ಮರಳು ಸಮಸ್ಯೆಗೆ ಜಿಲ್ಲಾಡಳಿತವೇ ಹೊಣೆ: ಕೋಟ ಶ್ರೀನಿವಾಸ ಪೂಜಾರಿ


Team Udayavani, Aug 30, 2017, 8:00 AM IST

poojari.jpg

ಉಡುಪಿ: ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಇಲ್ಲದ ಮರಳು ಸಮಸ್ಯೆ ಉಡುಪಿಯಲ್ಲಿ ಉದ್ಭವಿಸಿದ್ದು ಇದಕ್ಕೆ ಜಿಲ್ಲಾಡಳಿತವನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬಳಕೆದಾರರ ವೇದಿಕೆಯಲ್ಲಿ ಜರಗಿದ ಮುಖಾಮುಖೀ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಹಸಿರುಪೀಠದಿಂದ ಹಸಿರು ನಿಶಾನೆ ಸಿಕ್ಕಿದ್ದರೂ ಜಿಲ್ಲಾಡಳಿತ ಇನ್ನೂ ಮೀನಮೇಷವನ್ನು ಮಾಡುತ್ತಿದೆ. ಇದರಿಂದ ಅಸಂಖ್ಯಾತ ಕೂಲಿಕಾರ್ಮಿಕರು ಬೀದಿಗೆ ಬಂದಿದ್ದಾರೆ. ಕಟ್ಟಡ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ತನ್ಮಧ್ಯೆ ಮರಳುಸಾಗಿಸಿದ ಬಾಬ್ತು 3.73 ಲಕ್ಷ ರಾಜಧನ ಉಡುಪಿಗೆ ನೀಡಲು ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಸ್ವರ್ಣಾನದಿಯಿಂದ ಹೂಳೆತ್ತಲು ಇಚ್ಛಾಶಕ್ತಿಯ ಕೊರತೆ ಇದೆ. ಸುಮಾರು 1 ಲಕ್ಷ ಟನ್‌ನಷ್ಟು ಮರಳು ಇದ್ದರೂ ಅದನ್ನು ವಿಲೇವಾರಿ ಮಾಡುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಅವರು ಹೇಳಿದರು.

94 ಸಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸುಮಾರು 27,500 ಅರ್ಜಿಗಳು ಬಂದಿದ್ದು 8625 ಅರ್ಜಿಗಳನ್ನು ವಿಲೇವಾರಿ ಮಾಡಿ ಕೇವಲ 711 ಸಂತ್ರಸ್ತರಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 94ಸಿಸಿಯಲ್ಲಿ  ರಾಜ್ಯಕ್ಕೆ 1.76 ಅರ್ಜಿಗಳು ಬಂದಿವೆ. 58 ಸಾವಿರ ವಿಲೇವಾರಿಯಾಗಿವೆ. 1.22 ಲ. ಅರ್ಜಿಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು. ಉಡುಪಿ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟರ್‌ ಡೀಮ್ಡ್ ಅರಣ್ಯವಲ್ಲದ ಜಾಗವಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವಾಗಿ ನಿರ್ಧಾರತೆಗೆದುಕೊಂಡರೆ ಜಿಲ್ಲೆಯಲ್ಲಿ ಸುಮಾರು 23 ಸಾವಿರ ಸಂತ್ರಸ್ಥರಿಗೆ ಹಕ್ಕುಪತ್ರ ಲಭಿಸುತ್ತದೆ ಎಂದು ಅವರು ಹೇಳಿದರು. ಶಿಕ್ಷಣ ಹಕ್ಕು ಅಡಿಯಲ್ಲಿ ಉಡುಪಿಯಲ್ಲಿ 1040 ಸೀಟುಗಳ ಪೈಕಿ 998 ಹಂಚಿಕೆಯಾಗಿದೆ 132 ಉಳಿಕೆಯಾಗಿದೆ ಎಂದು ತಿಳಿಸಿದ ಅವರು ರಾಜ್ಯದ ಎಲ್ಲ ಶಾಲೆಗಳನ್ನು ಸರಕಾರಿಯನ್ನಾಗಿ ಮಾಡಿಬಿಟ್ಟರೆ ಈ ಸಮಸ್ಯೆಯಿಂದ ಮುಕ್ತಿಹೊಂದಲು ಸಾಧ್ಯವೆಂದು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲೆಗೆ 30 ನರ್ಮ್ ಬಸ್‌ಗಳು ಮಂಜೂರಾಗಿವೆ. ಈ ಪೈಕಿ 12 ಬಸ್‌ಗಳು ರಹದಾರಿಯನ್ನು ಹೊಂದಿವೆ. 18 ಬಸ್‌ಗಳಿಗೆ ತಡೆಯಾಜ್ಞೆಯಾಗಿದೆ. ಕೇಂದ್ರ ಸರಕಾರವು ಈ ಯೋಜನೆಗೆ ಶೇ. 70 ರಷ್ಟು ಹಣವನ್ನು ಬಿಡುಗಡೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ವೇದಿಕೆಯ ಸಂಚಲಾಕ ಕೆ. ದಾಮೋದರ ಐತಾಳ್‌ ಸ್ವಾಗತಿಸಿ, ವಿಶ್ವಸ್ಥರಾದ ವಾದಿರಾಜ ಆಚಾರ್ಯ ವಂದಿಸಿದರು. ಎಚ್‌. ಶಾಂತರಾಜ ಐತಾಳ್‌ ಪ್ರಾಸ್ತಾವಿಸಿದರು. ಟಿ. ಚಂದ್ರಶೇಖರ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

7(2

Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!

3

Karkala: ಬೀದಿ ವ್ಯಾಪಾರಿಗಳಿಂದ ಸುಗಮ ಸಂಚಾರಕ್ಕೆ ಅಡ್ಡಿ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.