ದ್ವೇಷ ರಾಜಕಾರಣ ಖಂಡಿಸಿ ಬಿಜೆಪಿ ಪಂಜಿನ ಮೆರವಣಿಗೆ
Team Udayavani, Aug 23, 2017, 12:46 PM IST
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮಂಗಳವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು. ನಗರದ ಕೋರ್ಟ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಯಿತು.
ಕಾಂಗ್ರೆಸ್ ಸರಕಾರ ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ನಾಯಕರ ಮೇಲೆ ವಿನಾಕಾರಣ ಆರೋಪ ಮಾಡುವ ಮೂಲಕ ಸೇಡಿನ ರಾಜಕಾರಣಕ್ಕೆ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು. ಬಿಜೆಪಿ ಮುಖಂಡ ತಿಪ್ಪಣ್ಣ ಮಜ್ಜಗಿ ಮಾತನಾಡಿ, ರಾಜ್ಯದಲ್ಲಿ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸುವ ವಾತಾವರಣ ಇಲ್ಲದಂತಾಗಿದೆ.
ಆಡಳಿತ ಸಂಪೂರ್ಣ ಕುಸಿದಿದ್ದು, ಸರಕಾರದ ಆಡಳಿತ ವೈಫಲ್ಯ ಮುಚ್ಚಿಕೊಳ್ಳವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡಿನ ರಾಜಕಾರಣಕ್ಕೆ ಮುಂದಾಗಿದ್ದಾರೆ. ಇಂತಹ ದುರಾಡಳಿತದಿಂದ ಕಾಂಗ್ರೆಸ್ ಪಕ್ಷದ ಅವನತಿ ಶುರುವಾಗಿದೆ. ದ್ವೇಷದ ರಾಜಕಾರಣ ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನ ಕೊಡಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಮುಖಂಡರಾದ ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ವೀರಭದ್ರಪ್ಪ ಹಾಲಹರವಿ, ಜಯತೀರ್ಥ ಕಟ್ಟಿ, ಲಿಂಗರಾಜ ಪಾಟೀಲ, ವಸಂತ ನಾಡಜೋಶಿ, ರವಿ ನಾಯಕ, ವೀರೇಶ ಸಂಗಳದ, ಮಹೇಂದ್ರ ಕೌತಾಳ, ಉಮಾ ಮುಕುಂದ, ಸೀಮಾ ಲದವಾ, ಭಾರತಿ ಪಾಟೀಲ, ಪಲ್ಲವಿ ಹೂಲಿ, ವಿಜಯಲಕ್ಷ್ಮೀ ತಿಮೋಲಿ, ರಂಜನಾ ಬಂಕಾಪುರ ಹಾಗೂ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.