ಗುರುಸಿದ್ದೇಶ್ವರ ರಥೋತ್ಸವ
Team Udayavani, Aug 22, 2017, 1:00 PM IST
ಹುಬ್ಬಳ್ಳಿ: ಇಲ್ಲಿನ ಮೂರುಸಾವಿರ ಮಠದ ಶ್ರೀ ಗುರುಸಿದ್ದೇಶ್ವರರ ರಥೋತ್ಸವ ಶ್ರಾವಣ ಮಾಸದ ಕೊನೆಯ ಸೋಮವಾರ ಮಳೆಯ ಸಿಂಚನದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು. ಶ್ರೀ ಮಠದ ಆವರಣದಲ್ಲಿ ಸಂಜೆ 6:00 ಗಂಟೆ ಸುಮಾರಿಗೆ ರಥೋತ್ಸವ ಆರಂಭವಾಯಿತು.
ಮಠದಿಂದ ಹೊರಟು ಸೊರಬದ ಮಠ ಗಲ್ಲಿ ವರೆಗೆ ತೆರಳಿ ಮತ್ತೆ ಶ್ರೀಮಠಕ್ಕೆ ಮರಳಿತು. ಇದಕ್ಕೂ ಮೊದಲು ಶ್ರೀಮಠದಿಂದ ಬಮ್ಮಾಪುರ ಓಣಿಯ ಗುರುಸಿದ್ದೇಶ್ವರ ಕಲ್ಯಾಣಮಂಟಪ(ಓಲಿಮಠ)ಕ್ಕೆ ಪಲ್ಲಕ್ಕಿ ಹೋಗಿ ಬಂತು. ರಥೋತ್ಸವದಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಭಕ್ತಸಮೂಹ ಪಾಲ್ಗೊಂಡಿತು. ಗುರುಸಿದ್ದೇಶ್ವರ ಮಹಾರಾಜ ಕೀ ಜೈ, ಹರ ಹರ ಮಹಾದೇವ.. ಎಂಬ ಉದ್ಗಾರ ಮುಗಿಲು ಮುಟ್ಟಿತ್ತು.
ರಥೋತ್ಸವದ ನಂತರ ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ರಜತ ಸಿಂಹಾಸನಾಧೀಶರಾದರು. ಈ ಸಂದರ್ಭದಲ್ಲಿ ಎರಡೆತ್ತಿನಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಇನ್ನಿತರರು ಇದ್ದರು. ಶ್ರೀ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ನೂರಾರು ಭಕ್ತರು ತಂಡೋಪತಂಡವಾಗಿ ಶ್ರೀಮಠಕ್ಕೆ ಆಗಮಿಸಿ ಕತೃì ಗದ್ದುಗೆ ದರ್ಶನ ಪಡೆದರು.
ಸಂಜೆ ನಡೆದ ರಥೋತ್ಸವದಲ್ಲಿ ಮಹಾಪೌರ ಡಿ.ಕೆ. ಚವ್ಹಾಣ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ಮುಖಂಡರಾದ ಮಹೇಶ ಟೆಂಗಿನಕಾಯಿ, ಶಿವು ಮೆಣಸಿನಕಾಯಿ, ಅರವಿಂದ ಕುಬಸದ, ಹನುಮಂತ ಶಿಗ್ಗಾಂವಿ, ವೀರೇಶ ಸಂಗಳದ, ರಾಜು ಕೋರ್ಯಾಣಮಠ ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.