ಮರಳು ತೆಗೆಯಲು ಪರವಾನಿಗೆ ನೀಡಿ ಬೃಹತ್ ಜನಾಂದೋಲನದ ಎಚ್ಚರಿಕೆ
Team Udayavani, Aug 24, 2017, 8:05 AM IST
ಉಡುಪಿ: ಜಿಲ್ಲೆಯಲ್ಲಿ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ಎಲ್ಲ 170 ಮಂದಿಗೂ ಮರಳು ತೆಗೆಯಲು ಪರವಾನಿಗೆ ನೀಡಿ. ಜನರಿಗೆ ಮರಳು ಸಿಗುವಂತೆ ಮಾಡಿಕೊಡಿ. ಅಧಿಕಾರಿ ವರ್ಗ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಹಾಗೂ ಜನರಿಗೆ ನ್ಯಾಯ ಒದಗಿಸಿಕೊಡಬೇಕು.ಆ.28 ರೊಳಗೆ ಯಾವುದೇ ಕ್ರಮಕೈಗೊಳ್ಳದಿದ್ದರೆ ಬೃಹತ್ ಜನಾಂದೋಲನ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಎಚ್ಚರಿಸಿದೆ.
ಆ.7ರಿಂದ ಮರಳು ತೆಗೆಯುವ ಬಗ್ಗೆ ಪರವಾನಿಗೆ ನೀಡುವ ಅವಕಾಶವಿದ್ದರೂ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಂತ ಹಂತವಾಗಿ ಮರಳುಗಾರಿಕೆ ನಡೆಸುವುದಾಗಿ ಹೇಳಿ ಜನರ ಹಾದಿ ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಮರಳುಗಾರಿಕೆಗೆ ಹೊಸ ಅರ್ಜಿ ಸ್ವೀಕರಿಸುತ್ತಿದ್ದು, ಕಳೆದ 25 ವರ್ಷಗಳಿಂದ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದವರಿಗೆ ಅನ್ಯಾಯವಾಗಿದೆ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ಕೈವಾಡ
ಜಿಲ್ಲೆಯಲ್ಲಿ 170 ಜನ ಸಾಂಪ್ರದಾಯಿಕ ಮರಳುಗಾರಿಕೆ ಮಾಡುತ್ತಿದ್ದವರಲ್ಲಿ ಸುಮಾರು 45 ಮಂದಿ ಮೇಲೆ ಜಿಲ್ಲಾಡಳಿತ ಹೈಕೋರ್ಟ್‌ನಲ್ಲಿ ಕೇವಿಯಟ್ ಹಾಕಿರುವುದು ಸಂಶಯ ಮೂಡಿಸಿದೆ. ಈ ಕೇವಿಯೆಟ್ ಅರ್ಜಿಯ ಹಿಂದೆ ಕಾಂಗ್ರೆಸ್ಸಿಗರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಕೈವಾಡವಿದ್ದು, 45 ಜನರನ್ನು ಹೊರಗಿಡುವ ಪ್ರಯತ್ನ ಇದಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಬಿಜೆಪಿ ಸಲ್ಲಿಸಿದ ಮನವಿಯಲ್ಲಿ ತಿಳಿಸಿದೆ.
ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ವಿ. ಸುನಿಲ್ ಕುಮಾರ್, ಮಾಜಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯಶ್‌ಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕೋಶಾಧಿಕಾರಿ ಬಿ. ರವಿ ಅಮೀನ್, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರಾಧ್ಯಕ್ಷ ಪ್ರಭಾಕರ ಪೂಜಾರಿ, ಪ್ರ. ಕಾರ್ಯದರ್ಶಿಗಳಾದ ಜಗದೀಶ ಆಚಾರ್ಯ ಕಪ್ಪೆಟ್ಟು, ಉಪೇಂದ್ರ ನಾಯಕ್, ಟಿ.ಜಿ. ಹೆಗ್ಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.