“ಅನೇಕರ ಬಾಳಿಗೆ ಬೆಳಕಾದ ದೇವರಾಜ ಅರಸು’  


Team Udayavani, Aug 22, 2017, 6:30 AM IST

2108ble17URS.jpg

ಬೆಳ್ತಂಗಡಿ: ಹಳ್ಳಿಯ ಮನೆಗಳಿಗೆ  “ಭಾಗ್ಯಜ್ಯೋತಿ’  ಯೋಜನೆ ತಂದು ಮನೆ ಬೆಳಗುವ ಕಾರ್ಯ ಮಾಡಿದ್ದೂ ಮಾತ್ರವಲ್ಲದೆ, ಜೀತಮುಕ್ತಿ, ಮಲಹೊರುವ ಪದ್ಧತಿ ನಿಷೇಧದಂತಹ ಮಹತ್ತರ ಕಾಯ್ದೆಯನ್ನು ತಂದು ಅನೇಕರ ಬಾಳಿನಲ್ಲೇ ಆಶಾಭಾವನೆಯ ನಂದಾದೀಪ ಬೆಳಗಿದವರು ಕೀರ್ತಿ ಶೇಷ ದೇವರಾಜ ಅರಸು ಅವರು ಎಂದು ಪತ್ರಕರ್ತ ಅಶ್ರಫ್‌ ಆಲಿಕುಂಞಿ ಹೇಳಿದರು.

ತಾಲೂಕು ಆಡಳಿತ ಹಾಗೂ ತಾ.ಪಂ. ಬೆಳ್ತಂಗಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳ್ತಂಗಡಿ, ನಗರ ಪಂಚಾಯತ್‌ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ  ತಾ.ಪಂ. ಸಭಾಂಗಣದಲ್ಲಿ ನಡೆದ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮೌನಕ್ರಾಂತಿಯ ಹರಿಕಾರ ಡಿ. ದೇವರಾಜ ಅವರ 102ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೃದ್ಧಾಪ್ಯ ವೇತನ, ವಿಕಲಾಂಗ ವೇತನ, ನಿರುದ್ಯೋಗಿ ವಿದ್ಯಾವಂತರಿಗೆ ಸ್ಟೈಪೆಂಡರಿ ಯೋಜನೆ, ದುರ್ಬಲ ಹಿಂದುಳಿದವರಿಗೆ ನಿವೇಶನ ಮತ್ತು ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಾಣ, ಭೂಮಸೂದೆ ಕಾಯ್ದೆ ಜಾರಿ ಮೊದಲಾದ ಕ್ರಾಂತಿಕಾರಿ ಯೋಜನೆ ಜಾರಿಗೆ ತಂದಿರುವ ಅರಸು ಅವರು ಅವರ ‘ದೇವರಾಜ’ ಹೆಸರು ಸೂಚಿಸುವಂತೆ ಬಡವರ ಪಾಲಿಗೆ “ದೇವ’ರಾಗಿ ರಾಜ್ಯದ ಪಾಲಿಗೆ ‘ರಾಜ’ರಾಗಿ ಮೆರೆದ ಏಕಮೇವಾದ್ವಿತೀಯ ಅರಸು ಅವರಾಗಿದ್ದರು. ಹೆಚ್ಚೇಕೆ ನಮ್ಮ ರಾಜ್ಯಕ್ಕೆ “ಕರ್ನಾಟಕ’ ಎಂಬ ಹೆಸರನ್ನೇ ತಂದುಕೊಟ್ಟ ಅವರು ಎಂಬುದು ರಾಜ್ಯದಲ್ಲಿ ಅಳಿಸಿಹಾಕಲಾಗದ ಇತಿಹಾಸ ನಿರ್ಮಿಸಿದ್ದಾರೆ ಎಂದರು.

ಶಾಸಕ ವಸಂತ ಬಂಗೇರ ಉದ್ಘಾಟಿಸಿ, ಬಡವರ ಪಾಲಿಕೆ ದೇವರಾಜ ಅರಸು ಅವರು ಅವಿಸ್ಮರಣೀಯರು. ವಿದ್ಯಾರ್ಥಿಗಳಿಗೆ ವಸತಿ ನಿಲಯ ಸ್ಥಾಪಿಸಿ ಹಳ್ಳಿಯ ಮಕ್ಕಳನ್ನೂ ಪದವೀಧರರನ್ನಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.ಪಟ್ಟಣ ಪಂಚಾಯತ್‌ ಅಧ್ಯಕ್ಷ ಮುಗುಳಿ ನಾರಾಯಣ ರಾವ್‌, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಶೀಲ್ದಾರ್‌ ಎಚ್‌.ಕೆ. ತಿಪ್ಪೇ ಸ್ವಾಮಿ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಸವರಾಜ್‌ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ ವಹಿಸಿದ್ದರು. ಸಭೆಯಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿದ್ದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಶೇ. 100 ಫಲಿತಾಂಶ ತಂದ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಶಾಸಕರು ಗೌರವಿಸಿದರು. ಮಡಂತ್ಯಾರು ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಕ್ಕೆ 9 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ಮತ್ತು ಸ್ನಾನಗೃಹ ಕಟ್ಟಡ ಒದಗಿಸಿಕೊಟ್ಟ ಪೆಟ್ರೋನೆಟ್‌ ಕಂಪೆನಿಯ ಅಧಿಕಾರಿ ರಾಜನ್ನವರ್‌ ಅವರನ್ನು ಶಾಸಕರು ಸನ್ಮಾನಿಸಿದರು.ಅಕ್ಷರ ದಾಸೋಹ ಉಪನಿರ್ದೇಶಕ ಕೆ.ಜಿ. ಲಕ್ಷ್ಮಣ ಶೆಟ್ಟಿ ಸ್ವಾಗತಿಸಿದರು. ಜಯಾನಂದ ಲಾ„ಲ ಮತ್ತು ಎಸ್‌. ಆರ್‌. ನಾಯಕ್‌   ನಿರೂಪಿಸಿದರು. ಹಿಂದುಳಿದ ವರ್ಗಗಳ ಪ್ರಭಾರ ವಿಸ್ತಣಾಧಿಕಾರಿ ಸುರೇಂದ್ರ ಎಸ್‌ ವಂದಿಸಿದರು.

ಟಾಪ್ ನ್ಯೂಸ್

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.