ತಿಲಕರ ಸ್ವರಾಜ್ಯ ಕಲ್ಪನೆ ಇಂದಿಗೂ ಪ್ರಸ್ತುತ: ಡಾ| ದೀಪಕ್‌ ಜೆ. ತಿಲಕ್‌

Team Udayavani, Aug 28, 2017, 7:30 AM IST

Dr-Deepak-J.-Tilak.jpg

ಉಡುಪಿ: ಬಾಲ ಗಂಗಾಧರ ತಿಲಕರು ರಾಷ್ಟ್ರದೇವೋಭವ ಎನ್ನುವ ರಾಷ್ಟ್ರಕ್ಕಾಗಿ ಸಮರ್ಪಿಸುವ ಧ್ಯೇಯವನ್ನು ಪ್ರತಿಪಾದಿಸಿದರು. ಅವರ ಸ್ವದೇಶೀ, ಸ್ವರಾಜ್ಯ ಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ ಎಂದು ತಿಲಕರ ಮರಿಮಗ, ಪುಣೆಯ ತಿಲಕ್‌ ಮಹಾರಾಷ್ಟ್ರ ವಿದ್ಯಾಪೀಠದ ಕುಲಪತಿ ಡಾ| ದೀಪಕ್‌ ಜೆ. ತಿಲಕ್‌ ಹೇಳಿದರು.

ಪರ್ಕಳ ಶ್ರೀ ಗಣೇಶೋತ್ಸವ ಸಮಿತಿ ಸುವರ್ಣ ಮಹೋತ್ಸವದ ಅಂಗವಾಗಿ ರವಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಿಲಕರು 125 ವರ್ಷಗಳ ಹಿಂದೆ ಎಲ್ಲ ಜಾತಿ, ಧರ್ಮದವರನ್ನು ಒಟ್ಟುಗೂಡಿಸಲು ಗಣೇಶೋ ತ್ಸವವನ್ನು ಆರಂಭಿಸಿದರು. ಈಗಲೂ ಇದೇ ಆಶಯದ ಅಗತ್ಯವಿದೆ ಎಂದರು.

ಸ್ವಾತಂತ್ರ್ಯಪೂರ್ವದಲ್ಲಿ ಒಂದು ರಾಷ್ಟ್ರವೆಂಬ ಕಲ್ಪನೆ ಇರಲಿಲ್ಲ ಎನ್ನುತ್ತಿದ್ದಾಗ ನಾವು ರಾಷ್ಟ್ರಕ್ಕಾಗಿ ಹೋರಾಡುತ್ತಿದ್ದೇವೆಂದು ತಿಲಕರು ಹೇಳಿದರು. ಸಾಮಾನ್ಯ ಜನರಿಗೆ ಸ್ವಾತಂತ್ರ್ಯ, ಸ್ವರಾಜ್ಯದ ಕಲ್ಪನೆಯೇ ಇರಲಿಲ್ಲ. ಇದೇ ಕಾರಣಕ್ಕಾಗಿ ರಾಷ್ಟ್ರಕ್ಕಾಗಿ ಬದುಕುವ ರಾಷ್ಟ್ರದೇವೋಭವ= ರಾಷ್ಟ್ರಸೇವೆಯೇ ದೇವರ ಸೇವೆ ಎಂದು ಕರೆ ನೀಡಿದರು. ಗೀತೆಯಲ್ಲಿ ಹೇಳಿದ ನಿಷ್ಕಾಮ ಕರ್ಮವೆಂದರೆ ಫ‌ಲಾಪೇಕ್ಷೆ ಇಲ್ಲದೆ ದೇಶಕ್ಕಾಗಿ ಮಾಡುವ ಸೇವೆ ಎಂದು ತಿಲಕರು ಹೇಳಿ ದರು.  ಎಲ್ಲವೂ ಯಾಂತ್ರೀಕೃತವಾಗುವಾಗ ಮುಂದಿನ ಪೀಳಿಗೆಗೆ ಉದ್ಯೋಗ ಸಿಗದ ಸ್ಥಿತಿ ಬರಬಹುದು. ಆಗ ತಿಲಕರು ಹೇಳಿದ ಸ್ವದೇಶೀ ತಂತ್ರಜ್ಞಾನದ ಮಹತ್ವ ಅರಿವಿಗೆ ಬರಬಹುದು ಎಂದು ದೀಪಕ್‌ ಎಚ್ಚರಿಸಿದರು.

ಮುಸ್ಲಿಮರ ವಿರುದ್ಧವಲ್ಲ : ಗಣೇಶೋತ್ಸವಗಳು ಮುಸ್ಲಿಮರ ವಿರುದ್ಧ ಎಂದು ಬ್ರಿಟಿಷರು ಪ್ರತಿಬಿಂಬಿಸಲು ಯತ್ನಿಸಿದರು. ಇದು ಮುಸ್ಲಿಂ ವಿರೋಧಿಯಲ್ಲ ಎಂದು ತಿಲಕರು ಮುಸ್ಲಿಮರಿಗೆ ತಿಳಿಸಿ ಅವರನ್ನೂ ಉತ್ಸವಕ್ಕೆ ಕರೆದರು. ಈಗಲೂ ಬ್ರಿಟಿಷರಂತೆ ವ್ಯವಹರಿಸುವವರಿದ್ದಾರೆ ಎಂದು ದೀಪಕ್‌ ಎಚ್ಚರಿಸಿದರು.ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ಧರ್ಮವೆಂದರೆ ಬದುಕಿನ ಸಂವಿಧಾನ. ಧರ್ಮ ದಂತೆ ನಡೆದರೆ ಧರ್ಮ ಸಂಸ್ಥಾಪನೆಯಾಗುತ್ತದೆ ಎಂದರು.

ಸಾವಿರಾರು ವರ್ಷಗಳ ಹಿಂದಿನ ನಾಗರಿಕತೆ ಎಂದು ಗಾಂಧೀಜಿಯವರೇ ಹೇಳಿದ್ದರು. ಪಶು, ಪಕ್ಷಿ, ಕ್ರಿಮಿ, ಕೀಟಗಳಲ್ಲಿಯೂ ಭಗವಂತನನ್ನು ಕಾಣುವ ನಮ್ಮ ನಾಗರಿಕತೆಗೆ ಸರಿಯಾಗಿ ನಾವು ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು. ತಂದೆ, ತಾಯಿಗಳನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂದು ದಿಲ್ಲಿಯ ಜಿಎಸ್‌ಟಿ ಆಯುಕ್ತ ಎಚ್‌. ರಾಜೇಶಪ್ರಸಾದ್‌ ಕರೆ ನೀಡಿದರು.
 
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್‌, ಡಿವೈಎಸ್ಪಿ ಕುಮಾರಸ್ವಾಮಿ ಶುಭ ಕೋರಿದರು. 
ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿ ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಪ್ರಸ್ತಾವನೆಗೈದರು. ಗಣೇಶ ಪಾಟೀಲ್‌ ಕಾರ್ಯಕ್ರಮ ನಿರ್ವಹಿಸಿ ಮುರಳೀಧರ ನಕ್ಷತ್ರಿ ವಂದಿಸಿದರು. ಗೌರವಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯಾಯ, ಜಯರಾಜ ಹೆಗ್ಡೆ, ದಿನೇಶ್‌ ಶೆಟ್ಟಿ ಹೆರ್ಗ, ಬಾಲಕೃಷ್ಣ ನಾಯಕ್‌, ಉದ್ಯಮಿಗಳಾದ ದಿನೇಶ್‌ ಹೆಗ್ಡೆ ಆತ್ರಾಡಿ, ಜಯರಾಜ ಶೆಟ್ಟಿ, ಪುಣೆಯ ರಂಜಿತ್‌ ಶೆಟ್ಟಿ ,ಕಟ್ಟಡ ಸಮಿತಿಯ ಅಧ್ಯಕ್ಷ ದಿಲೀಪ್‌ರಾಜ್‌ ಹೆಗ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.