ಡೇರಾ ಬಾಬಾ ಅರೆಸ್ಟ್, ಭುಗಿಲೆದ್ದ ಹಿಂಸಾಚಾರ; ಸಾವಿನ ಸಂಖ್ಯೆ 32ಕ್ಕೆ
Team Udayavani, Aug 25, 2017, 5:56 PM IST
ಸಿರ್ಸಾ: ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದ ಪರಿಣಾಮ 30ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 28ರಂದು ರಾಮ್ ರಹೀಂ ಸಿಂಗ್ ಗೆ ಕೋರ್ಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಮುನ್ನೆಚ್ಚರಿಕೆಯ ಅಂಗವಾಗಿ ವಿಶೇಷ ಸಿಬಿಐ ನ್ಯಾಯಾಲಯದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಕೂಡಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅನುಯಾಯಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅರೆಸೇನಾಪಡೆ, ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿತ್ತು. ಆದರೆ ಕೋರ್ಟ್ ತೀರ್ಪು ಪ್ರಕಟಿಸಿದ ಕೂಡಲೇ ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದಿತು. ತದನಂತರ ಪಂಚಕುಲ, ಬಟಿಂಡಾ, ಫಿರೋಜ್ ಪುರ್ ಮತ್ತು ಮಾನ್ಸಾದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ರೊಚ್ಚಿಗೆದ್ದ ಬೆಂಬಲಿಗರು ಬೆಂಕಿಹಚ್ಚುವುದು, ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾನಿಗೊಳಿಸತೊಡಗಿದ್ದಾರೆ. ಸಿಂಗ್ ಅನುಯಾಯಿಗಳು ಪೊಲೀಸರ ನಡುವೆ ಘರ್ಷಣೆ ಮುಂದುವರಿದಿದೆ. ಘಟನೆಯಲ್ಲಿ 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾರು ಮತ್ತು ಅಗ್ನಿಶಾಮಕ ವಾಹನಕ್ಕೆ ಬೆಂಕಿಹಚ್ಚಲಾಗಿದೆ. ಪೊಲೀಸರು ಜಲಫಿರಂಗಿ ಬಳಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.