ಅದಿರು ಇ-ಹರಾಜು ರದ್ದು ಮಾಡಲು ಸುಪ್ರೀಂ ನಕಾರ

Team Udayavani, Aug 29, 2017, 11:26 AM IST

29-STATE-11.jpg

ನವದೆಹಲಿ: ಕರ್ನಾಟಕದಲ್ಲಿ ಕಬ್ಬಿಣದ ಅದಿರಿನ ಇ-ಟೆಂಡರ್‌ ರದ್ದುಗೊಳಿಸುವಂತೆ ಕೋರಿ ಫೆಡರೇಷನ್‌ ಆಫ್ ಇಂಡಿಯನ್‌ ಮಿನರಲ್‌ ಇಂಡಸ್ಟ್ರೀಸ್‌ (ಎಫ್ಐಎಂಐ) ಹಾಗೂ ವೇದಾಂತ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾ ಮಾಡಿದೆ.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ರಂಜನ್‌ ಗೊಗೋಯ್‌ ಮತ್ತು ನ್ಯಾ. ನವೀನ್‌ ಸಿನ್ಹಾ ಅವರಿದ್ದ ನ್ಯಾಯಪೀಠ, “ಇ-ಟೆಂಡರ್‌ ರದ್ದು ಕೋರಿ ಎಫ್ ಐಎಂಐ ಸಲ್ಲಿಸಿದ್ದ ಅರ್ಜಿ ಹಾಗೂ ವೇದಾಂತ ಸಂಸ್ಥೆ ನೀಡಿದ್ದ ಇ-ಟೆಂಡರ್‌ಗೆ ಪರ್ಯಾಯ ವಿಧಾನಗಳನ್ನು ಅನುಸರಿಸುವ ಸಲಹೆಯನ್ನು ನ್ಯಾಯಪೀಠ
ತಿರಸ್ಕರಿಸಿದೆ,’ ಎಂದು ತೀರ್ಪು ನೀಡಿದೆ.  ಕೇಂದ್ರ ಅಧಿಕಾರ ಸಮಿತಿ 2017ರ ಏಪ್ರಿಲ್‌ ನಲ್ಲಿ ನೀಡಿದ ವರದಿ ಆಧರಿಸಿ, ಇ-ಟೆಂಡರ್‌ಗೆ ಬದಲಾಗಿ ಉತ್ಪಾದಕರು ಹಾಗೂ ಖರೀದಿದಾರರ ನಡುವೆ ದೀರ್ಘ‌ ಕಾಲಿಕ ಒಪ್ಪಂದ ಏರ್ಪಡಿಸಿ ವ್ಯವಹರಿಸಲು ಅವಕಾಶ ಕಲ್ಪಿಸುವಂತೆ ಎಫ್ ಐಎಂಐ ಕೋರಿತ್ತು. ಆದರೆ, ಇದಕ್ಕೆ ವಿರುದ್ಧವಾಗಿ ವಾದ ಮಂಡಿಸಿದ್ದ ಎನ್‌ಜಿಒ ಸಮಾಜ ಪರಿವರ್ತನಾ ಸಮುದಾಯ, “ಇ-ಹರಾಜು ನಡೆದರೆ ಒಳ್ಳೆಯ ದರ ಮತ್ತು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ರಾಯಧನ ಸಿಗುತ್ತದೆ’ ಎಂದು ಹೇಳಿತ್ತು.

ಸೋಮವಾರ ವಿಚಾರಣೆ ವೇಳೆ, ಹಿಂದಿನ ಘಟನೆಗಳನ್ನು ಪ್ರಸ್ತಾಪಿಸಿದ ನ್ಯಾಯಪೀಠ, “ಈ ಹಿಂದೆ ಕಬ್ಬಿಣದ ಅದಿರಿನ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯನ್ನು ಅತ್ಯಂತ ಕೆಟ್ಟದಾಗಿ ನಡೆಸಲಾಗಿದೆ. ಇದರಿಂದಾಗಿ ಭಾರೀ ಪ್ರಮಾಣದ ಸಾರ್ವಜನಿಕ ಆದಾಯವು ನಷ್ಟವಾಗಿ ಹೋಗಿದೆ. ಇಂತಹ
“ಭಯಾನಕ’ ಅನುಭವ ನಮ್ಮ ಮುಂದಿರುವಾಗ ಇ-ಹರಾಜು ರದ್ದು ಮಾಡಬೇಕೆಂಬ ಮನವಿಯನ್ನು ಒಪ್ಪಲು ಸಾಧ್ಯವೇ ಇಲ್ಲ. ಅಷ್ಟೇ ಅಲ್ಲ, ಇದೇ ಕಾರಣಕ್ಕಾಗಿ ಕೇಂದ್ರ ಉನ್ನತಾಧಿಕಾರ ಸಮಿತಿ(ಸಿಇಸಿ) ಮತ್ತು ಕರ್ನಾಟಕ ರಾಜ್ಯದ ಅಫಿಡವಿಟ್‌ನಲ್ಲಿನ ಸಲಹೆಗಳನ್ನೂ ಒಪ್ಪುತ್ತಿಲ್ಲ,’ ಎಂದಿತು. 

“ಅತ್ಯುತ್ತಮ ದರ ದೊರೆಯಲಿ ಎಂಬ ಉದ್ದೇಶದಿಂದ ಇ-ಹರಾಜು ಪ್ರಕ್ರಿಯೆ ನಡೆಸಲೇಬೇಕು,’ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಪೀಠ, ರಾಜ್ಯದ ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿ 2013ರ ಏಪ್ರಿಲ್‌ 18ರಂದು ಆದೇಶಿಸಿತ್ತು. ಆದರೆ ವರ್ಷಕ್ಕೆ 3 ಕೋಟಿ ಟನ್‌ (30 ಮಿಲಿಯನ್‌) ಅದಿರನ್ನು ಮಾತ್ರ ತೆಗೆಯಬೇಕು ಎಂದು ನಿರ್ಬಂಧ ವಿಧಿಸಿತ್ತು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.