ಅಜೆಕಾರು ಕಲಾಭಿಮಾನಿ ಬಳಗ: ಸುಧನ್ವ ಮೋಕ್ಷ ತಾಳಮದ್ದಳೆ
Team Udayavani, Aug 29, 2017, 1:54 PM IST
ಮುಂಬಯಿ: ಚೆಂಬೂರ್ ಕರ್ನಾಟಕ ಸಂಘದ ಆಶ್ರಯದಲ್ಲಿ ಆ. 19ರಂದು ಸಂಜೆ 4ರಿಂದ ಚೆಂಬೂರ್ ಕರ್ನಾಟಕ ಹೈಸ್ಕೂಲಿನ ಸಭಾಗೃಹದಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗದ ಊರಿನ ಸುಪ್ರಸಿದ್ಧ ಕಲಾವಿದರಿಂದ ಸುಧನ್ವ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆಯು ವಿಜೃಂಭಣೆಯಿಂದ ಜರಗಿತು.
ಆರಂಭದಲ್ಲಿ ಸಂಘದ ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ದಯಾ ಸಾಗರ್ ಚೌಟ ಅವರು ನೆರೆದ ಕಲಾಭಿ ಮಾನಿಗಳನ್ನು ಹಾಗೂ ಕಲಾವಿದರನ್ನು ಸ್ವಾಗತಿಸಿದರು.
ಭಾಗವತರ ಗಣಪತಿ ಸ್ತುತಿ ಯೊಂದಿಗೆ ಘಾಟ್ಕೊàಪರ್‌ನ
ಹೊಟೇಲು ಉದ್ಯಮಿ ಗಣೇಶ್‌ರೈ ಅವರು ಸಂಘದ ಪದಾಧಿ ಕಾರಿಗಳೊಂದಿಗೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಊರಿನ ಹಿರಿಯ ಕಲಾವಿದರನ್ನು ಪುಷ್ಪಗೌರವದೊಂದಿಗೆ ಸ್ವಾಗತಿಸಲಾಯಿತು. ಅಜೆಕಾರು ಕಲಾಭಿಮಾನಿ ಬಳಗದ ಪರವಾಗಿ ಕುಕ್ಕುವಳ್ಳಿ ಭಾಸ್ಕರ್ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ, ಮುಂಬಯಿ ಕನ್ನಡಿಗರ ಹಿರಿಯ ವಿದ್ಯಾಸಂಸ್ಥೆಗಳ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಊರಿನ ಹಿರಿಯ ಕಲಾವಿದರನ್ನು ಸಭಿಕರಿಗೆ ಪರಿಚಯಿಸಿದರು.
ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ತಮ್ಮ ಬಳಗದ ಕೊನೆಯ ಕಾರ್ಯಕ್ರಮದ ವ್ಯವಸ್ಥೆ ಮಾಡಿದ ಸಂಘದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಸುಧನ್ವ ಮೋಕ್ಷ ತಾಳಮದ್ದಳೆ ಭಾಗವತರ ಸುಮಧುರ ಕಂಠದ ಗಾಯನ, ಪ್ರಬುದ್ಧ ಅರ್ಥದಾರಿಗಳ ಮಾತಿನ ಮೋಡಿಯಿಂದ ಕಲಾರಸಿಕರ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಚ್. ಕೆ. ಸುಧಾಕರ್, ಉಪಾಧ್ಯಕ್ಷ ಪ್ರಭಾಕರ ಬೋಳಾರ್ ಗೌರವ ಕಾರ್ಯದರ್ಶಿ ರಂಜನ್‌ಕುಮಾರ್ ಅಮೀನ್ ಇತರ ಪದಾಧಿಕಾರಿಗಳಾದ ಗುಣಾಕರ ಹೆಗ್ಡೆ, ಟಿ. ಆರ್. ಶೆಟ್ಟಿ, ಮಧುಕರ ಬೈಲೂರು, ಸುಧಾಕರ ಅಂಚನ್, ಯೋಗೀಶ್ ಗುಜರನ್ ಮತ್ತಿತರರು ಉಪಸ್ಥಿತರಿದ್ದರು. ದಯಾಸಾಗರ ಚೌಟ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಂಘದ ವತಿಯಿಂದ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
Desi Swara@150: ಪೊಲೇಂಡ್ ಕನ್ನಡಿಗರು ಸಂಘದ ಅದ್ದೂರಿ ಉದ್ಘಾಟನೆ
Desi Swara@150: ನವವಿಂಶತಿ ನೃತ್ಯ ಹಬ್ಬದಲ್ಲಿ ದ್ವಿದಳದ ಸತ್ರಿಯ ಪ್ರದರ್ಶನ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.