ರಾಷ್ಟ್ರೀಕೃತ ಬ್ಯಾಂಕ್‌ನ ಕೃಷಿ ಸಾಲಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Aug 22, 2017, 1:00 PM IST
ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್‌ನ ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರೈತ ಮತ್ತು ಹಸಿರು ಸೇನೆ ಹಾಗೂ ಕರ್ನಾಟಕ ಪ್ರಾಂತ ಸಂಘ-ರೈತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕಳೆದ 2-3 ವರ್ಷದಿಂದ ರಾಜ್ಯದ ಬಹುತೇಕ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬರಗಾಲ ಉಂಟಾಗಿದ್ದು, ರೈತ ಸಮುದಾಯ ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲವನ್ನು ಮರುಪಾವತಿ ಮಾಡುವುದು ಅಸಾಧ್ಯದ ಮಾತಾಗಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ಬಾರಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಲಾಯಿತು.
ರೈತ ಸಂಘದ ರಾಜ್ಯ ಕಾರ್ಯದರ್ಶಿ ನಾಗಪ್ಪ ಉಂಡಿ ಮಾತನಾಡಿ, ರಾಜ್ಯ ಸರಕಾರ ಕೇವಲ ಸಹಕಾರಿ ಕ್ಷೇತ್ರದ 50 ಸಾವಿರ ರೂಪಾಯಿ ರೈತರ ಸಾಲಮನ್ನಾ ಮಾಡಿದೆ. ಆದರೆ, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರೈತರ 52 ಸಾವಿರ ಕೋಟಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಸ್ಪಂದಿಸುತ್ತಿಲ್ಲ.
ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ರೈತ ವಿರೋಧಿ ನಿಲುವನ್ನು ತಾಳಿವೆ ಎಂದು ದೂರಿದರು. ಜಿಲ್ಲಾಧ್ಯಕ್ಷ ಬಿ.ಎಸ್. ಸೊಪ್ಪಿನ ಮಾತನಾಡಿ, ಬರದಿಂದ ತೀವ್ರಗೊಂಡಿರುವ ಕೃಷಿ ಬಿಕ್ಕಟ್ಟಿನ ಫಲವಾಗಿ ರೈತರ ಆತ್ಮಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೇಂದ್ರ ಸರಕಾರ ರೈತರ ಸಾಲಮನ್ನಾ ಅಸಾಧ್ಯ ಎಂಬುದಾಗಿ ಹೇಳುತ್ತಿರುವುದು ಖಂಡನೀಯ.
ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ಉದ್ಯಮಿದಾರರ ಹಾಗೂ ಕಾರ್ಪೋರೇಟ್ ಕಂಪನಿಗಳ 12 ಲಕ್ಷ ಕೋಟಿ ತೆರಿಗೆ ಮತ್ತು ಸಾಲಮನ್ನಾ ಮಾಡಿದೆ. ದೇಶಕ್ಕೆ ಅನ್ನ ನೀಡುವ ರೈತರ ಸಾಲವನ್ನು ಮನ್ನಾ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಜಿಲ್ಲೆಯ ಕಲಘಟಗಿ ತಾಲೂಕುಗಳಲ್ಲಿ ನೂರಾರು ರೈತರು ಸರಕಾರಿ ಜಮೀನುಗಳಲ್ಲಿ 40-50 ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವರಿಗೆ ಹಕ್ಕುಪತ್ರ ನೀಡಬೇಕು. ಮುಂಗಾರು ಕೈಕೊಟ್ಟಿದ್ದರಿಂದ ಉದ್ಯೋಗವಿಲ್ಲದೆ ರೈತರು ವಲಸೆ ಹೋಗುತ್ತಿದ್ದಾರೆ. ರೈತರಿಗೆ, ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಈರಣ್ಣ ಬಡಿಗೇರ, ಪ್ರಧಾನ ಕಾರ್ಯದರ್ಶಿ ಕೆ.ಎಚ್. ಪಾಟೀಲ, ಎಚ್.ಜಿ. ದೇಸಾಯಿ, ಶಿವಶರಣ ಗೋನಾಳ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.