ಕ್ರಮಕ್ಕೆ ಪಾಲಿಕೆ ಅಧಿಕಾರಿಗಳ ಅಸಹಕಾರ
Team Udayavani, Aug 22, 2017, 12:08 PM IST
ಬೆಂಗಳೂರು: ನಗರದಲ್ಲಿ ಹಲವೆಡೆ ನಿಯಮ ಉಲ್ಲಂ ಸಿ ಬೃಹತ್ ಕಟ್ಟಡಗಳನ್ನು ನಿರ್ಮಿಸಿರುವ ಭೂ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳ ಅಸಹಕಾರವೇ ಅಡ್ಡಿಯಾಗಿದೆ ಎಂದು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂ ಸಿ ನಿರ್ಮಿಸುತ್ತಿರುವ ಕಟ್ಟಡಗಳ ವಿರುದ್ಧ ಸಮಿತಿಯಿಂದ ಕ್ರಮಕೈಗೊಳ್ಳಲು ಮುಂದಾದರೂ, ಅಧಿಕಾರಿಗಳ ಅಸಹಕಾರ ಧೋರಣೆಯಿಂದ ಹಿನ್ನಡೆಯಾಗಿದೆ.
ರಾಜಕಾಲುವೆ ಮೇಲೆ ಕಟ್ಟಡ ನಿರ್ಮಿಸುವ ಹಾಗೂ ನಕ್ಷೆ ಮಂಜೂರಾತಿ ಉಲ್ಲಂ ಸಿ ನಿರ್ಮಿಸುತ್ತಿರುವ ಕಟ್ಟಡಗಳ ಪರಿಶೀಲನೆಗೆ ಮುಂದಾದಾಗ ಅಧಿಕಾರಿಗಳು ಸಹಕರಿಸುತ್ತಿಲ್ಲ. ಅಗತ್ಯ ದಾಖಲೆ ಕೋರಿ ಲಿಖೀತ ಮನವಿ ಸಲ್ಲಿಸಿ, ಆಯುಕ್ತರಿಗೆ ದೂರು ನೀಡಿದರು ಪ್ರಯೋಜನವಾಗಿಲ್ಲ ಎಂದು ದೂರಿದರು.
ಅನುಮಾನಕ್ಕೆ ಎಡೆ
ಲಗ್ಗೆರೆ ವಾರ್ಡ್‌ನಲ್ಲಿ ಬೆಥೆಲ್ ಶಿಕ್ಷಣ ಟ್ರಸ್ಟ್ ನೆಲಮಹಡಿ ಸೇರಿ 3 ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ಪಡೆದು, ಐದು ಮಹಡಿಯ ಕಟ್ಟಡ ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿಲ್ಲ. ಇದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಹೇಳಿದರು.
ಸಮಿತಿಯ ಸದಸ್ಯ ಎನ್.ರಾಜಶೇಖರ್ ಮಾತನಾಡಿ, ಬೈರತಿ ಗ್ರಾಮದ ಸರ್ವೆ ಸಂಖ್ಯೆ 12/1, 12/2ರಲ್ಲಿ ಫೌಲಿó ಮತ್ತು ಡೈರಿ ಫಾರಂ ಉದ್ದೇಶಕ್ಕಾಗಿ 1970ರಲ್ಲಿ ಭೂ ಪರಿವರ್ತನೆ ಮಾಡಿಸಿಕೊಂಡಿದ್ದ ಭೂಮಿಯಲ್ಲಿ ಅಕ್ರಮವಾಗಿ ಸಲಾರ್‌ಪುರಿಯಾ ಸಂಸ್ಥೆಯು 33 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಿಸುತ್ತಿದ್ದಾರೆ. ಇದನ್ನು ದಾಖಲೆಗಳ ಸಮೇತವಾಗಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕ್ಕೆ ಮುಂದಾಗಿಲ್ಲ ಎಂದರು ಆರೋಪಿಸಿದರು.
ಕಳೆದ ಬಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದಂತಹ ಕೋಡಿಚಿಕ್ಕನಹಳ್ಳಿಯ ಸರ್ವೆ ಸಂಖ್ಯೆ 25/2,3,4 ರಲ್ಲಿನ 1.21 ಎಕರೆ ಖರಾಬು ಸರ್ಕಾರಿ ಜಾಗ ಮತ್ತು ರಾಜಕಾಲುವೆಯನ್ನು ಮಹಾವೀರ್ ರೆಡ್ಡಿ ಕನ್‌ಸ್ಟ್ರಕ್ಷನ್ ಸಂಸ್ಥೆಯುವರು ಒತ್ತುವರಿ ಮಾಡಿದ್ದಾರೆ.
ಮಲ್ಲಸಂದ್ರ ಗ್ರಾಮದ ಸರ್ವೆ ಸಂಖ್ಯೆ 83/1,2ರಲ್ಲಿ ಸರ್ಕಾರಿ ಜಾಗವನ್ನು ಕಬಳಿಸಿ ಜಿ.ಎಂ.ಇನೋನೆಟ್ ಸಂಸ್ಥೆಯು ಬಹುಮಹಡಿ ಕಟ್ಟಡ ನಿರ್ಮಿಸುತ್ತಿದ್ದಾರೆ. ಈಗ ನಗರದ ಹಲವಾರು ಭಾಗಗಳಲ್ಲಿ ಅಧಿಕಾರಿಗಳು ಬಿಲ್ಡರ್‌ಗಳೊಂದಿಗೆ ಶಾಮೀಲಾಗಿ ಕಾನೂನು ಬಾಹಿರ ಕಟ್ಟಡಗಳಿಗೆ ಅನುಮತಿ ನೀಡಿ ಅನಾಹುತಗಳಿಗೆ ದಾರಿ ಮಾಡಿಕೊಡುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Kuchuku Movie: ಟೀಸರ್‌ನಲ್ಲಿ ಕುಚುಕು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.