ಬಾಬಾ ಹಿಂಸಾಚಾರ:ಖಟ್ಟರ್ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ
Team Udayavani, Aug 26, 2017, 1:06 PM IST
ಸಿರ್ಸಾ: ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ ಜೈಲು ಸೇರಿರುವ ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್‌ನ ಉದ್ರಿಕ್ತ ಬೆಂಬಲಿಗರು ನಡೆಸಿರುವ ಹಿಂಸಾಚಾರದಲ್ಲಿ ಅಪಾರ ಆಸ್ತಿ ಪಾಸ್ತಿ ಹಾನಿಯಾಗಿರುವ ಹಿನ್ನಲೆಯಲ್ಲಿ ನಷ್ಟ ಸರಿದೂಗಿಸಲು ಬಾಬಾನ ಆಸ್ತಿಯನ್ನೇ ಮುಟ್ಟುಗೋಲು ಹಾಕಿಕೊಳ್ಳಲು ಪಂಜಾಬ್ ಹರಿಯಾಣ ಹೈಕೋರ್ಟ್ ನಿರ್ದೇಶನ ನೀಡಿದೆ.
ಸಾರ್ವಜನಿಕ ಆಸ್ತಿ ಸಾನಿ ಮತ್ತು ಮೃತರ ಕುಟುಂಬಗಳಿಗೂ ಡೇರಾ ಸಚ್ಚಾ ಸೌದಾವೇ ಪರಿಹಾರ ನೀಡಲಿ ಎಂದು ಹೈಕೋರ್ಟ್ ಹೇಳಿದೆ.
ಖಟ್ಟರ್ ಸರ್ಕಾರದ ವಿರುದ್ಧ ಕಿಡಿ
ಹಿಂಸಾಚಾರಕ್ಕೆ ಸಂಬಂಧಿಸಿ ಮನೋಹರ್ ಲಾಲ್ ಖಟ್ಟರ್ ಅವರ ಬಿಜೆಪಿ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ ಕಾರಿದ್ದು, ‘ರಾಜಕೀಯ ಲಾಭಕ್ಕಾಗಿ ನಗರ ಹೊತ್ತಿ ಉರಿಯಲು ಅವಕಾಶ ನೀಡಿದಿರೇ’ ಎಂದು ಪ್ರಶ್ನಿಸಿದೆ.
‘ಸರ್ಕಾರ ಉದ್ರಿಕ್ತ ಹೋರಾಟಗಾರರಿಗೆ ಶರಣಾಗಿದೆ’ ಎಂದಿರುವ ಹೈಕೋರ್ಟ್ ‘ಈ ಬಗ್ಗೆ ನಿಮಗೆ ಗೊತ್ತಿರಲಿಲ್ಲವೆ, ರಾಜ್ಯದಲ್ಲಿ ಗುಪ್ತಚರ ಇಲಾಖೆ ಇಲ್ಲವೆ?ಯಾಕಾಗಿ ಹಿಂಸಾಚಾರ ಭುಗಿಲೇಳಲು ಅವಕಾಶ ನೀಡಿದಿರಿ’ ಎಂದು ಛೀಮಾರಿ ಹಾಕಿದೆ.
ಶುಕ್ರವಾರ ಹರ್ಯಾಣದ ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ಬಾಬಾ ದೋಷಿ ಎಂದು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದು 32ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ವಿಶೇಷ ಸಭೆ ಕರೆಯಲಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸದ್ಯ ಬಾಬಾ ಬಂಧಿಯಾಗಿರುವ ರೋಹಟಕ್‌ನ ಜಿಲ್ಲಾ ನ್ಯಾಯಾಲಯದ ಸುತ್ತ ಸೇನೆ ನಿಯೋಜಿಸಲಾಗಿದೆ. ಘಟನೆಗೆ ಸಂಬಂಧಿಸಿ ಪಂಚಕುಲದ ಡಿಸಿಪಿಯನ್ನು ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.