ರಾಮ್ ರಹೀಂ ದೋಷಿಯೋ, ಖುಲಾಸೆಯೋ? 200 ಕಾರುಗಳ ಬೆಂಗಾವಲು ಪಡೆ
Team Udayavani, Aug 25, 2017, 11:36 AM IST
ನವದೆಹಲಿ: ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ರಾಮ್ ರಹೀಂ ಸಿಂಗ್ ಸುಮಾರು 200ಕ್ಕೂ ಅಧಿಕ ಬೆಂಗಾವಲು ಕಾರುಗಳ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ತೆರಳುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಹರ್ಯಾಣ, ಪಂಜಾಬ್ ರಾಜ್ಯಾದ್ಯಂತ ಕೋಟ್ಯಂತರ ಅನುಯಾಯಿಗಳನ್ನು ಹೊಂದಿರುವ ರಾಮ್ ರಹೀಂ ವಿರುದ್ಧ ತೀರ್ಪು ಪ್ರಕಟವಾದಲ್ಲಿ ಭಾರೀ ಹಿಂಸಾಚಾರ ಆಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡೂ ರಾಜ್ಯಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿ ಸ ಲಾ ಗಿದೆ. ಸೂಕ್ಷ್ಮಪ್ರದೇ ಶಗಳಲ್ಲಿ ಒಟ್ಟಾರೆ 18 ಸಾವಿರ ಅರೆ ಸೇನಾ ಪಡೆ ಯೋಧರನ್ನು ಹಾಗೂ 53 ಸಾವಿರ ಪೊಲೀಸರನ್ನು ನಿಯೋ ಜಿ ಸ ಲಾ ಗಿ ದೆ ಎಂದು ವರದಿ ತಿಳಿಸಿದೆ.
ರಾಮ್ ರಹೀಂ ಸಿಂಗ್ ಅನುಯಾಯಿಗಳ ಗೋಳಾಟ, ಕಿರುಚಾಟ ಮುಗಿಲು ಮುಟ್ಟಿದೆ, ತೀರ್ಪು ಹೊರಬೀಳುವವರೆಗೂ ತಾವು ಪಂಚಕುಲ ಬಿಟ್ಟು ತೆರಳುವುದಿಲ್ಲ ಎಂದು ಲಕ್ಷಾಂತರ ಅನುಯಾಯಿಗಳು ಪಟ್ಟು ಹಿಡಿದಿದ್ದಾರೆ. ಭಕ್ತರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕೆಂದು ರಾಮ್ ರಹೀಮ್ ವಿಡಿಯೋ, ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ.
ಮಧ್ಯಾಹ್ನ 2.30ರ ಹೊತ್ತಿಗೆ ತೀರ್ಪು ಹೊರಬೀಳುವ ನಿರೀಕ್ಷೆ ಇದೆ. ಹಾಗಾಗಿ ಡೇರಾ ಬಾಬಾ ರಾಮ್ ರಹೀಂಗೆ ಜೈಲಾ ಅಥವಾ ಖುಲಾಸೆಯೋ ಎಂಬುದು ಬಹಿರಂಗವಾಗಲಿದೆ. ಮಧ್ಯಾಹ್ನ 1.30ಕ್ಕೆ ಡೇರಾ ಬಾಬಾ ಕೋರ್ಟ್ ತಲುಪುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.