ಮಾಲೆಗಾಂವ್ ಸ್ಫೋಟ ಕೇಸ್; 9ವರ್ಷಗಳ ಬಳಿಕ ಜೈಲಿನಿಂದ ಪುರೋಹಿತ್ ರಿಲೀಸ್
Team Udayavani, Aug 23, 2017, 11:56 AM IST
ಮುಂಬೈ: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕಳೆದ 9 ವರ್ಷಗಳಿಂದ ಜೈಲಿನಲ್ಲಿರುವ ಆರೋಪಿ ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಟಾಲೋಜಾ ಜೈಲಿನಿಂದ ಬಿಡುಗಡೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಮಾಲೆಗಾಂವ್ ಸ್ಫೋಟದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಜೈಲು ಸೇರಿದ್ದ ಲೆ.ಕರ್ನಲ್ ಪುರೋಹಿತ್ ಗೆ 9 ವರ್ಷಗಳ ನಂತರ ಸುಪ್ರೀಂಕೋರ್ಟ್ ಸೋಮವಾರ ಜಾಮೀನು ನೀಡಿತ್ತು. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಟಾಲೋಜಾ ಜೈಲಿನಿಂದ ಪುರೋಹಿತ್ ಬಿಡುಗಡೆಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾನು ಮತ್ತೆ ಸೇನಾ ಸಮವಸ್ತ್ರ ಧರಿಸಲು ಬಯಸುತ್ತೇನೆ. ಸಮವಸ್ತ್ರ ನನ್ನಿಂದ ದೂರವಾಗಿದ್ದು, ಅದನ್ನು ನಾನು ಧರಿಸಲೇಬೇಕು ಎಂಬುದನ್ನು ಬಲವಾಗಿ ಸಮರ್ಥಿಸಿಕೊಂಡ ಪುರೋಹಿತ್, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ವಾಪಸ್ ಆಗುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಭಾರತೀಯ ಸೇನೆಯಂತಹ ಸಂಸ್ಥೆ ಇಡೀ ಜಗತ್ತಿನಲ್ಲೇ ಇಲ್ಲ ಎಂದು ಮಂಗಳವಾರ ಸೆಶನ್ಸ್ ಕೋರ್ಟ್ ಹೊರಗೆ ಸುದ್ದಿಗಾರರ ಜತೆ ಮಾತನಾಡುತ್ತ ಲೆ.ಕರ್ನಲ್ ಪುರೋಹಿತ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.