ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ವೆಂಕಟೇಶ್
Team Udayavani, Aug 28, 2017, 12:06 PM IST
ಪಿರಿಯಾಪಟ್ಟಣ: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ನವರು ಬಿ ಫಾರಂ ಹಚ್ಚುವುದರೊಳಗೆ ಪಕ್ಷದಲ್ಲಿ ಏನಾಗುತ್ತದೆ ಎಂಬುದನ್ನು ಗಮನಿಸಿಕೊಳ್ಳಲಿ ನಂತರ ಪಕ್ಷ ಅಧಿಕಾರಕ್ಕೆ ಬರುವ ಕನಸು ಕಾಣಲಿ ಎಂದು ಶಾಸಕ ಕೆ.ವೆಂಕಟೇಶ್ ತಿಳಿಸಿದರು. ತಾಲೂಕಿನ ಆವರ್ತಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನ್ಯಾಯಬೆಲೆ ಅಂಗಡಿ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಆದರೆ, ಮುಂದೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಖಾಸಗಿ ಸಂಸ್ಥೆಗಳು ನಡೆಸಿದ ಸರ್ವೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಹೀಗಾಗಿ ತಾಲೂಕಿನಲ್ಲಿ ತನಗೆ ನೀಡಿದ ಅಧಿಕಾರದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದು ನೂರಾರು ಕೋಟಿ ರೂ. ಅನುದಾನ ತಂದು ಕೆಲಸ ನಿರ್ವಹಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜನರು ಇದನ್ನು ಅರಿತು ಮತದಾನಕ್ಕೆ ಮುಂದಾಗಬೇಕೆಂದರು.
ಪ್ರತಿ ಗ್ರಾಮದಲ್ಲಿ ನೂತನ ನ್ಯಾಯ ಬೆಲೆ ಅಂಗಡಿ ತೆರೆಯಲು ಅಲ್ಲಿನ ಸಹಕಾರ ಸಂಘಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇದಾದ ನಂತರ 2ನೇ ಹಂತದ ಆದ್ಯತೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಲಾಗುತ್ತಿದೆ. ಇದರ ಉದ್ದೇಶದ ಸಾರ್ವಜನಿಕರಿಗೆ ಎಲ್ಲಾ ದಿನಗಳಲ್ಲಿಯೂ ಪಡಿತರ ಸಿಗುವಂತಾಗಬೇಕು. ಸರ್ಕಾರಗಳು ಅನೇಕ ನೂತನ ನೀತಿಗಳನ್ನು ತಂದರೂ ನ್ಯೂನತೆಗಳು ಇದ್ದೇ ಇದೆ. ಹೀಗೆ ಸಹಕಾರ ಸಂಘಗಳ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುವ ಆಶಾಭಾವನೆ ಹೊಂದಿದ್ದೇವೆಂದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಆವರ್ತಿ ಚಂದ್ರು, ಆವರ್ತಿ ಗ್ರಾಮಕ್ಕೆ ಅಂಬೇಡ್ಕರ್ ಭವನ, ನ್ಯಾಯಬೆಲೆ ಅಂಗಡಿ ಮತ್ತು ಗ್ರಾಮದ ಎಲ್ಲಾ ರಸ್ತೆಗಳ ಅಭಿವೃದ್ಧಿಯನ್ನು ಶಾಸಕರು ನೀಡಿದ್ದಾರೆ. ಇದಕ್ಕೆ ಜನರು ಅಭಾರಿಯಾಗಿರಬೇಕು. ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಅನುಮತಿ ದೊರತಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಇಷ್ಟೆಲ್ಲಾ ಸಹಕಾರ ನೀಡಿರುವ ಶಾಸಕರನ್ನು ಚುನಾವಣೆ ವೇಳೆ ಮರೆಯದೆ ಅವರನ್ನು ಬೆಂಬಲಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಹಿರಿಯ ಮುಖಂಡ ಸೋಮಣ್ಣ ಮಾತನಾಡಿದರು. ತಹಶೀಲ್ದಾರ್ ಜೆ.ಮಹೇಶ್, ಎಪಿಎಂಸಿ ಅಧ್ಯಕ್ಷ ರೇವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಪಿ.ಎನ್.ಚಂದ್ರಶೇಖರ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಹೊಲದಪ್ಪ, ತಾಪಂ ಸದಸ್ಯೆ ಜಯಂತಿ, ಗ್ರಾಪಂ ಉಪಾಧ್ಯಕ್ಷೆ ಶೋಭಾ, ಇಒ ಬಸವರಾಜು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಮಹದೇವಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.