ಕರಾವಳಿ ಜನ ಶ್ರಮಜೀವಿಗಳು: ಕೃಷ್ಣಾಚಾರ್ಯ
Team Udayavani, Aug 27, 2017, 10:43 AM IST
ಕಲಬುರಗಿ: ತಮ್ಮ ಕೆಲಸದೊಂದಿಗೆ ಹೆಚ್ಚಾಗಿ ಗುರುತಿಸಿಕೊಳ್ಳುವ ಕಡಲು ತೀರ ಕರಾವಳಿ ಭಾಗದ ಜನರು ಶ್ರಮಜೀವಿಗಳು ಎಂದು ಹಿರಿಯ ನ್ಯಾಯವಾದಿ ನವಲಿ ಕೃಷ್ಣಾಚಾರ್ಯ ಹೇಳಿದರು. ನಗರದ ಸಾರ್ವಜನಿಕ ಉದ್ಯಾನವನದ ಹೋಟೆಲ್ ಯಾತ್ರಿಕ ನಿವಾಸದಲ್ಲಿ ದಕ್ಷಿಣ ಕನ್ನಡ ಸಂಘದ 52ನೇ ಗಣೇಶೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವರು ಯಾವುದಾದರೂ ಕೆಲಸದಲ್ಲಿ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡು ಯಶಸ್ವಿಯಾಗುತ್ತಾರೆ.
ಇದಕ್ಕೆ ಅವರ ಶ್ರಮವೇ ಕಾರಣ. ಕಳೆದ 52 ವರ್ಷದಿಂದ ವರ್ಷಂಪ್ರತಿ ದಕ್ಷಿಣ ಕನ್ನಡ ಭಾಗದವರೆಲ್ಲ ಕೂಡಿಕೊಂಡು ಗಣೇಶೋತ್ಸವ ಆಚರಿಸುತ್ತಿರುವುದು ಮಾದರಿ ಆಗಿದೆ ಎಂದು ಶ್ಲಾಘಿಸಿದರು. ಹೋಟೆಲ್ ಸೇರಿದಂತೆ ಇತರ ಉದ್ಯಮದಲ್ಲಿ ನೂರಾರು ಜನರು ಕಲಬುರಗಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಸಂಘಕ್ಕೆ ಸ್ವಂತ ಕಚೇರಿ ಹೊಂದುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಮನಸ್ಸು ಮಾಡಬೇಕು. ಮುಂದಿನ ಗಣೇಶೋತ್ಸವ ನೂತನ ಕಚೇರಿಯಲ್ಲಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ನರಸಿಂಹ ಮೆಂಡನ್ ಮಾತನಾಡಿ, ಗಣೇಶೋತ್ಸವದಲ್ಲಿ ಒಂದಾಗುವಂತೆ ಉಳಿದ ಕಷ್ಟ ನೋವುಗಳಲ್ಲೂ ಒಂದಾಗಬೇಕು. ಹೋಟೆಲ್ ಉದ್ಯಮ ಕಷ್ಟದಲ್ಲಿದೆ. ಸಂಘಕ್ಕೆ ಉದಾರಿಗಳ ಸಹಾಯ ಇನ್ನೂ ಬೇಕಾಗಿದೆ. ಕೇಳದೇ ಕೊಡುವವರೂ ಇದ್ದಾರೆ. ಇನ್ನು ಕೆಲವರು ಮರ್ಯಾದೆಗೆ ಅಂಜಿ ಕೊಡುವವರೂ ಇದ್ದಾರೆ. ಸಹಾಯ ಮಾಡುವ ಮನಸ್ಸು ಎಲ್ಲರಲ್ಲೂ ಬರಬೇಕೆಂದರು. ನಟಿ, ಕಲಾವಿದೆ ಪಂಕಜ ರವಿಶಂಕರ ಮಾತನಾಡಿ, ಆ. 27ರಂದು ಮಧ್ಯಾಹ್ನ 3:30ಕ್ಕೆ ಹಾಗೂ ಸಂಜೆ 6:30ಕ್ಕೆ ಗೌಡ್ರ ಗದ್ಲ ಸಾಮಾಜಿಕ ನಾಟಕ ಕಲಾವಿದರ ಸಹಾಯಾರ್ಥ ಹಮ್ಮಿಕೊಳ್ಳಲಾಗಿದೆ ಎಂದರು. ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಜಿ. ಕೃಷ್ಣ ಹೇರ್ಳೆ ದಕ್ಷಿಣ ಕನ್ನಡ ಸಂಘದ ಗೌರವಾಧ್ಯಕ್ಷ ಪ್ರಶಾಂತ ಶೆಟ್ಟಿ, ಉಪಾಧ್ಯಕ್ಷ ಗಿರಿಧರ ಭಟ್, ಕಾರ್ಯದರ್ಶಿ ಅರುಣಾಚಲ ಭಟ್, ಜಂಟಿ ಕಾರ್ಯದರ್ಶಿ ಜಗನ್ನಾಥ ಸುವರ್ಣ, ಕ್ರೀಡಾ ಕಾರ್ಯದರ್ಶಿ ಜೀವನಕುಮಾರ ಜತ್ತನ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರವಣಾ ಭಟ್, ಖಜಾಂಚಿ ಸುಬ್ರಹ್ಮಣ್ಯ ಭಟ್ ಮುಂತಾದವರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಹೊಟೇಲ್ ಉದ್ಯಮದ ಸಾಧಕರನ್ನು ಸತ್ಕರಿಸಲಾಯಿತು. ನಂತರ ನಾಟ್ಯಾಂಜಲಿ ಸಂಘದಿಂದ ಭರತ ನಾಟ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.