ಪೇಜಾವರ ಕಿರಿಯ ಶ್ರೀಗಳ ಮೊದಲ ಮಹಾಪೂಜೆ ಹಿರಿಯ ಶ್ರೀಗಳು ಇಂದು ಮಠಕ್ಕೆ?
Team Udayavani, Aug 22, 2017, 7:40 AM IST
ಉಡುಪಿ: ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯದ ಕಾರಣ ಶ್ರೀಕೃಷ್ಣ ಮಠದಲ್ಲಿ ಸೋಮವಾರ ಮಧ್ಯಾಹ್ನ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಹಾಪೂಜೆಯನ್ನು ಇದೇ ಮೊದಲ ಬಾರಿಗೆ ನಡೆಸಿದರು.
ರವಿವಾರ ಮಣಿಪಾಲ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ಸೋಮವಾರ ಪರಿಶೀಲನೆ ನಡೆಸಿದ ವೈದ್ಯರು ಆಸ್ಪತ್ರೆ ಯಿಂದ ಬಿಡುಗಡೆಗೊಳಿಸಲು ಒಪ್ಪಲಿಲ್ಲ. ಸ್ವಾಮೀಜಿಯವರು ಮಠಕ್ಕೆ ತೆರಳಲು ಉತ್ಸುಕ ರಾಗಿದ್ದರೂ ವೈದ್ಯರ ಒಪ್ಪಿಗೆ ಇಲ್ಲದ ಕಾರಣ ಕಿರಿಯ ಶ್ರೀಗಳಿಗೆ ದೂರವಾಣಿ ಕರೆ ನೀಡಿ “ಪರ್ಯಾಯಕ್ಕೆ ಕುಳಿತುಕೊಳ್ಳುವಾಗಲೇ ಇಬ್ಬರೂ ಜತೆ ಸೇರಿ ಮಾಡುವುದೆಂದು ತಿಳಿಸಿದ್ದೆವು. ಆದ್ದರಿಂದ ನೀವು ಪೂಜೆ ಸಲ್ಲಿಸಿ’ ಎಂದು ತಿಳಿಸಿದರು.
ಮಧ್ಯಾಹ್ನ 11.30ರ ವರೆಗೂ ಗುರುಗಳು ಬರುತ್ತಾರೆಂದು ಕಾದಿದ್ದ ಕಿರಿಯ ಶ್ರೀಗಳು ಮತ್ತೆ ಮಹಾಪೂಜೆ ನಡೆಸಿದರು. ಇತ್ತ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ತಮ್ಮ ದೈನಂದಿನ ಧಾರ್ಮಿಕ ಕೈಂಕರ್ಯ ಗಳನ್ನು ಪೇಜಾವರ ಶ್ರೀಗಳು ನಡೆಸಿದರು. ಮಂಗಳವಾರ ಆಸ್ಪತ್ರೆಯಿಂದ ಮಠಕ್ಕೆ ಮರಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.