ಸೌಲಭ್ಯ ಕಲ್ಪಿಸಲು ಒತ್ತಾಯ
Team Udayavani, Aug 31, 2017, 3:53 PM IST
ಲಿಂಗಸುಗೂರು: ಸ್ಥಳೀಯ 7ನೇ ವಾರ್ಡಿನ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಅಗತ್ಯ ಸೌಲಭ್ಯ ಇಲ್ಲದೇ ನಿತ್ಯವೂ ನರಕಯಾತನೆ ಅನುಭವಿಸುವಂತಾಗಿದೆ. ಕೂಡಲೇ ಸಮಸ್ಯೆ ಪರಿಹಾರ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಬುಧವಾರ ಪುರಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಜನತಾ ಕಾಲೋನಿಯಲ್ಲಿ ಕಳೆದ ಹಲವು ದಶಕಗಳಿಂದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಮೇಲೆ ತಗ್ಗು ಗುಂಡಿಗಳು ನಿರ್ಮಾಣಗೊಂಡು ಕಲುಷಿತ ನೀರು ನಿಂತು ರೋಗಗಳ ಭೀತಿ ಎದುರಾಗಿದೆ. ಅಲ್ಲದೆ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗಿ ಮಕ್ಕಳು, ವಯೋವೃದ್ಧರು, ಮಹಿಳೆಯರು ಸಂಚರಿಸಲು ತೊಂದರೆ ಎದುರಿಸಬೇಕಾಗುತ್ತದೆ.
ಕಾಲೋನಿಯಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಮಹಿಳೆಯರಿಗೆ ತೊಂದರೆಯಾಗಿದೆ. ಕಾಲೋನಿಯಲ್ಲಿ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ. ವಿಷಜಂತುಗಳ ಆತಂಕದಲ್ಲಿ ತಿರುಗಾಡುವ ಪರಿಸ್ಥಿತಿ ಬಂದಿದೆ. ಹಲವು ಬಾರಿ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷಿಸಲಾಗಿದೆ. ರಸ್ತೆ, ಚರಂಡಿ, ಶೌಚಾಲಯ, ಬೀದಿದೀಪ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಮುಂದಾದರೆ ಮಾತ್ರ ಕಚೇರಿಯಿಂದ
ತೆರಳುತ್ತೇವೆಂದು ನಿವಾಸಿಗಳು ಪಟ್ಟು ಹಿಡಿದರು.
ನಿವಾಸಿಗಳಾದ ಪಾರ್ವತೆಮ್ಮ, ತಿಮ್ಮಣ್ಣ, ವೀರಭದ್ರ, ಹಂಪಮ್ಮ, ನೇಹಾ, ಬಸವರಾಜ, ಶರಣಬಸಪ್ಪ, ಲಕ್ಷ್ಮೀಬಾಯಿ, ಮಹಾಂತೇಶ, ಶಿವರಾಜ, ರೇಣುಕಾ, ಶಮೀಮಬಾನು, ಇಮಾಮಸಾಬ, ಹಂಪಮ್ಮ, ಬಸಮ್ಮ, ಸುನಂದಾ, ಅಂಬಿಕಾ, ಜಯಶ್ರೀ, ಚಾಂದಬೀ, ಶೈಲಾ, ರಜಿಯಾ, ನಿರ್ಮಲಾ,
ದೇವಮ್ಮ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.