ರೈತ ಕ್ರೀಡಾಕೂಟ, ಕೆಸರುಗದ್ದೆ ಓಟ ಇರೊಲ್ಲ 


Team Udayavani, Aug 29, 2017, 12:13 PM IST

mys3.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಸೆ.22 ರಿಂದ 24ರವರೆಗೆ ರೈತ ದಸರಾ ಆಯೋಜಿಸಲಾಗಿದೆ ಎಂದು ರೈತ ದಸರಾ ಉಪ ಸಮಿತಿ ಕಾರ್ಯಾಧ್ಯಕ್ಷರಾದ ಜಂಟಿ ಕೃಷಿ ನಿರ್ದೇಶಕ ಕೆ.ಎಂ.ಸೋಮಸುಂದ್ರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ರೈತ ದಸರಾದಲ್ಲಿ ಸಾವಯವ ಕೃಷಿ, ಸಿರಿಧಾನ್ಯ ಬೆಳೆಗಳಿಗೆ ಉತ್ತೇಜನ ಹಾಗೂ ಕೃಷಿಯಲ್ಲಿ ನೀರು ನಿರ್ವಹಣೆಗೆ ಒತ್ತು ನೀಡುವ ಕುರಿತು ಚರ್ಚೆ ಸಂವಾದ ನಡೆಯಲಿವೆ ಎಂದರು.

ದಸರಾ ಮಹೋತ್ಸವ ಆಚರಣಾ ಸಮಿತಿ ನಿರ್ಧಾರದಂತೆ ಈ ವರ್ಷ ತಾಲೂಕು ಮಟ್ಟದಲ್ಲಿ ಆಯೋಜಿಸುತ್ತಿದ್ದ ರೈತ ಕ್ರೀಡಾಕೂಟ ಹಾಗೂ ಕೆಸರುಗದ್ದೆ ಓಟವನ್ನು ಕೈಬಿಡಲಾಗಿದೆ ಎಂದು ಹೇಳಿದರು. ಸೆ.22ರ ಬೆಳಗ್ಗೆ 9.30ಕ್ಕೆ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ರೈತ ದಸರಾ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ.

ಕಂಸಾಳೆ, ಡೊಳ್ಳು ಕುಣಿತ ಸೇರಿದಂತೆ ಜಾನಪದ ಕಲಾತಂಡಗಳು, ಅಲಂಕೃತ ಎತ್ತಿನಗಾಡಿ, ಟ್ರ್ಯಾಕ್ಟರ್‌ಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಜೆ.ಕೆ.ಮೈದಾನದಲ್ಲಿ ಮೆರವಣಿಗೆ ಅಂತ್ಯವಾಗಲಿದ್ದು, ಬೆಳಗ್ಗೆ 10.30ಕ್ಕೆ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ, ಪಶುಪಾಲನಾ ಇಲಾಖೆ ಹಾಗೂ ಕೃಷಿ ಯಂತ್ರೋಪಕರಣ ಮಳಿಗೆಗಳ ವಸ್ತು ಪ್ರದರ್ಶನ ಹಾಗೂ ರೈತ ದಸರಾ ಕಾರ್ಯಕ್ರಮಗಳನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 3ಕ್ಕೆ ಸಂವಾದ ನಡೆಯಲಿದ್ದು, ಕೃಷಿ ವಿವಿಗಳ ವಿಶ್ರಾಂತ ಕುಲಪತಿಗಳು, ವಿ.ಸಿ.ಫಾರಂನ ಕೃಷಿ ವಿಜಾnನಿಗಳನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಆಹ್ವಾನಿಸಲಾಗುವುದು ಎಂದು ಹೇಳಿದರು. ಸೆ.23ರಂದು ಜೆ.ಕೆ.ಮೈದಾನದಲ್ಲಿ ಬೆಳಗ್ಗೆ 9ಕ್ಕೆ ಕಾಲಿಗೆ ಗೋಣಿಚೀಲ ಕಟ್ಟಿ ಕುಪ್ಪಳಿಸುವ ಸ್ಪರ್ಧೆ, 11.30ಕ್ಕೆ ರೈತರಿಗೆ ಗುಂಡು ಎತ್ತುವ ಸ್ಪರ್ಧೆ, ಮಧ್ಯಾಹ್ನ 12.30ಕ್ಕೆ ರೈತರಿಗೆ 50 ಕೆ.ಜಿ ತೂಕದ ಗೊಬ್ಬರ ಮೂಟೆ ಹೊತ್ತು ಓಡುವ ಸ್ಪರ್ಧೆ, ಮಧ್ಯಾಹ್ನ 1ಕ್ಕೆ ರೈತ ಮಹಿಳೆಯರಿಗೆ ನೀರು ತುಂಬಿದ ಬಿಂದಿಗೆ ಹೊತ್ತು ಓಡುವ ಸ್ಪರ್ಧೆ ಹಾಗೂ ಚಮಚದಲ್ಲಿ ನಿಂಬೆಹಣ್ಣು ಇಟ್ಟು ಓಡುವ ಸ್ಪರ್ಧೆ ನಡೆಯಲಿದೆ ಎಂದರು.

ಸೆ.24ರ ಬೆಳಗ್ಗೆ 6.30ಕ್ಕೆ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದ್ದು,  ಹಸುಗಳ ಮಾಲಿಕರಿಗೆ ಪ್ರಥಮ ಬಹುಮಾನವಾಗಿ 50 ಸಾವಿರ ರೂ., ದ್ವಿತೀಯ ಬಹುಮಾನ 40 ಸಾವಿರ ರೂ., ತೃತೀಯ ಬಹುಮಾನ 30 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.
 
ಸಂಜೆ 5.30ಕ್ಕೆ ನಡೆಯುವ ರೈತ ದಸರಾ ಸಮಾರೋಪದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಎ.ಮಂಜು ಬಹುಮಾನ ವಿತರಣೆ ಮಾಡಲಿದ್ದಾರೆಂದರು. ಇದೇ ವೇಳೆ ದಸರಾ ವಿಶೇಷಾಧಿಕಾರಿಗಳಾದ ಜಿಲ್ಲಾಧಿಕಾರಿ ರಂದೀಪ್‌ ಡಿ., ರೈತ ದಸರಾ ಭಿತ್ತಿಪತ್ರ ಬಿಡುಗಡೆ ಮಾಡಿದರು. ದಸರಾ ಉಪ ವಿಶೇಷಾಧಿಕಾರಿ ಕೆ.ಎಸ್‌.ಶಿವಕುಮಾರಸ್ವಾಮಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಪಿ.ಎಂ.ಪ್ರಸಾದ್‌ ಮೂರ್ತಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.