ಶಾಲೆ ಎದುರೇ ಕಾಣಲಿದೆ ಸೌರವ್ಯೂಹದ ವಿಸ್ಮಯ


Team Udayavani, Aug 22, 2017, 12:08 PM IST

mr-sitharam.jpg

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಸೌರವ್ಯೂಹದ ವಿಸ್ಮಯಗಳ ದರ್ಶನ ಮಾಡಿಸುವ “ಶಾಲೆಯ ಅಂಗಳದಲ್ಲೇ ತಾರಾಲಯ’ ಯೋಜನೆಗೆ ಆ.23ರಂದು ಚಾಲನೆ ದೊರೆಯಲಿದೆ. ದೇಶದಲ್ಲೇ ಮೊದಲ ಪ್ರಯೋಗ ಎನಿಸಿದ “ಸಂಚಾರಿ ಡಿಜಿಟಲ್‌ ತಾರಾಲಯ’ದ ಮೂಲಕ ಶಾಲಾ ಅಂಗಳಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ಸೌರವ್ಯೂಹ ಮತ್ತು ಆಕಾಶ ಕಾಯಗಳ ಬಗ್ಗೆ ವಿವರ ನೀಡುವ ಕಾರ್ಯ ಇದಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್‌.ಸೀತಾರಾಂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಚಲಿತ ಖಗೋಳ ವಿಜ್ಞಾನದ ಬಗ್ಗೆ ಅರಿವು ಮೂಡಿಸಲು “ಶಾಲಾ ಅಂಗಳದಲ್ಲೇ ತಾರಾಲಯ’ ಯೋಜನೆ ರೂಪಿಸಲಾಗಿದೆ. ಬುಧವಾರ ವಿಧಾನಸೌಧ ಬಾಂಕ್ವೆಂಟ್‌ ಸಭಾಂಗಣದಲ್ಲಿ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.

6 ಕೋಟಿ ರೂ. ವೆಚ್ಚದಲ್ಲಿ 5 ಸಂಚಾರಿ ತಾರಾಲಯಗಳನ್ನು ಖರೀದಿಸಲಾಗಿದ್ದು, ಸೆ. 4 ರಿಂದ ತಾರಾಲಯಗಳು ಬೆಳಗಾವಿ, ಬೆಂಗಳೂರು, ಮೈಸೂರು, ಕಲಬುರಗಿ ವಿಭಾಗಕ್ಕೆ ತೆರಳಲಿವೆ. ಬಳಿಕ ಹಂತ ಹಂತವಾಗಿ ಗ್ರಾಮೀಣ ಭಾಗದ ಅನುದಾನಿತ ಶಾಲೆಗಳಿಗೂ ಸಂಚರಿಸಲಿವೆ. ಪ್ರತಿ ಜಿಲ್ಲೆಯಲ್ಲಿ ಎರಡು ತಿಂಗಳ ಅವಧಿಯವರಗೆ ಸಂಚರಿಸುವ ತಾರಾಲಯ, ಎಲ್ಲ ಪ್ರೌಢಶಾಲೆಗಳಿಗೆ ಭೇಟಿ ನೀಡಲಿವೆ ಎಂದರು.

ಮೊದಲಿಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಪ್ರೌಢಶಾಲೆಗಳಿಗೆ ತೆರಳಿ ಪ್ರೊಜೆಕ್ಟರ್‌ ಸಹಾಯದಿಂದ ಕಾಲ್ಪನಿಕ ಆಕಾಶವನ್ನು ಸೃಷ್ಟಿಸಿ, ವಿದ್ಯಾರ್ಥಿಗಳಿಗೆ ಮನೋರಂಜನೆ ಮೂಲಕ ಖಗೋಳ ವಿಜ್ಞಾನ ಮತ್ತು ಇತರೆ ವೈಜ್ಞಾನಿಕ ವಿಷಯಗಳ ತಿಳಿವಳಿಕೆ ಮೂಡಿಸಲಾಗುವುದು. ಪ್ರತಿ ಪ್ರದರ್ಶನವು 25- 30 ನಿಮಿಷಗಳ ಅವಧಿಯಿದ್ದು, 30- 40 ವಿದ್ಯಾರ್ಥಿಗಳು ಏಕಕಾಲದಲ್ಲಿ ವೀಕ್ಷಣೆ ಮಾಡಬಹುದಾಗಿದೆ ಎಂದರು.  ಮುಂದಿನ ವರ್ಷ ಮಾರ್ಚ್‌ ನಂತರ ತಾರಾಲಯ ಜನಸಾಮಾನ್ಯರ ವೀಕ್ಷಣೆಗೂ ಅವಕಾಶ ಕಲ್ಪಿಸಲಾಗುವುದು ಎಂದರು.

ಮಂಗಳೂರಿನ ಪಿಲಿಕುಳ ನಿಸರ್ಗ ಧಾಮದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವ 3ಡಿ ಡಿಜಿಟಲ್‌ ತಾರಾಲಯವನ್ನು ನವೆಂಬರ್‌ ಮೊದಲ ವಾರ ಲೋಕಾರ್ಪಣೆ ಮಾಡಲಾಗುವುದು. ಇದೇ ಮಾದರಿಯಲ್ಲಿ ಹುಬ್ಬಳ್ಳಿ, ಬೆಳಗಾವಿ ಸೇರಿ ಇತರ ಜಿಲ್ಲೆಗಳಲ್ಲೂ ತಾರಾಲಯ ಸ್ಥಾಪಿಸಲು ಚಿಂತಿಸಲಾಗಿದೆ.
-ಎಂ.ಆರ್‌.ಸೀತಾರಾಂ, ಸಚಿವ

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.