ಸೆ. 4-6: ಮೂಡಬಿದಿರೆಯಲ್ಲಿ ರಾಜ್ಯಮಟ್ಟದ ಆ್ಯತ್ಲೆಟಿಕ್ ಕೂಟ
Team Udayavani, Aug 31, 2017, 9:50 AM IST
ಮೂಡಬಿದಿರೆ: ಕರ್ನಾಟಕ ಆ್ಯತ್ಲೆಟಿಕ್ ಅಸೋಸಿಯೇಶನ್ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ.4ರಿಂದ 6ರವರೆಗೆ ಮೂಡಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಆ್ಯತ್ಲೆಟಿಕ್ ಕೂಟ ನಡೆಯಲಿದೆ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಾಲಕರು, ಬಾಲಕಿಯರ 14, 16, 18, 20 ವರ್ಷ ವಯೋಮಿತಿ ಹಾಗೂ ಪುರುಷರು, ಮಹಿಳೆಯರ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ರಾಜ್ಯದ 34 ಜಿಲ್ಲೆಗಳಿಂದ ನೋಂದಾಯಿತ ಕ್ರೀಡಾ ಕ್ಲಬ್, ಕ್ರೀಡಾಶಾಲೆಗಳು, ಬೆಂಗಳೂರಿನ ಎಂ.ಐ.ಜಿ., ಏರ್‌ಫೋರ್ಸ್, ರೈಲ್ವೇ, ಅರಣ್ಯ ಇಲಾಖೆ ಮೊದಲಾದ ತಂಡಗಳು ಭಾಗವಹಿಸಲಿವೆ. ಜೂನಿಯರ್‌ನ 8, ಸೀನಿಯರ್‌ನ 2 ಹೀಗೆ 10 ವಿಭಾಗಗಳಲ್ಲಿ ತಂಡ ಪ್ರಶಸ್ತಿ ಹಾಗೂ ಸಮಗ್ರ ಚಾಂಪಿಯನ್‌ಶಿಪ್‌ಗಾಗಿ ರಾಜ್ಯದ ಸುಮಾರು 2,000 ಮಂದಿ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 500 ಮಂದಿ ಕ್ರೀಡಾಧಿಕಾರಿಗಳು ಸಹಕರಿಸಲಿದ್ದಾರೆ. ಈ ಕೂಟದಲ್ಲಿ ಕ್ರೀಡಾಳುಗಳು ತೋರುವ ನಿರ್ವಹಣೆಯ ಆಧಾರದಲ್ಲಿ ದಕ್ಷಿಣ ವಲಯ ಜೂ. ಕ್ರೀಡಾಕೂಟ, ರಾಷ್ಟ್ರೀಯ ಜೂ. ಕ್ರೀಡಾಕೂಟ ಹಾಗೂ ಮುಕ್ತ ರಾಷ್ಟ್ರೀಯ ಆ್ಯತ್ಲೆಟಿಕ್ ಕ್ರೀಡಾಕೂಟಗಳಿಗೆ ತಂಡದ ಆಯ್ಕೆಯನ್ನು ನಡೆಸಲಾಗುವುದು.
ಸೆ. 4ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಆ್ಯತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಕೂಟಕ್ಕೆ ಚಾಲನೆ ನೀಡಲಿದ್ದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ , ಶಾಸಕ ಕೆ.ಅಭಯಚಂದ್ರ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಹಾಗೂ ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಕೂಟದಲ್ಲಿ ಆಳ್ವಾಸ್ ವತಿಯಿಂದ ಕ್ರೀಡಾಳುಗಳು ಹಾಗೂ ಅಧಿಕಾರಿಗಳ ವಾಸ್ತವ್ಯ, ಊಟೋಪಚಾರ ವ್ಯವಸ್ಥೆಯನ್ನು ಪ್ರಾಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.