ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪಿ ಪೊಲೀಸರ ಬಲೆಗೆ
Team Udayavani, Aug 29, 2017, 11:49 AM IST
ಬೆಂಗಳೂರು: ವಿವಾಹಿತನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬಸವೇಶ್ವರ ನಗರದ ಮಂಜುನಾಥನಗರದಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತೆಯ ಪೋಷಕರು ದೂರು ನೀಡಿದ್ದು, ಪೋಕ್ಸೋ ಕಾಯ್ದೆ ಅಡಿ ಸ್ಥಳೀಯ ನಿವಾಸಿ ಶ್ರೀನಿವಾಸ್ (36) ಎಂಬಾತನನ್ನು ಬಂಧಿಸಲಾಗಿದೆ ಎಂದು ಬಸವೇಶ್ವರನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ಶ್ರೀನಿವಾಸ್‌ಗೆ ವಿವಾಹವಾಗಿದ್ದು, ಒಂದು ಹೆಣ್ಣು ಮಗು ಇದೆ. ಆರೋಪಿ ಕುಟುಂಬ ಸಮೇತ ಮಂಜುನಾಥ ನಗರದಲ್ಲಿ ನೆಲೆಸಿದ್ದು. ಮೆಜೆಸ್ಟಿನ್‌ನ ಗಾಂಧಿನಗರದಲ್ಲಿರುವ ಸಿ ಮೂಡ್ ಎಂಬ ಫೋಟೋ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ. ಸಂತ್ರಸ್ತೆ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಆರೋಪಿಯ ಮನೆ ಮುಂಭಾಗದಲ್ಲೇ ವಾಸಿಸುತ್ತಿದ್ದಾರೆ.
ಹೀಗಾಗಿ ಸಂತ್ರಸ್ತೆಯ ಕುಟುಂಬಕ್ಕೆ ಆರೋಪಿ ಚಿರಪರಿಚಿತ. ಭಾನುವಾರ ಕೆಲಸದ ನಿಮಿತ್ತ ಸಂತ್ರಸ್ತೆಯ ಪೋಷಕರು ಹೊರಗಡೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಳು. ಆಗ ಟೀವಿ ನೋಡುವ ನೆಪದಲ್ಲಿ ಮನೆಗೆ ಬಂದ ಆರೋಪಿ, ಆಕೆಯ ಗುಪ್ತಾಂಗ ಮತ್ತು ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂತ್ರಸ್ತೆ ವಿರೋಧ ವ್ಯಕ್ತಪಡಿಸಿದಾಗ ಆತಂಕಗೊಂಡ ಶ್ರೀನಿವಾಸ್ ಮನೆಯಿಂದ ಹೊರ ನಡೆದಿದ್ದಾನೆ.
ಆತಂಕಗೊಂಡಿದ್ದ ಬಾಲಕಿ: ಕೆಲಸ ಮುಗಿಸಿಕೊಂಡು ಮನೆಗೆ ಬಂದ ತಾಯಿ ಮಗಳ ವರ್ತನೆಯಿಂದ ಅನುಮಾನಗೊಂಡಿದ್ದಾರೆ. ಅಲ್ಲದೇ ಊಟ ಸಹ ಮಾಡಿರಲಿಲ್ಲ. ಮಾತನಾಡಿಸಿದರೂ ಪ್ರತಿಕ್ರಿಯೆ ನೀಡಲಿಲ್ಲ. ಗಾಬರಿಗೊಂಡ ತಾಯಿ ಮಗಳನ್ನು ಪ್ರಶ್ನಿಸಿದ್ದಾರೆ. ಆದರೆ, ಆರಂಭದಲ್ಲಿ ನಡೆದ ಘಟನೆ ವಿವರಿಸಲು ಬಾಲಕಿ ಹೆದರಿದ್ದಾರೆ. ಬಳಿಕ ಪ್ರತ್ಯೇಕವಾಗಿ ಕರೆದೊಯ್ದು ವಿಚಾರಿಸಿದಾಗ ಕೃತ್ಯವನ್ನು ಹೇಳಿಕೊಂಡಿದ್ದು, ಕೂಡಲೆ ಪೋಷಕರು ಬಸವೇಶ್ವರನಗರ ಠಾಣೆಗೆ ದೂರು ನೀಡಿದ್ದಾರೆ.
ಕೃತ್ಯ ನಡೆದಾಗ ಆರೋಪಿಯ ಪತ್ನಿ ಮತ್ತು ಮಗಳು ಊರಿಗೆ ತೆರಳಿದ್ದರು. ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆ ಮತ್ತು ಜಾತಿನಿಂದನೆ ಪ್ರಕರಣ ಪ್ರಕರಣ ದಾಖಲಿಸಲಾಗಿದೆ ಎಂದು ಬಸವೇಶ್ವರ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.