ಪೊಲೀಸ್‌ ಪಾತ್ರ ಮಾಡುವ ಆಸೆ ಈಡೇರಲೇ ಇಲ್ಲ


Team Udayavani, Aug 28, 2017, 11:44 AM IST

jayanti.jpg

ಬೆಂಗಳೂರು: ಬೆಳ್ಳಿತೆರೆಯ ಮೇಲೆ ಎಲ್ಲ ರೀತಿಯ ಪಾತ್ರಗಳಲ್ಲೂ ನಟಿಸಿದೆ. ಆದರೆ, ಪೊಲೀಸ್‌ ಪಾತ್ರ ಮಾಡಲು ಸಾಧ್ಯವಾಗಲೇ ಇಲ್ಲ ಎಂದು ಹಿರಿಯ ನಟಿ ಡಾ.ಜಯಂತಿ ಬೇಸರ ವ್ಯಕ್ತಪಡಿಸಿದರು. ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಸಾಧಕರೊಡನೆ ಸಂವಾದ’ದಲ್ಲಿ ಡಾ.ಜಯಂತಿ ಈ ಕೊರಗು ಹೊರಹಾಕಿದರು.

ಸಿನಿಮಾ ರಂಗದಲ್ಲಿ ನಾನು ಭಿಕ್ಷಕಿಯಿಂದ ಮಹಾರಾಣಿಯವರೆಗಿನ ಎಲ್ಲಾ ಪಾತ್ರಗಳಲ್ಲಿಯೂ ನಟನೆ ಮಾಡಿದೆ. ಆದರೆ, ಕನಿಷ್ಠ ಒಂದು ಸಿನಿಮಾದಲ್ಲಿಯಾದರೂ ಪೊಲೀಸ್‌ ಪಾತ್ರ ಮಾಡಲಿಲ್ಲವಲ್ಲ ಎಂಬ ಕೊರಗು ಹಾಗೇ ಉಳಿಯಿತು. ಪೊಲೀಸ್‌ ಪಾತ್ರ ನಟಿಸುವಂತೆ ಯಾವುದೇ ನಿರ್ದೇಶಕರು ಕೂಡ ಸೂಚಿಸಿಲ್ಲ. ಬಹುಶಃ ನನ್ನ ದೇಹ ರಚನೆ ನೋಡಿಯೇ ನನಗೆ ಈ ಪಾತ್ರ ನೀಡಿಲ್ಲವೆಂಬ ಅಭಿಪ್ರಾಯವೂ ಇದೆ ಎಂದು ಅವರು ತಿಳಿಸಿದರು. 

ಗಂಡು ಮಗುವಿಗೆ ವ್ರತ: ನನ್ನ ತಾಯಿ ಗಂಡು ಮಗುವಿಗಾಗಿ ಹೋಮ, ಹವನ ಸೇರಿದಂತೆ ಹಲವು ರೀತಿಯ ವ್ರತಗಳನ್ನು ಮಾಡಿದ್ದರು. ಅಷ್ಟಾದರೂ ನಾನು ಹುಟ್ಟಿದೆ. ಆದರೆ, ಇದರಿಂದ ಬೇಸರಗೊಳ್ಳದ ನನ್ನ ತಾಯಿ ನನ್ನನ್ನು ಗಂಡು ಮಗುವಿನಂತೆ ಬೆಳೆಸಿದರು. ಶಾಲೆಯಲ್ಲಿ ಶಿಕ್ಷಕಿಯರು ಬಾಸುಂಡೆ ಬರುವಂತೆ ಹೊಡೆದಿದ್ದ ಸಂದರ್ಭದಲ್ಲಿ ಶಾಲೆಗೆ ಬಂದು ದೊಡ್ಡ ಜಗಳನ್ನೇ ಮಾಡಿದ್ದರು ಎಂದು ಮೆಲುಕು ಹಾಕಿದರು. 

ಶಾಲಾ ದಿನಗಳಲ್ಲಿ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಿದ್ದೆ. ಅದನ್ನು ನೋಡಿದ್ದ ಶಿಕ್ಷಕರು ಹಾಗೂ ಸಂಬಂಧಿಕರು ನೃತ್ಯಕ್ಕೆ ಸೇರಿಸಿ ಎಂದು ನಮ್ಮ ಪೋಷಕರಲ್ಲಿ ಒತ್ತಾಯಿಸಿದ್ದರು. ಎಲ್ಲರ ಒತ್ತಾಯದ ಮೇರೆಗೆ ನನಗೆ ನೃತ್ಯ ಕಲಿಸಲು ಚೆನೈಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಚಿತ್ರ ರಂಗದ ಪ್ರವೇಶ ಪ್ರಾರಂಭವಾಯಿತು. ಚೆನೈನಲ್ಲಿ ನೃತ್ಯ ಕಲಿಯುತ್ತಿದ್ದಾಗ ವೈ.ಆರ್‌. ಸ್ವಾಮಿ ನಿರ್ದೇಶನದ ಜೇನುಗೂಡು ಚಿತ್ರದ ಮೂರನೇ ನಾಯಕಿಯಾಗಿ ಅವಕಾಶ ಬಂತು.

ಸಿನಿಮಾ ನಟನೆ ಎಂದರೆ ನಮ್ಮ ಕಾಲದಲ್ಲಿ ತಾತ್ಸಾರ ಭಾವನೆಯಿತ್ತು. ಆದ್ದರಿಂದ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಸ್ವಾಮಿಯವರು ನನ್ನ ಮಗಳ ರೀತಿಯಲ್ಲಿ ನೋಡಿಕೊಳ್ಳುತ್ತೇನೆ ಎಂದು ಹೇಳಿ ನನಗೆ ಚಲನಚಿತ್ರದಲ್ಲಿ ನಟಿಸಲು ಅವಕಾಶ ಕಲ್ಪಿಸಿದರು ಎಂದು ತಮ್ಮ ಚಿತ್ರರಂಗ ಪ್ರವೇಶವನ್ನು ನೆನಪು ಮಾಡಿಕೊಂಡರು. ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

7-bng

Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.