ಏಳು ತಿಂಗಳಲ್ಲಿ 288 ಶಿಶು ಸಾವು
Team Udayavani, Aug 26, 2017, 5:46 PM IST
ಕಲಬುರಗಿ: ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನವಜಾತ ಶಿಶು ಹಾಗೂ ತಾಯಿ ಮರಣ ಪ್ರಮಾಣ ಕಳೆದ ವರ್ಷಕ್ಕಿಂತ ಪ್ರಸಕ್ತ ಎರಡು ಪಟ್ಟು ಹೆಚ್ಚಿರುವ ಆತಂಕಕಾರಿ ಅಂಶ ಬಯಲಿಗೆ ಬಂದಿದೆ. ಪ್ರಸಕ್ತ ಜನವರಿಯಿಂದ ಜುಲೈ ಅಂತ್ಯದ ಅವಧಿಯಲ್ಲಿ ಜಿಲ್ಲಾಸ್ಪತ್ರೆಯೊಂದರಲ್ಲೇ 288ಕ್ಕೂ ಹೆಚ್ಚು ಶಿಶುಗಳು ಮೃತಪಟ್ಟಿವೆ. ಅಲ್ಲದೇ ಕಳೆದ ನಾಲ್ಕು (ಏಪ್ರಿಲ್, ಮೇ, ಜೂನ್, ಜುಲೈ) ತಿಂಗಳಲ್ಲೇ ಜಿಲ್ಲಾಸ್ಪತ್ರೆಯಲ್ಲಿನ 10 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 44 ತಾಯಂದಿರು ಮೃತಪಟ್ಟಿದ್ದಾರೆ. ಪ್ರಸಕ್ತ ಜಿಲ್ಲಾಸ್ಪತ್ರೆಯ 288 ಶಿಶುಗಳು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟಾರೆ 485 ಶಿಶುಗಳು ಮೃತಪಟ್ಟಿವೆ. ಕಳೆದ ವರ್ಷ 2016ರ ಜನವರಿಯಿಂದ ಜುಲೈ ಅಂತ್ಯದವರೆಗೆ ಜಿಲ್ಲಾಸ್ಪತ್ರೆಯಲ್ಲಿ 195 ಶಿಶುಗಳು ಸೇರಿ ಜಿಲ್ಲೆಯಾದ್ಯಂತ ಒಟ್ಟಾರೆ 447 ಶಿಶುಗಳು ಮೃತಪಟ್ಟಿದ್ದವು. ಪ್ರಸಕ್ತ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಜನವರಿಯಲ್ಲಿ 41, ಫೆಬ್ರುವರಿ 31, ಮಾರ್ಚ್ 38, ಏಪ್ರಿಲ್ 43, ಮೇ 41, ಜೂನ್ 41, ಜುಲೈ ತಿಂಗಳಲ್ಲಿ 53 ಶಿಶುಗಳು ಮೃತಪಟ್ಟಿವೆ. ಆಗಸ್ಟ್ ತಿಂಗಳಿನಲ್ಲಿ ಅಂದಾಜು 50 ಹಿಡಿದರೆ 335ಕ್ಕೂ ಹೆಚ್ಚಳವಾಗುತ್ತದೆ. 2016ರ ಜನವರಿಯಿಂದ ಜುಲೈ ಅಂತ್ಯದವರೆಗೆ 195 ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ ಈಗ ಅದು 335ಕ್ಕೂ ಹೆಚ್ಚಳವಾಗಿದೆ. ಇದನ್ನು ಗಮನಿಸಿದರೆ ಸಾವಿನ ಪ್ರಮಾಣ ಎರಡು ಪಟ್ಟು ಹೆಚ್ಚಳವಾದಂತಾಗಿದೆ. ಅದೇ ರೀತಿ 2016ರ ಏಪ್ರಿಲ್, ಮೇ, ಜೂನ್ ಹಾಗೂ ಜುಲೈ ಈ ನಾಲ್ಕು ತಿಂಗಳಲ್ಲಿ 17 ತಾಯಂದಿರು ಮೃತಪಟ್ಟಿದ್ದರು.ಇದು ಮೂರು ಪಟ್ಟು ಜಾಸ್ತಿ ಎನ್ನುವಂತೆ ಪ್ರಸಕ್ತವಾಗಿ 44 ತಾಯಂದಿರು ಪ್ರಸೂತಿಯಾದ ನಂತರ ಮೃತಪಟ್ಟಿದ್ದಾರೆ. ಪ್ರಸೂತಿಯಾದ ನಂತರ ಲಕ್ಷಕ್ಕೆ 133 ತಾಯಂದಿರು ಸಾಯುವ ಪ್ರಮಾಣವಿದ್ದಲ್ಲಿ ಕಲಬುರಗಿಯಲ್ಲಿ ಲಕ್ಷಕ್ಕೆ 269 ಪ್ರಮಾಣವಾದಂತಾಗಿದೆ. ಅದೇ ರೀತಿ ಶಿಶುವಿನ ಪ್ರಮಾಣ ಕಲಬುರಗಿಯಲ್ಲಿ ಶೇ.
22ರಷ್ಟು ಪ್ರಮಾಣವಿದೆ. ಪ್ರಸಕ್ತ ಏಳು ತಿಂಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ 13,512 ಮಹಿಳೆಯರು ಸೇರಿದಂತೆ ಜಿಲ್ಲೆಯ ಒಟ್ಟಾರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 27,430 ಮಹಿಳೆಯರ ಬಾಣಂತನವಾಗಿದೆ. ಕಾರಣ ಏನು: ಜಿಲ್ಲಾಸ್ಪತ್ರೆ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾತ್ರಿ ಸಮಯದಲ್ಲಿ ಬಾಣಂತನಕ್ಕೆ ಬರುವ ಮಹಿಳೆಯರಿಗೆ ಸಂಬಂಧಿಸಿದ ವೈದ್ಯರಿಲ್ಲದೇ ಬರಿ ಶುಶ್ರೂಷಕರೇ ಪ್ರಸೂತಿ ಕಾರ್ಯ ನಿರ್ವಹಿಸುತ್ತಿರುವುದು ಹಾಗೂ ಆಸ್ಪತ್ರೆ ನವಜಾತ ಶಿಶುಗಳ ತುರ್ತು ಚಿಕಿತ್ಸಾ ಘಟಕದಲ್ಲಿ ಬೆಡ್ ಮೇಲೆ ಮೂರ್‍ನಾಲ್ಕು ಮಕ್ಕಳನ್ನು ಮಲಗಿಸಿ ಚಿಕಿತ್ಸೆ ಕೊಡುತ್ತಿರುವುದರಿಂದ ಒಂದು ಮಗುವಿನ ಸೋಂಕು ಮತ್ತೂಂದು ಮಗುವಿಗೆ ತಗಲುತ್ತಿರುವುದೇ ಶಿಶುಗಳ ಸಾವಿಗೆ
ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಹಣಮಂತರಾವ ಭೈರಾಮಡಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.