ಬಿಎಸ್‌ವೈ ಮೇಲೆ ಎಫ್ಐಆರ್‌ ದಾಖಲು ವಿರುದ್ಧಪ್ರತಿಭಟನೆ


Team Udayavani, Aug 26, 2017, 3:58 PM IST

mandya 2.jpg

ಕೆ.ಆರ್‌.ಪೇಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಸುಳ್ಳು ಎಫ್ಐಆರ್‌ ದಾಖಲಿಸುವಂತೆ ಎಸಿಬಿ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕು ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆಯೊಂದಿಗೆ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂರಾರು ಬಿಜೆಪಿ
ಕಾರ್ಯಕರ್ತರು ಮಾಜಿ ಶಾಸಕ ಅಶ್ವಥ್‌ನಾರಾಯಣ್‌, ತಾಲೂಕು ಬಿಜೆಪಿ ಅಧ್ಯಕ್ಷ ಬೂಕಹಳ್ಳಿ ಮಂಜು, ರಾಜ್ಯ ಬಿಜೆಪಿ ಮುಖಂಡರಾದ ಕೌಟಿಲ್ಯ ರಘು, ಸಿಂಧುಘಟ್ಟ ಅರವಿಂದ್‌ ಮತ್ತಿತರರ ನೇತೃತ್ವದಲ್ಲಿ ಪಂಜುಗಳನ್ನು ಹಿಡಿದು ಪ್ರವಾಸಿ ಮಂದಿರ ವೃತ್ತದಿಂದ ದುರ್ಗಾಭವನ್‌ ವೃತ್ತದವರೆಗೆ ಬೃಹತ್‌
ಜಾಥಾದೊಂದಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ಬಳಿಕ ದುರ್ಗಾಭವನ್‌ ವೃತ್ತದಲ್ಲಿ ನಡೆದ ಬಹುರಂಗ ಸಭೆಯಲ್ಲಿ ಮಾಜಿ ಶಾಸಕ ಅಶ್ವಥ್‌ನಾರಾಯಣ್‌ ಮಾತನಾಡಿ, ಯಡಿಯೂರಪ್ಪಮೇಲೆ ವಜಾಗೊಂಡಿರುವ ಕೇಸನ್ನು ಎಸಿಬಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಮರು ಜೀವ ನೀಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಎಸಿಬಿ ದುರ್ಬಳಕೆ: ಇದಕ್ಕೂ ಮೊದಲೆ ಸಿದ್ಧರಾಮಯ್ಯ ಹಾಗೂ ಅವರ ಮಗ ಡಾ.ಯತೀಂದ್ರ ಮೇಲೆ 19ಕ್ಕೂ ದೂರುಗಳು ಎಸಿಬಿಯಲ್ಲಿ ದಾಖಲಾಗಿವೆ. ಸಚಿವ ಮಹಾದೇವಪ್ಪ ಪುತ್ರ ಅಧಿಕಾರಿಯೊಬ್ಬರಿಗೆ ಲಂಚದ ಆಮಿಷ ಒಡ್ಡಿ ಕ್ರಿಮಿನಲ್‌ ಪ್ರಕರಣ ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ಪ್ರಕರಣಗಳನ್ನು ಮುಚ್ಚಿಟ್ಟು ಬಿಜೆಪಿ ನಾಯಕ ಯಡಿಯೂರಪ್ಪಮೇಲೆ ಸುಳ್ಳು ಪ್ರಕರಣ ದಾಖಲಿಸಲು ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಲೋಕಯುಕ್ತ ಭ್ರಷ್ಟರಿಗೆ ಸಿಂಹಸ್ವಪ್ನವಾಗಿತ್ತು. ಅದಕ್ಕೆ ಎಳ್ಳುನೀರು ಬಿಟ್ಟು, ಎಸಿಬಿ ಎಂಬ ಕೈಗೊಂಬೆಯನ್ನು ಸ್ಥಾಪಿಸಿಕೊಂಡು ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಅವಕಾಶ ಮಾಡಿಕೊಂಡಿದ್ದಾರೆ ಎಂದು ದೂರಿದರು. ಎಸಿಬಿ ರದ್ದುಪಡಿಸಿ: ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಲು ಅವಕಾಶವಾಗದ ಕಾರಣ ತಮ್ಮ ಅಣತಿಯಂತೆ ಕುಣಿಯುವ
ಎಸಿಬಿಯನ್ನು ರಚಿಸಿಕೊಂಡು ಭ್ರಷ್ಟಾಚಾರಕ್ಕೆ ಅಡಿಪಾಯ ಹಾಕಿದ್ದಾರೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ವಿರೋಧ ಪಕ್ಷದ ಸ್ಥಾನವನ್ನೂ ನೀಡದೆ ಹೀನಾಯವಾಗಿ ಸೋಲಿಸಲಿದ್ದಾರೆ. ಸಿದ್ದರಾಮಯ್ಯಗೆ ತಾಕತಿದ್ದರೆ ಕೂಡಲೇ ಎಸಿಬಿ ರದ್ದು ಪಡಿಸಿ ಲೋಕಾಯುಕ್ತ
ಸಂಸ್ಥೆಯನ್ನು ಬಲಪಡಿಸಲಿ ಎಂದು ಅಶ್ವತ್‌ನಾರಾಯಣ್‌ ಸವಾಲು ಹಾಕಿದರು. ಜಿಲ್ಲೆಗೆ ಅನ್ಯಾಯ: ಕೆಆರ್‌ಎಸ್‌ನಲ್ಲಿ 100 ಅಡಿ ನೀರು ತುಂಬಿದೆ. ಆದರೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡ್ಯ ರೈತರಿಗೆ ನೀರು ಬಿಡದೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಕೆಟ್ಟ ರಾಜಕಾರಣಿಯನ್ನು ರಾಜ್ಯದ ಜನತೆ ಇತಿಹಾಸದಲ್ಲಿಯೇ ನೋಡಿಲ್ಲ ಎಂದು ಟೀಕಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸ್ಲಂ ಮೋರ್ಚಾ ಅಧ್ಯಕ್ಷ ಕೌಟಿಲ್ಯ ರಘು, ತಾಲೂಕು ಅಧ್ಯಕ್ಷ ಬೂಕಹಳ್ಳಿ ಮಂಜು, ಜಿಲ್ಲಾ ಉಪಾಧ್ಯಕ್ಷ ವರದರಾಜೇಗೌಡ, ಬ್ಯಾಂಕ್‌ ಪರಮೇಶ್‌, ತೋಟಪ್ಪಶೆಟ್ಟಿ, ಕುಮಾರಸ್ವಾಮಿ, ಪಾರ್ಥಸಾರಥಿ,
ತಾಲೂಕು ಯುವ ಮೋರ್ಚಾ ಅಧ್ಯಕ್ಷ ಹೊಸಹೊಳಲು ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಹರೀಶ್‌, ಖಜಾಂಚಿ ಸಾಸಲು ನಾಗೇಶ್‌, ತಾಲೂಕು ಉಪಾಧ್ಯಕ್ಷ ಸಿದ್ದೇಶ್‌ ಮೊದಲಾದವರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

11-fir

Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.