ರಾಮಮಂದಿರ ಜನರ ಸ್ವಾಭಿಮಾನದ ಪ್ರತೀಕ


Team Udayavani, Aug 30, 2017, 3:55 PM IST

30-CHIT-3.jpg

ಚಿತ್ರದುರ್ಗ: ಭಾರತ ದೇಶಕ್ಕೆ ರಾಮಮಂದಿರ ಸ್ವಾಭಿಮಾನದ ಪ್ರತೀಕ. ನಾವು ರಾಮಮಂದಿರ ನಿರ್ಮಿಸುವುದು ಶತಃಸಿದ್ಧ ಎಂದು ವಿಶ್ವ ಹಿಂದೂ ಪರಿಷತ್‌ನ ವಿಶೇಷ ಸಂಪರ್ಕ ಪ್ರಮುಖ್‌ ಮಂಜುನಾಥಸ್ವಾಮಿ ಹೇಳಿದರು.

ಇಲ್ಲಿನ ಸ್ಟೇಡಿಯಂ ರಸ್ತೆಯ ಹಿಂದೂ ಮಹಾಗಣಪತಿ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಮಂದಿರ ನಿರ್ಮಾಣದ ಬಗ್ಗೆ ಅನುಮಾನ ಅನಗತ್ಯ. ರಾಮಮಂದಿರ ನಿರ್ಮಾಣ ನಮಗೆ ಆದ್ಯತೆಯ ವಿಷಯ ಎಂದರು. ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವ ಗಮನ ಸೆಳೆದಿದೆ. ಇಲ್ಲಿ ಲಕ್ಷೋಪಲಕ್ಷ ಜನರು ಸೇರುವುದು ಸಮಾಧಾನ ಮತ್ತು ನೆಮ್ಮದಿಯ ವಿಷಯ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಅಹಿಂಸೆಯಿಂದ ಅಲ್ಲ, ಸಾವಿರಾರು ಜನರ ಹೋರಾಟ ಮತ್ತು ಸಂಘರ್ಷದ ಬಲದಿಂದ. ಇದಕ್ಕಾಗಿ ಅನೇಕ ಮಹನೀಯರ  ಮಾರಣಹೋಮವೇ ನಡೆದಿದೆ. ನಮ್ಮ ಭಾರತ ದೇಶದಲ್ಲಿ ಸಾವಿರಕ್ಕೂ ಹೆಚ್ಚು ವರ್ಷ ಪರಕೀಯರು ಆಳ್ವಿಕೆ ನಡೆಸಿದರೂ ಭಾರತೀಯರ ಮೂಲ ಸಂಸ್ಕೃತಿಯನ್ನು ನಾಶ ಮಾಡಲು
ಯಾರಿಂದಲೂ ಸಾಧ್ಯವಾಗಿಲ್ಲ. ಭಾರತೀಯರ ಇತಿಹಾಸ ಸೋಲಿಲ್ಲದ ಇತಿಹಾಸ ಎಂದು ಬಣ್ಣಿಸಿದರು.

ಭಾರತವನ್ನು ಸುತ್ತಾಡಿದ್ದ ಲಾರ್ಡ್‌ ಮೆಕಾಲೆ, ಭಾರತೀಯರು ಗೋವನ್ನು ತಾಯಿಗಿಂತ ಹೆಚ್ಚಾಗಿ ಪೂಜಿಸುತ್ತಿದ್ದರು. ಗುಡಿ, ಮಠ, ಮಂದಿರ, ಗುರು-ಹಿರಿಯರ ಬಗ್ಗೆ ಅಪಾರ ಗೌರವ ತೋರುತ್ತಿದ್ದರು. ಹಾಗಾಗಿ ಭಾರತವನ್ನು ಶಾಶ್ವತವಾಗಿ ಆಳ್ವಿಕೆ ನಡೆಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಭಾರತವನ್ನು ಶಕರು, ಕುಶಾಣರು, ಪಠಾಣರು, ತುರ್ಕರು, ಸೇರಿದಂತೆ ನಾನಾ ರಾಜ ಮನೆತನಗಳು ಆಳ್ವಿಕೆ ನಡೆಸಿದರೂ ಯಾರು ಕೂಡ ಶಾಶ್ವತವಾಗಿ ಆಳ್ವಿಕೆ ನಡೆಸಲಿಲ್ಲ. ದೇಶದ ಜನರು ಅನಾಗರಿಕರಾಗಿದ್ದಾರೆ. ಇವರನ್ನು ಬೌದ್ಧಿಕ ದಾಸ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಭಾವಿಸಿದ್ದರು ಎಂದರು.

ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿ ಸದಸ್ಯರಾದ ಎಂ. ರಘು, ರಘುರಾಮ ರೆಡ್ಡಿ, ಗುರುಮೂರ್ತಿ, ಮೋಹನ್‌, ರಂಗಸ್ವಾಮಿ, ಪ್ರವೀಣ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.