಲ ಓಟ್ ಬ್ಯಾಂಕ್ ಆಗಿ ಮಾತ್ರ ಬಳಸಿಕೊಳ್ಳುತ್ತಿದೆ. ಇನ್ನೂ ಮುಂದೆ ಈ ಓಟ್ ಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ ಎಂದು
ಎಚ್ಚರಿಸಿದರು.
ಅಲ್ಪಸಂಖ್ಯಾತರಿಂದ ಕಾಂಗ್ರೆಸ್ ಮುಕ್ತ ರಾಜ್ಯವನ್ನು ಮಾಡಲು ಕಾಲ ಕೂಡಿಬಂದಿದೆ. ನಮ್ಮ ಸಮಾಜದ ಶ್ರೆಯೋಭಿವೃದ್ಧಿಗೆ ಬಿಜೆಪಿಯ ಆಡಳಿತದಲ್ಲಿ ಸಾಕಷ್ಟು ಅನುದಾನ, ಯೋಜನೆಗಳನ್ನು ನೀಡಲಾಗಿದೆ. ಇಂತಹ ಪಕ್ಷವನ್ನು ಕೋಮುವಾದಿ ಪಕ್ಷವೆಂದು ನಮ್ಮನ್ನು ಮತಗಳಾಗಿ ಪರಿವರ್ತನೆ ಗೊಳಿಸಿದ್ದಾರೆ. ಕಾಂಗ್ರೆಸ್‌ನವರ ತಂತ್ರಗಾರಿಕೆ ರಾಜಕಾರಣ ಜನರಿಗೆ ಗೊತ್ತಿದೆ. ನಾವುಗಳು ಸಂಘಟನೆಯ ಮೂಲಕ ತಕ್ಕ ಪಾಠವನ್ನು ಕಾಂಗ್ರೆಸ್ಸಿಗೆ ಕಲಿಸಲಿದ್ದೇವೆ ಎಂದು ಹೇಳಿದರು. ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಸಂಪುಟದ ಮಂತ್ರಿಗಳು
ಭ್ರಷ್ಟಚಾರದಲ್ಲಿ ತೊಡಗಿದ್ದಾರೆ. ಇಂತಹ ಸರ್ಕಾರವನ್ನು ಬೇರು ಸಮೇತ ಕಿತ್ತೂಗೆಯಲು ಕಾರ್ಯಕರ್ತರು ಪಣ ತೊಡಬೇಕು. ರಾಜ್ಯ ಸರ್ಕಾರ ಅಭಿವೃದ್ಧಿಯ ಹೆಸರಿನಲ್ಲಿ ಜನತೆಗೆ ಮಂಕುಬೂದಿ ಎರೆಚುವ ಮೂಲಕ ಅನಾಚರದಲ್ಲಿ ತೊಡಗಿದೆ ಎಂದು ಹೇಳಿದರು.
ಬಿಜೆಪಿ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಅಹಮ್ಮದ್ ಜಾನ್ (ಬಾಬು) ಮಾತನಾಡಿ, ಜಾತಿ-ಧರ್ಮವನ್ನು ಮುಂದಿಟ್ಟುಕೊಂಡು ರಾಜಕೀಯ
ಮಾಡುವವರಿಗೆ ಬುದ್ಧಿ ಕಲಿಸಬೇಕಿದೆ. ಬಿಜೆಪಿ ಕೋಮುವಾದಿ ಪಕ್ಷವೆಂದು ದೂರಿ ಜಾತಿ ರಾಜಕಾರಣ ಮಾಡುವವರ ವಿರುದ್ಧ ಅಲ್ಪಸಂಖ್ಯಾತರು ಎಚ್ಚೆತ್ತುಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಸಂಘಟನೆಯಾಗುವ ಮೂಲಕ ರಾಜಕೀಯವಾಗಿ ಶಕ್ತಿ ಪ್ರದರ್ಶನ ಮಾಡಬೇಕು
ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಮೇದಿಕೆರೆ ಸಿದ್ದೇಶ್, ಮಾಜಿ ಶಾಸಕ ಮಾಡಳ್ ವಿರೂಪಾಕ್ಷಪ್ಪ, ಮುಖಂಡರಾದ ಟಿಪ್ಪು ಸುಲ್ತಾನ್, ಮಹ್ಮದ್ ಯೂಸಪ್, ಅನ್ಸರ್ ಅಹಮ್ಮದ್, ಟಿ.ವಿ ರಾಜು, ಲೋಹಿತ್ ಕುಮಾರ್, ಜಿಪಂ ಸದಸ್ಯ ಲೋಕೇಶ್ವರ, ಟಿಪ್ಪು ಸುಲ್ತಾನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.