ಡೋಕ್ಲಾಂ ಬಿಕ್ಕಟ್ಟು ಭಾರತಕ್ಕೊಂದು ಪಾಠ; ಚೀನಾ ಮಿಲಿಟರಿ
Team Udayavani, Aug 29, 2017, 4:47 PM IST
ನವದೆಹಲಿ/ಬೀಜಿಂಗ್: ಭೂತಾನ್‌ಗೆ ಸೇರಿರುವ ಡೋಕ್ಲಾಂನಲ್ಲಿ ಭಾರತ ಮತ್ತು ಚೀನಾ ಗಡಿಯಿಂದ ಸೇನೆ ವಾಪಸ್ ಕರೆಸಿಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸುವ ಮೂಲಕ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮುಸುಕಿನ ಸಮರ ಅಂತ್ಯಗೊಂಡಿದ್ದರೆ, ಮತ್ತೊಂದೆಡೆ ಈ ಇಡೀ ಘಟನೆಯಿಂದ ಭಾರತ ಪಾಠ ಕಲಿಯಬೇಕೆಂದು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‍ಎ) ಹೇಳಿದೆ.
ಗಡಿ ಬಿಕ್ಕಟ್ಟಿನಿಂದ ಭಾರತ ಪಾಠ ಕಲಿಯಬೇಕೆಂಬುದನ್ನು ನಾವು (ಚೀನಾ) ನೆನಪಿಸುತ್ತಿದ್ದೇವೆ. ಗಡಿ ವಿಚಾರಕ್ಕೆ ಸಂಬಂಧಪಟ್ಟ ಒಪ್ಪಂದ, ಅಂತಾರಾಷ್ಟ್ರೀಯ ಕಾನೂನನ್ನು ಗೌರವಿಸಿ ಚೀನಾದ ಜೊತೆ ಸೇರಿ ಕಾರ್ಯನಿರ್ವಹಿಸುವ ಮೂಲಕ ಭಾರತ ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಇದರೊಂದಿಗೆ ಉಭಯ ದೇಶಗಳ ಸೇನೆ ಜತೆ ಸೌಹಾರ್ದ ಸಂಬಂಧ ಮುಂದುವರಿಸಬೇಕು ಎಂದು ಪಿಎಲ್ ಎನ ಹಿರಿಯ ಕರ್ನಲ್ ವ್ಯು ಕ್ವಿಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಭಯ ದೇಶಗಳ ರಾಜತಾಂತ್ರಿಕರ ನಡುವಿನ ಮಾತುಕತೆ ಮೂಲಕ ಸುಮಾರು 75 ದಿನಗಳ ಡೋಕ್ಲಾಂ ಬಿಕ್ಕಟ್ಟು ಸೌಹಾರ್ದಯುತವಾಗಿ ಬಗೆಹರಿದಿತ್ತು. ಅಲ್ಲದೇ ಭಾರತ ಮತ್ತು ಚೀನಾ ತನ್ನ ಸೇನೆಯನ್ನು ವಾಪಸ್ ತೆಗೆದುಕೊಳ್ಳಲು ಒಪ್ಪಿಗೆ ಸೂಚಿಸಿರುವುದಾಗಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.