ದೇಶದಲ್ಲಿ ಮದ್ಯಪಾನ ನಿಷೇಧವಾಗಲಿ: ಸಿಎಂ ಸಿದ್ದರಾಮಯ್ಯ


Team Udayavani, Aug 30, 2017, 11:50 AM IST

mys4.jpg

ಮೈಸೂರು: ಜನರ ಆರೋಗ್ಯದ ದೃಷ್ಟಿಯಿಂದ ದೇಶದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದಲ್ಲಿ ಏರ್ಪಡಿಸಿದ್ದ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಾರಾಯಿ ದಂಧೆ: ರಾಜ್ಯದಲ್ಲಿ ಮದ್ಯಪಾನ ನಿಷೇಧಕ್ಕೆ ಗಂಭೀರ ಚಿಂತನೆ ನಡೆಸುತ್ತೇನೆ. ಆದರೆ, ಒಂದು ರಾಜ್ಯದಲ್ಲಿ ನಿಷೇಧಿಸುವುದರಿಂದ ಪರಿಣಾಮ ಬೀರುವುದಿಲ್ಲ. ಬದಲಿಗೆ ಮದ್ಯವ್ಯಸನಿಗಳು ಪಕ್ಕದ ರಾಜ್ಯಗಳಿಂದ ತಂದು ಕುಡಿಯುವವರಿದ್ದಾರೆ. ಕರ್ನಾಟಕದಲ್ಲಿ ಸಾರಾಯಿ ನಿಷೇಧ ಮಾಡಿದ್ದರಿಂದ ಹಳ್ಳಿ ಜನರು ಕುಡಿಯುವುದನ್ನು ಬಿಟ್ಟಿಲ್ಲ. ಜತೆಗೆ ಹಳ್ಳಿಗಳಲ್ಲಿ ಕದ್ದು ಮದ್ಯ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಹೆಚ್ಚಾಯಿತು: ಹಲವು ರಾಜ್ಯಗಳು ಸಾರಾಯಿ ನಿಷೇಧವನ್ನು ಹಿಂಪಡೆದಿವೆ, ಜತೆಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು, ಗದಗ್‌ನ ಶಾಸಕ ಡಿ.ಆರ್‌.ಪಾಟೀಲ ಹಾಗೂ ಸಂಡೂರು ಶಾಸಕ ಎಂ.ವೈ.ಘೋರ್ಪಡೆ ಅವರುಗಳು ಸಾರಾಯಿ ಹರಾಜು ಮಾಡದಂತೆ ಆಗ್ರಹಿಸಿದ್ದರು, ಹೀಗಾಗಿ ಆ ವರ್ಷ ಬೆಳ್ತಂಗಡಿ, ಗದಗ ಹಾಗೂ ಸಂಡೂರು ತಾಲೂಕುಗಳಲ್ಲಿ ಸಾರಾಯಿ ಹರಾಜು ಮಾಡಲಿಲ್ಲ. ಇದರಿಂದಾಗಿ ಆ ತಾಲೂಕುಗಳಲ್ಲಿ ಕುಡಿಯುವವರ ಸಂಖ್ಯೆ ಕಡಿಮೆಯಾಗಲಿಲ್ಲ. ಬದಲಿಗೆ ಭಟ್ಟಿ ಸಾರಾಯಿ ಹೆಚ್ಚಾಯ್ತು ಎಂದು ಹೇಳಿದರು.

ದೇಶದಲ್ಲಿ ನಿಷೇಧವಾಗಬೇಕು: ವಾಣಿಜ್ಯ ತೆರಿಗೆ ನಂತರ, ರಾಜ್ಯದ 2ನೇ ದೊಡ್ಡ ಆದಾಯದ ಮೂಲ ಅಬಕಾರಿ, ಹಾಗೆಂದು ಜನರ ಆರೋಗ್ಯ ಹಾಳು ಮಾಡುವುದು ನಮ್ಮ ಉದ್ದೇಶವಲ್ಲ, ಆದರೆ, ಒಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವುದರಿಂದ ಪರಿಣಾಮ ಬೀರುವುದಿಲ್ಲ. ಹೀಗಾಗಿ ಇಡೀ ದೇಶದಲ್ಲಿ ಮದ್ಯಪಾನ ನಿಷೇಧವಾಗಬೇಕು ಎಂದರು. 1.86 ಲಕ್ಷ ಕೋಟಿ ರೂ.ನ ಕರ್ನಾಟಕ ಬಜೆಟ್‌ನಲ್ಲಿ ಅಬಕಾರಿ ಆದಾಯವೇ 15 ಸಾವಿರ ಕೋಟಿಯಷ್ಟಿದೆ. ಹಾಗೆಂದು ಜನರ ಆರೋಗ್ಯ ಹಾಳುಮಾಡಬೇಕು ಎಂಬುದು ಸರ್ಕಾರದ ಉದ್ದೇಶವಲ್ಲ. ಕೆಲವರು ಕುಡುವುದನ್ನೇ ದೊಡ್ಡ ಪ್ರತಿಷ್ಠೆ ಎಂದು ಭಾವಿಸಿದ್ದಾರೆ ಅವರಿಗೆ ಅರಿವು ಮೂಡಿಸಬೇಕು ಎಂದರು.

ಸಂಯಮ ಪ್ರಶಸ್ತಿ: ಖ್ಯಾತ ಮನೋವೈದ್ಯ ಡಾಸಿ.ಆರ್‌.ಚಂದ್ರಶೇಖರ್‌, ಹುಣಸೂರು ತಾಲೂಕು ಕಟ್ಟೆಮಳಲವಾಡಿಯ ಬೆಳಕು ಸಂಸ್ಥೆ ಸಂಸ್ಥಾಪಕ ನಿಂಗರಾಜ್‌ ಮಲ್ಲಾಡಿ ಹಾಗೂ ತುಮಕೂರಿನ ಆಚರ್ಡ್‌ ಸಂಸ್ಥೆ ಅಧ್ಯಕ್ಷ ಡಾ.ಎಚ್‌.ಜಿ.ಸದಾಶಿವಯ್ಯ ಅವರಿಗೆ ಸಿಎಂ ಸಿದ್ದರಾಮಯ್ಯ ಸಂಯಮ ಪ್ರಶಸ್ತಿ ನೀಡಿ ಗೌರವಿಸಿದರು.

ಸುತ್ತೂರು ಮಹಾ ಸಂಸ್ಥಾನ ಮಠದ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ಹುಲಿಯೂರು ದುರ್ಗ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ದಿವ್ಯ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಮೇಯರ್‌ ಎಂ.ಜೆ.ರವಿಕುಮಾರ್‌, ಮಂಡಳಿ ಅಧ್ಯಕ್ಷ ಎಚ್‌.ಸಿ.ರುದ್ರಪ್ಪ, ಶಾಸಕರಾದ ಎಚ್‌.ಪಿ.ಮಂಜುನಾಥ್‌, ಕಳಲೆ ಕೇಶವಮೂರ್ತಿ ಹಾಜರಿದ್ದರು. ಶಾಸಕ ವಾಸು ಅಧ್ಯಕ್ಷತೆ ವಹಿಸಿದ್ದರು.

ನನಗೆ ನೈತಿಕತೆ ಇಲ್ಲ!: ಈ ಪ್ರಶಸ್ತಿ ಪ್ರದಾನ ಮಾಡಲು ನನಗೆ ನೈತಿಕತೆ ಇಲ್ಲ. ಆದರೂ ಸಂಯಮದಿಂದಿದ್ದೇನೆ ಎಂದು ಪ್ರದಾನ ಮಾಡುತ್ತಿದ್ದೇನೆ. ಹೀಗೆಂದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ನಾನು ವಿದ್ಯಾರ್ಥಿ ದಿಸೆಯಲ್ಲಿ ಹಾಗೂ ಲಾಯರ್‌ ಆಗಿದ್ದಾಗ ಮದ್ಯಪಾನ ಮಾಡಿದ್ದೇನೆ. ಹೀಗಾಗಿ ಈ ಪ್ರಶಸ್ತಿ ಪ್ರದಾನ ಮಾಡಲು ನನಗೆ ನೈತಿಕತೆ ಇಲ್ಲ ಎಂದರು.

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.