ಮುಂಬಯಿ:5 ಅಂತಸ್ತಿನ ಕಟ್ಟಡ ಕುಸಿತ;16 ಸಾವು
Team Udayavani, Aug 31, 2017, 10:02 AM IST
ಮುಂಬಯಿ : ಭಾರಿ ಮಳೆ ಮತ್ತು ನೆರೆಯಿಂತ ತತ್ತರಿಸಿ ಹೋಗಿರುವ ನಗರದ ಭೆಂಡಿ ಬಜಾರ್ ಪ್ರದೇಶದ ಮೌಲಾನಾ ಶೌಕತ್ ಅಲಿ ರಸ್ತೆಯಲ್ಲಿ 5 ಅಂತಸ್ತಿನ ಕಟ್ಟಡವೊಂದು ಗುರುವಾರ ಬೆಳಗ್ಗೆ ಕುಸಿದು ಬಿದ್ದಿದ್ದು 16 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹಲವರು ಅವಶೇಷಷಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು,ಎನ್ಡಿಆರ್ಎಫ್ ಮತ್ತು ಅಗ್ನಿ ಶಾಮಕದಳದ ಸಿಬಂದಿಗಳು ರಕ್ಷಣಾ ಕಾರ್ಯ ನಿರತರಾಗಿದ್ದು ಈಗಾಗಲೇ 28ಕ್ಕೂ ಹೆಚ್ಚು ಜನರನ್ನು ರಕ್ಷಿಸಿರುವ ಬಗ್ಗೆ ವರದಿಯಾಗಿದೆ.
ರಕ್ಷಣಾ ಕಾರ್ಯದ ವೇಳೆ ನಾಲ್ವರು ಅಗ್ನಿಶಾಮಕ ದಳದ ಸಿಬಂದಿಗಳು ಗಾಯಗೊಂಡಿದ್ದಾರೆ.
117 ವರ್ಷಗಳಷ್ಟು ಹಳೆಯ ಕಟ್ಟಡದಲ್ಲಿ 50 ಕ್ಕೂ ಹೆಚ್ಚು ಜನರು ವಾಸವಿದ್ದರು ಎಂದು ತಿಳಿದು ಬಂದಿದೆ. ರಕ್ಷಣೆಗೊಳಗಾದವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಎಲ್ಲಾ ಸಾಧ್ಯತೆಗಳಿವೆ. ಗಾಯಾಳುಗಳಿಗೆ ಸದ್ಯ ಜೆ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ವಾರ ನಗರದ ಸಾಕಿನಾಕಾದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು. ಕಳೆದ ತಿಂಗಳಿನಲ್ಲಿ ಘಾಟ್ಕೋಪರ್ನಲ್ಲಿ ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.