ಗಣೇಶ ವಿಸರ್ಜನೆ ವೇಳೆ ಬಾಲಕ ಬಲಿ
Team Udayavani, Aug 28, 2017, 12:41 PM IST
ಬೆಂಗಳೂರು: ನಗರದ ಕುರುಬರಹಳ್ಳಿ ಸಮೀಪ ಭಾನುವಾರ ರಾತ್ರಿ ಗಣೇಶ ವಿಗ್ರಹ ವಿಸರ್ಜನೆಗೆಂದು ಮೆರವಣಿಗೆಯಲ್ಲಿ ತೆರಳುತ್ತಿದ್ದ ಟೆಂಪೋದ ಬ್ರೇಕ್ ಫೇಲ್ ಆಗಿ, ಮೆರವಣಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಹರಿದಿದೆ. ಈ ವೇಳೆ, ಮೆರವಣಿಗೆಯಲ್ಲಿ ತೆರಳುತ್ತಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ 10ರ ಸುಮಾರಿಗೆ ಈ ಘಟನೆ ನಡೆದಿದೆ. ಕುರುಬರಹಳ್ಳಿಯಲ್ಲಿ ಯುವಕರ ಗುಂಪೊಂದು ಟೆಂಪೋ (407) ದಲ್ಲಿ ಗಣೇಶ ಮೂರ್ತಿ ತೆಗೆದುಕೊಂಡು ವಿಸರ್ಜನೆಗೆಂದು ಹೊರಟಿತ್ತು. ಈ ಸಂದರ್ಭದಲ್ಲಿ ಗಣೇಶ ಮೂರ್ತಿ ಇದ್ದ ಟೆಂಪೋದ ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ಕಳೆದುಕೊಂಡಿತು. ಮೆರವಣಿಗೆಯಲ್ಲಿ ಹಲವರು ಪಾಲ್ಗೊಂಡಿದ್ದರು. ನಿಯಂತ್ರಣಕ್ಕೆ ಸಿಗದ ಟೆಂಪೋ ಜನರ ಗುಂಪಿನ ಮೇಲೆ ನುಗ್ಗಿದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರು.
ಈ ಮಧ್ಯೆ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ. ವಿಷಯ ತಿಳಿಯುತ್ತಿದ್ದಂತೆ ಮಹಾಲಕ್ಷ್ಮೀ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಗುರುತು ಪತ್ತೆಗೆ ಕ್ರಮ ಕೈಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.