ಮೆರವಣಿಗೆ ವೇಳೆ ದುರುಗುಟ್ಟಿ ನೋಡಿದ್ದಕ್ಕೆ ಯುವಕನ ಕೊಲೆ
Team Udayavani, Aug 29, 2017, 11:50 AM IST
ಬೆಂಗಳೂರು: ದುರುಗುಟ್ಟಿ ನೋಡಿ ಗದರಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಹತ್ಯೆಗೈದಿರುವ ಘಟನೆ ಹನುಮಂತನಗರದ ಕಾಳಿದಾಸ ಲೇಔಟ್‌ನಲ್ಲಿ ನಡೆದಿದೆ. ಕಾಳಿದಾಸ್ ಲೇಔಟ್ ನಿವಾಸಿ ಗಣೇಶ್ (21) ಮೃತ ಯುವಕ. ಈ ಸಂಬಂಧ ಪೃಥ್ವಿ ಮತ್ತು ಶ್ರೀನಿವಾಸ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಪಿಯುಸಿ ವ್ಯಾಸಂಗ ಮಾಡಿರುವ ಗಣೇಶ್ ಅರ್ಧಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಕಾಳಪ್ಪ ಲೇಔಟ್‌ನಲ್ಲಿ ಯುವಕರೆಲ್ಲ ಗಣಪತಿ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಸ್ನೇಹಿತರನ್ನು ಭೇಟಿಯಾಗಿ ಬರುವುದಾಗಿ ಹೇಳಿ ಮನೆಯಿಂದ ಬಂದಿದ್ದ ಗಣೇಶ್ ಇದೇ ಸ್ಥಳದಲ್ಲಿ ನಿಂತಿದ್ದ. ಆಗ ಎದುರಾದ ಪೃಥ್ವಿ ಮತ್ತು ಶ್ರೀನಿವಾಸ್‌ನನ್ನು ಗಣೇಶ್ ದುರುಗುಟ್ಟಿ ನೋಡಿದ್ದಾನೆ. ಇದರಿಂದ ಆಕ್ರೋಶಗೊಂಡ ಪೃಥ್ವಿ ಜಗಳ ತೆಗೆದಿದ್ದಾನೆ. ಬಳಿಕ ಸ್ಥಳೀಯರು ಇಬ್ಬರನ್ನೂ ಸಮಾಧಾನಪಡಿಸಿ ಕಳುಹಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಪೃಥ್ವಿ, ಶ್ರೀನಿವಾಸ್ ಮತ್ತು ತಂಡ ಗಣೇಶ್‌ನನ್ನು ಸಂಧಾನ ಮಾಡಲು ಕರೆಸಿಕೊಂಡಿದ್ದಾರೆ.
ಈ ವೇಳೆ ಗಣೇಶ್ ಮತ್ತು ಯುವಕರ ಗುಂಪಿನ ನಡುವೆ ಮತ್ತೆ ಜಗಳವಾಗಿದ್ದು, ಯುವಕರ ಗುಂಪು ಗಣೇಶ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಯುವಕನೊಬ್ಬ ಚಾಕುವಿನಿಂದ ಗಣೇಶ್ ಹೊಟ್ಟೆ ಹಾಗೂ ಎದೆ ಭಾಗಕ್ಕೆ ಇರಿದಿದ್ದಾನೆ. ಗಣೇಶ್ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಹೋಗುವಾಗ ಕುಸಿದು ಬಿದ್ದಿದ್ದು, ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಇತ್ತ ತಡರಾತ್ರಿಯಾದರೂ ಗಣೇಶ್ ಮನೆಗೆ ಬಾರದಿದ್ದರಿಂದ ಆತಂಕಗೊಂಡು ಪೋಷಕರು ಹುಡುಕಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಣೇಶ್ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ತನ್ನ ಏರಿಯಾದಲ್ಲಿ “ಹವಾ’ ಇಡಲು ಆರಂಭಿಸಿದ್ದ. ಹಾಗಾಗಿ ಎದುರಾಳಿ ಗುಂಪಿನ ಯುವಕರನ್ನು ಹೆದರಿಸುತ್ತಿದ್ದ. ಇದೇ ವಿಚಾರವಾಗಿ ಪೃಥ್ವಿ ಮತ್ತು ಸ್ನೇಹಿತರೊಂದಿಗೆ ಜಗಳ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.