ಪಾಲಿಕೆಗಿಲ್ಲ ಮುನ್ನೆಚ್ಚರ; ಮಳೆಗೆ ಜನ ತತ್ತರ


Team Udayavani, Aug 28, 2017, 11:44 AM IST

palike.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿಯುವ ಮಳೆಯಿಂದಾಗಿ ಪ್ರತಿ ವರ್ಷ ಒಂದಿಲ್ಲೊಂದು ಪ್ರದೇಶ ತೊಂದರೆಗೆ ಸಿಲುಕುತ್ತದೆ. ಆದರೆ, ಬಿಬಿಎಂಪಿ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.

ಮಳೆಯಿಂದ ಅನಾಹುತಕ್ಕೆ ಒಳಗಾಗುವ ಪ್ರದೇಶಗಳನ್ನು ಗುರುತಿಸಿ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಕೆಯ ಅಧಿಕಾರಿಗಳು ಕೈಗೆತ್ತಿಕೊಳ್ಳಬೇಕು. ಆದರೆ, ಅಧಿಕಾರಿಗಳು ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗದ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡು ಜನರು ಸಮಸ್ಯೆ ಅನುಭವಿಸುವಂತಾಗಿದೆ. ಇದರೊಂದಿಗೆ ರಸ್ತೆಗಳು ಗುಂಡಿಮಯವಾಗುತ್ತಿರುವುದರಿಂದ ವಾಹನ ಸವಾರರು ಕಷ್ಟಪಡಬೇಕಾಗಿದೆ.

ಮುಗಿಯದ ಕಾಮಗಾರಿ: ಪಾಲಿಕೆಯಿಂದ ಪ್ರತಿ ವರ್ಷ ಮಳೆಗಾಲ ಆರಂಭವಾಗುವುದಕ್ಕೂ ಮೊದಲೇ ಮಳೆಯಿಂದಾಗಿ ತೊಂದರೆಗೆ ಒಳಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಲಾಗುತ್ತದೆ. ಇದರೊಂದಿಗೆ ರಾಜಕಾಲುವೆ ಉಕ್ಕಿ ತೊಂದರೆಯಾಗುತ್ತಿರುವ ಪ್ರದೇಶಗಳ ಕುರಿತು ಸಹ ಮಾಹಿತಿ ಪಡೆಯಲಾಗುತ್ತದೆ. ಆದರೆ, ಮಳೆಗಾಲಕ್ಕೆ ಮೊದಲೇ ಕಾಮಗಾರಿಗಳನ್ನು ಪೂರ್ಣಗೊಳಿಸದಿರುವುದು ಸಮಸ್ಯೆಗೆ ಕಾರಣವಾಗಿದೆ. 

ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದು, ಮತ್ತೂಂದೆಡೆ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸವಾರರು ಅಪಾಯದ ನಡುವೆ ಸಂಚರಿಸಬೇಕಿದೆ. ಮಳೆ ಬೀಳುವ ಮೊದಲೇ ರಸ್ತೆ ಗುಂಡಿಗಳನ್ನು ಮುಚ್ಚಬೇಕೆಂದು ಆಯುಕ್ತರು ಆದೇಶಿಸಿದ್ದಾರೆ. ಆದರೆ, ಕೆಳ ಹಂತದಲ್ಲಿ ಅದು ಅನುಷ್ಠಾನವಾಗದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಾಲಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ನಗರದಲ್ಲಿ ರಸ್ತೆಗುಂಡಿಗಳ ದುರಸ್ತಿಗೆ ರಸ್ತೆಗಿಳಿಯಲು ತೀರ್ಮಾನಿಸಿದ್ದಾರೆ. 

ರಾಜಕಾಲುವೆಗಳ ನಿರ್ಲಕ್ಷ್ಯ
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 842 ಕಿ.ಮೀ ಉದ್ದದ ರಾಜಕಾಲುವೆ ಜಾಲವಿದೆ. ಆದರೆ, ರಾಜಕಾಲುವೆಗಳ ನಿರ್ವಹಣೆಗೆ ಪಾಲಿಕೆಯಿಂದ ಆದ್ಯತೆ ನೀಡದ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ನೀರು ಉಕ್ಕಿ ಹರಿದು ವಸತಿ ಪ್ರದೇಶಗಳಿಗೆ ನುಗ್ಗುತ್ತಿದೆ. ಅನಾಹುತ ಸಂಭವಿಸುವ ಮಾಹಿತಿ ಪಡೆದರೂ ಪಾಲಿಕೆಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಹಲವಾರು ಭಾಗಗಳಲ್ಲಿ ತಡೆಗೋಡೆಗಳು ಕುಸಿದಿರುವುದರಿಂದ ನೀರು ರಸ್ತೆ ಬರುತ್ತಿದ್ದು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. 

ಮಾಹಿತಿ ನೀಡಿದರೂ ಪ್ರಯೋಜನವಿಲ್ಲ
ಬಿಬಿಎಂಪಿ ವ್ಯಾಪ್ತಿಯ ಯಾವ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತದೆ ಎಂಬ ಮಾಹಿತಿಯನ್ನು ಪಾಲಿಕೆಯ ಎಲ್ಲ ಹಿರಿಯ ಅಧಿಕಾರಿಗಳಿಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವರಿ ಕೇಂದ್ರದ ವತಿಯಿಂದ ಮಾಹಿತಿ ರವಾನೆ ಮಾಡಲಾಗುತ್ತದೆ. ಇತ್ತೀಚೆಗೆ ನಗರದಲ್ಲಿ ಕೆಲವೊಂದು ಭಾಗಗಳಲ್ಲಿ ಭಾರಿ ಮಳೆಯಾಗುವ ಮಾಹಿತಿ ನೀಡಿದರೂ ಪಾಲಿಕೆಯ ಅಧಿಕಾರಿಗಲು ಗಂಭೀರವಾಗಿ ಪರಿಗಣಿಸಿದ ಹಿನ್ನೆಲೆಯಲ್ಲಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು. 

ಗುಂಡಿ ಮುಚ್ಚಲು ಮುಂದಾದ ಪಾಲಿಕೆ
ಮಳೆಗಾಲ ಆರಂಭದೊಳಗೆ ನಗರದಲ್ಲಿನ ರಸ್ತೆಗುಂಡಿಗಳನ್ನು ಮುಚ್ಚಲು ಹಾಗೂ ಸ್ವತ್ಛತೆ ಕಾಪಾಡಲು ಪಾಲಿಕೆಯಿಂದ ಪ್ರತಿಯೊಂದು ವಾರ್ಡ್‌ಗೆ ಅನುದಾನ ನೀಡಲಾಗಿದೆ. ಆದರೆ, ರಸ್ತೆಗಳ ಗುಂಡಿಗಳಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ಆ ಹಿನ್ನೆಲೆಯಲ್ಲಿ ಖುದ್ದು ಬಿಬಿಎಂಪಿ ಅಯುಕ್ತರೇ ಎಲ್ಲ ವಲಯಗಳಲ್ಲಿ ರಸ್ತೆಗಳ ಪರಿಶೀಲನೆ ಮುಂದಾಗಿದ್ದು, ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸುವ ಭರವಸೆ ನೀಡಿದ್ದಾರೆ. 

ಒತ್ತುವರಿ ತೆರವಿಗೆ ನಿರಾಸಕ್ತಿ
ಪಾಲಿಕೆಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿಯಾಗಿರುವ ಭಾಗಗಳನ್ನು ಗುರುತಿಸಿ ನಾಲ್ಕು ವರ್ಷ ಕಳೆದಿದೆ. ನಗರದಲ್ಲಿ ಪಾಲಿಕೆ ಅಧಿಕಾರಿಗಳ ಮಾಹಿತಿಯಂತೆ 1953 ಪ್ರಕರಣಗಳಲ್ಲಿ ರಾಜಕಾಲುವೆ ಒತ್ತುವರಿಯಾಗಿದ್ದು, ಕಳೆದ ವರ್ಷದ ಕಾರ್ಯಾಚರಣೆಗೆ ಮೊದಲೇ 820 ಕಡೆ ಒತ್ತುವರಿ ತೆರವುಗೊಳಿಸಲಾಗಿತ್ತು. ಉಳಿದ 1,133 ಕಡೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ವರ್ಷ ಆರಂಭಿಸಿದ ಅಧಿಕಾರಿಗಳು ಈವರೆಗೆ ಕೇವಲ 405 ಕಡೆಗಳಲ್ಲಿ ಮಾತ್ರ ಒತ್ತುವರಿ ತೆರವುಗೊಳಿಸಿದ್ದು, ಇನ್ನೂ 728 ಕಡೆಗಳಲ್ಲಿ ತೆರವುಗೊಳಿಸುವುದು ಬಾಕಿ ಉಳಿದಿವೆ. ಒತ್ತುವರಿ ತೆರವು ಕಾರ್ಯಾಚರಣೆ ಅಧಿಕಾರಿಗಳು ನಿರಾಸಕ್ತಿ ವಹಿಸಿರುವುದು ಸಮಸ್ಯೆಗೆ ಕಾರಣವಾಗಿದೆ. 

ಮಳೆಯಿಂದ ಆಗುವ ಅನಾಹುತಗಳ ತಡೆಗೆ ಪಾಲಿಕೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದರೆ, ನಗರದಲ್ಲಿ ದಾಖಲೆ ಪ್ರಮಾಣ ಮಳೆಯಾದ ಪರಿಣಾಮ ತೊಂದರೆಯಾಗಿದೆ. ಮುಂದೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು, ರಾಜಕಾಲುವೆಗೆ ತಡೆಗೋಡೆ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸುವ ಉದ್ದೇಶದಿಂದ ಪರಿಶೀಲನೆ ನಡೆಸಲಾಗುತ್ತಿದೆ.
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಹೆಚ್ಚಿನ ಮಳೆಯಿಂದಾಗಿ ಕೆಲವೊಂದು ಪ್ರದೇಶಗಳು ಜಲಾವೃತಗೊಂಡಾಗ ಮ್ಯಾನ್‌ಹೋಲ್‌ಗ‌ಳು ತುಂಬಿವುದು ಸಾಮಾನ್ಯ. ಉಳಿದಂತೆ ಜಲಮಂಡಳಿಯಿಂದ ಯಾವುದೇ ರೀತಿಯ ಸಮಸ್ಯೆಯಿಲ್ಲ. ಯಾವುದೇ ಭಾಗದಲ್ಲಿ ಅಂತಹ ಸಮಸ್ಯೆಗಳಿದ್ದರೆ ಕೂಡಲೇ ಅವುಗಳನ್ನು ಬಗೆಹರಿಸುವಂತಹ ಕೆಲಸ ಮಾಡಲಾಗುವುದು. 
-ಕೆಂಪರಾಮಯ್ಯ, ಪ್ರಧಾನ ಎಂಜಿನಿಯರ್‌ ಜಲಮಂಡಳಿ

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.