ಪುಲ್ವಾಮಾದಲ್ಲಿ ಉಗ್ರರ ದಾಳಿ: 8 ಯೋಧರು ಹುತಾತ್ಮ
Team Udayavani, Aug 27, 2017, 6:00 AM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಎಂಟು ಮಂದಿ ಯೋಧರು ಹುತಾತ್ಮರಾಗಿ, ಐವರು ಗಾಯಗೊಂಡಿದ್ದಾರೆ. ಇದೇ ವೇಳೆ ಭದ್ರತಾ ಪಡೆಗಳು ನಡೆಸಿದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರು ಕೂಡ ಹತರಾಗಿದ್ದಾರೆ.
ಶನಿವಾರ ನಸುಕಿನ 3.40ರ ವೇಳೆಗೆ ಪುಲ್ವಾಮಾದಲ್ಲಿನ ಜಿಲ್ಲಾ ಪೊಲೀಸ್ ಸಂಕೀರ್ಣ ಪ್ರವೇಶಿಸಿದ ಉಗ್ರರು, ಏಕಾಏಕಿ ದಾಳಿ ಆರಂಭಿಸಿದ್ದಾರೆ. ಈ ವೇಳೆ ಮೂವರು ಪೊಲೀಸರು, ಇಬ್ಬರು ಸಿಆರ್ಪಿಎಫ್ ಯೋಧರು ಹಾಗೂ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಸೇರಿ ಎಂಟು ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಸಂಕೀರ್ಣದಲ್ಲಿ ಯೋಧರು, ಪೊಲೀಸರ ಕುಟುಂಬಗಳು ವಾಸಿಸುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳನ್ನು ಕೂಡಲೇ ರಕ್ಷಿಸಲಾಯಿತು. ನಂತರ, ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಲಾಯಿತು. ಐವರು ಉಗ್ರರು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ. ಆ ಪೈಕಿ ಇಬ್ಬರನ್ನು ಸದೆಬಡಿಯಲಾಗಿದೆ. ಉಳಿದ ಮೂವರಿಗಾಗಿ ಶೋಧ ಮುಂದುವರಿಸಲಾಗಿದೆ. ದಾಳಿಗೆ ಗುರಿಯಾದ ಕಟ್ಟಡದಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಸಿಲುಕಿದ್ದಾರೆ ಎನ್ನಲಾಗಿತ್ತು. ಆದರೆ ಅಧಿಕಾರಿಗಳು ಹುತಾತ್ಮರಾಗಿದ್ದು, ಅವರ ಮೃತ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Belthangady: ಹೆಬ್ಬಾವು ಹಿಡಿದು ವೈರಲ್ ಆದ ಕುಪ್ಪೆಟ್ಟಿ ನಿವಾಸಿ ಆಶಾ!
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.