ನಗರದಲ್ಲಿ ಹೊಸ 200 ಮತ್ತು 50 ರೂ. ನೋಟುಗಳು ಲಭ್ಯ
Team Udayavani, Aug 29, 2017, 11:50 AM IST
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಇತ್ತೀಚೆಗೆ ಬಿಡುಗಡೆಗೊಳಿಸಿರುವ ಹೊಸ 200 ಹಾಗೂ 50 ರೂ. ಮುಖಬೆಲೆಯ ನೋಟುಗಳು ಸೋಮವಾರದಿಂದ ನಗರದ ಆರ್ಬಿಐ ಪ್ರಾದೇಶಿಕ ಬ್ಯಾಂಕ್ನಲ್ಲಿ ಲಭವಾಗುತ್ತಿವೆ.
ಆರ್ಬಿಐನಿಂದ ಆಗಸ್ಟ್ 25ರಂದು ಹೊಸ ನೋಟುಗಳನ್ನು ಬಿಡುಗಡೆಗೊಳಿಸಲಾಗಿದ್ದು, ಸೋಮವಾರದಿಂದ ನಗರದ ಹಲವು ಬ್ಯಾಂಕ್ಗಳಿಗೆ ಹೊಸ ನೋಟುಗಳ ಪೂರೈಕೆ ಆರಂಭವಾಗಿದೆ. ಆ ಹಿನ್ನೆಲೆಯಲ್ಲಿ ನಗರದ ಹಲವಾರು ಬ್ಯಾಂಕ್ಗಳಲ್ಲಿ ಗ್ರಾಹಕರಿಗೆ ಹೊಸ ನೋಟುಗಳು ಮಂಗಳವಾರದಿಂದಲೇ ದೊರೆಯುವ ಸಾಧ್ಯತೆಯಿದೆ.
ಹೊಸ ನೋಟುಗಳು ದೊರೆಯುತ್ತಿವೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಬ್ಯಾಂಕ್ಗಳಿಗೆ ಭೇಟಿ ನೀಡಿ ಹೊಸ ನೋಟು ಪಡೆಯಲು ಮುಂದಾಗಿದ್ದಾರೆ. ಆದರೆ, ಹೊಸ ನೋಟುಗಳು ಬಂದಿಲ್ಲ ಎಂದು ತಿಳಿದು ನಗರದ ಕೇಂದ್ರ ಕಚೇರಿಗೆ ಬಂದ ಹಿನ್ನೆಲೆಯಲ್ಲಿ ಆರ್ಬಿಐ ಬ್ಯಾಂಕ್ ಬಳಿ ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೆ ಜನರು ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂತು.
ಎಟಿಎಂಗಳಲ್ಲಿ ಹೊಸ ನೋಟುಗಳ ಲಭ್ಯತೆಗೆ ಯಂತ್ರಗಳನ್ನು ಉನ್ನತೀಕರಿಸುವ ಕಾರ್ಯ ಆರಂಭಗೊಂಡಿದ್ದು, ಮುಂಬೈ, ದೆಹಲಿ ಹಾಗೂ ಕೊಲ್ಕತ್ತಾಗಳಲ್ಲಿ ಮೊದಲ ಹಂತದಲ್ಲಿ ನೋಟುಗಳು ಲಭ್ಯವಾಗುತ್ತಿವೆ. ಆನಂತರದಲ್ಲಿ ಬೆಂಗಳೂರು, ಪುಣೆ ಹಾಗೂ ಮುಂಬೈ ನಗರಗಳಲ್ಲಿಯೂ ಆರಂಭಿಕವಾಗಿ ಕೆಲವೊಂದು ಎಟಿಎಂಗಳಲ್ಲಿ ಮಾತ್ರ ಹೊಸ ನೋಟುಗಳು ಲಭ್ಯವಾಗಲಿವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.