ಬಿಎಸ್‌ವೈ ವಿರುದ್ಧದ ರಾಜಕೀಯ ಷಡ್ಯಂತ್ರಕ್ಕೆ ಕಿಡಿ
Team Udayavani, Aug 23, 2017, 12:30 PM IST
ತಿ.ನರಸೀಪುರ: ಭ್ರಷ್ಟಚಾರ ನಿಗ್ರಹ ದಳವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ರಾಜಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಜಮಾವಣೆಗೊಂಡ ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರು ಖಾಸಗಿ ಬಸ್ ನಿಲ್ದಾಣ ವೃತ್ತದವರೆಗೆ ಮೆರವಣಿಗೆಯಲ್ಲಿ ತೆರಳಿ, ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ ಘೋಷಣೆ ಕೂಗುತ್ತಾ ಪ್ರತಿಭಟನೆ ಪ್ರಾರಂಭಿಸಿದರು.
ಸಿಎಂ ಸಣ್ಣತನ: ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿ ಮೇಲೆ ಒತ್ತಡ ತರುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಸಣ್ಣತನವನ್ನು ಪ್ರದರ್ಶಿಸಿದ್ದಾರೆ. ಮಗನ ಮಂತ್ರಿಮಾಡಿದ ಆಸೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಸೀಟು ಹಂಚಿಕೆ ಮಾಡುವಲ್ಲಿ ತಲ್ಲಿನರಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಕಾಂಗ್ರೆಸ್ ಪಕ್ಷವನ್ನೇ ಮಾರಿಕೊಂಡಿದ್ದಾರೆ ಎಂದು ಆರೋಪಿಸಿದರು.
ಬಿಎಸ್‌ವೈ ಸಿಎಂ ಸ್ಥಾನ ತಪ್ಪಿಸಲು ಸಾಧ್ಯವಿಲ್ಲ: ಹಿರಿಯ ಮುಖಂಡ ಹಾಗೂ ಜಿಪಂ ಮಾಜಿ ಸದಸ್ಯ ಪುಟ್ಟಬಸವಯ್ಯ ಮಾತನಾಡಿ, ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆಯಾಗಲಿ ಅಥವಾ ದಕ್ಷ ಆಡಳಿತವನ್ನು ನೀಡುವಲ್ಲಿ ಬದ್ಧತೆಯಿಲ್ಲ. ಬದಲಿಗೆ ಜನರಲ್ಲಿ ಬಿಜೆಪಿ ಬಗ್ಗೆ ಗೊಂದಲವನ್ನುಂಟು ಮಾಡಲು ಷಡ್ಯಂತ್ರ ನಡೆಸಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕಾಂಗ್ರೆಸ್ ಕುತಂತ್ರಕ್ಕೆ ಜನರು ಮನ್ನಣೆ ನೀಡದೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ನೀಡಿದಾಗ ಕಾಂಗ್ರೆಸ್‌ಗೆ ತಪ್ಪಿನ ಅರಿವಾಗಲಿದೆ. ಯಡಿಯೂರಪ್ಪ ಅವರು ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲವೆಂದು ಭವಿಷ್ಯ ನುಡಿದರು.
ಸಿಎಂ ವಿರುದ್ಧ ದೂರಿದ್ದರು ಕ್ರಮವಿಲ್ಲ: ಜಿಪಂ ಉಪಾಧ್ಯಕ್ಷ ಕೈಯಂಬಳ್ಳಿ ಜಿ.ನಟರಾಜು ಮಾತನಾಡಿ, ರಾಜ್ಯ ಸರ್ಕಾರವೇ ರಚನೆ ಮಾಡಿದ ಭ್ರಷ್ಟಚಾರ ನಿಗ್ರಹದ ಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೇ 17 ರಿಂದ 20ಕ್ಕೂ ಹೆಚ್ಚಾ ದೂರುಗಳು ಸಲ್ಲಿಕೆಯಾದರೂ ಎಸಿಬಿಯ ಯಾವೊಬ್ಬ ಅಧಿಕಾರಿಯೂ ಎಫ್ಐಆರ್ ಹಾಕಿ ತನಿಖೆಯನ್ನು ಆರಂಭಿಸಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಎಲ್ಲಾ ಪ್ರಕರಣಗಳಿಂದಲೂ ಖುಲಾಸೆಗೊಂಡ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೊಕದ್ದಮ್ಮೆ ದಾಖಲಿಸಿರುವುದು ಸೇಡಿನ ರಾಜಕಾರಣವಾಗಿದೆ.
ಕೆಪಿಸಿಸಿ ಮಹಿಳಾ ಅಧ್ಯಕ್ಷ ಲಕ್ಷ್ಮೀ ನಿಂಬಾಳ್ಕರ್, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇನ್ನಿತರರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ, ಅಕ್ರಮ ಬಯಲಿಗೆಳೆದಿದ್ದು ಜಗಜಾjಹಿರಾತದರೂ ಅವರುಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸಿದ್ದರಾಮಯ್ಯ ಅವರಿಂದ ಪ್ರಾಮಾಣಿಕ ಆಡಳಿತ ನೀಡಲು ಸಾಧ್ಯವಿಲ್ಲವೆಂದು ಲೇವಡಿ ಮಾಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕರೋಹಟ್ಟಿ ಮಹದೇವಯ್ಯ, ಜಿಲ್ಲಾ ಸಮಿತಿ ಸದಸ್ಯ ತೋಟದಪ್ಪ ಬಸವರಾಜು, ಕ್ಷೇತ್ರಾಧ್ಯಕ್ಷ ಹೆಚ್.ಎಂ.ಪರಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಕರೋಹಟ್ಟಿ ಬಸವರಾಜು, ಬಿ.ಎನ್.ಸುರೇಶ, ಶಕ್ತಿ ಕೇಂದ್ರ ಅಧ್ಯಕ್ಷ ಬಿ.ವೀರಭದ್ರಪ್ಪ, ಯುವ ಮೋರ್ಚಾ ಅಧ್ಯಕ್ಷ ಮಣಿಕಂಠರಾಜ್‌ಗೌಡ, ಪ್ರಧಾನ ಕಾರ್ಯದರ್ಶಿ ಡಿ.ಎಂ.ಸಿದ್ದರಾಜು, ತಾಪಂ ಮಾಜಿ ಸದಸ್ಯ ಬಸವರಾಜು,
-ವೀರಶೈವ ಮಹಾಸಭಾದ ಯುವ ಅಧ್ಯಕ್ಷ ಆರ್.ಶಿವಕುಮಾರ್, ಮುಖಂಡರಾದ ಪಿ.ಪ್ರಭಾಕರ, ವೆಂಕಟೇಶ್, ಬನ್ನಹಳ್ಳಿಹುಂಡಿ ಪ್ರಕಾಶ, ಸೋಸಲೆ ಮಂಜುನಾಥ, ವಿಶ್ವನಾಥ, ಎಂ.ಮಿಥುನ್, ಕಾಳೇಗೌಡ, ಬಿ.ಎಂ.ಯೋಗಾನಂದ, ಚನ್ನಮಾಯಿಗೌಡ, ಆರ್.ರಾಮಸ್ವಾಮಿ, ಶ್ರೀನಿವಾಸರಾವ್, ಕೊತ್ತೇಗಾಲ ಕಿಟ್ಟಿ, ನಿಲಸೋಗೆ ಸಿದ್ಧರಾಜು, ಅಶೋಕ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.